ಮುಂಬೈ(ನ.04):ಬುಧವಾರ ಸುಮಾರು ಹನ್ನೆರಡಕ್ಕೂ ಅಧಿಕ ಮಂದಿ ಪತ್ರಕರ್ತ ಅರ್ನಬ್ ಗೋಸ್ವಾಮಿ ಮನೆ ಬಳಿ ತೆರಳಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಅರ್ನಬ್ ಗೋಸ್ವಾಮಿ ಬಂಧನಕ್ಕೆ ಪೊಲೀಸರು ಯಾವುದೇ ಪತ್ರ, ಸಮನ್ಸ್ ನೀಡಿಲ್ಲ ಎನ್ನಲಾಗಿದೆ.

53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಇಂದು ಬೆಳಗ್ಗೆ ಅವರ ನಿವಾಸದಲ್ಲಿ ಬಂಧಿಸಿದ್ದಾರೆ.

ಇಂದು ಬೆಳಗ್ಗೆ ಮುಂಬೈಯಲ್ಲಿರುವ ಅರ್ನಬ್ ಗೋಸ್ವಾಮಿ ನಿವಾಸಕ್ಕೆ ಹಠಾತ್ ದಾಳಿ ನಡೆಸಿದ ಮುಂಬೈ ಪೊಲೀಸರು ಅವರನ್ನು ಬಂಧಿಸಲು ಯತ್ನಿಸಿದರು.

ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲು ಪೊಲೀಸರು ಯತ್ನಿಸಿದರು. ಅಲ್ಲದೆ ತಮ್ಮ ಪತ್ನಿ, ಪುತ್ರ, ಅತ್ತೆ-ಮಾವಂದಿರ ಮೇಲೆ ಕೂಡ ಹಲ್ಲೆ ನಡೆಸಲು ಯತ್ನಿಸಿದರು. ರಿಪಬ್ಲಿಕ್ ಟಿವಿಯಲ್ಲಿ ಬರುತ್ತಿರುವ ವಿಡಿಯೊ ಪ್ರಸಾರದಲ್ಲಿ ಪೊಲೀಸರು ಅರ್ನಬ್ ಗೋಸ್ವಾಮಿ ಮೇಲೆ ಹಲ್ಲೆ ನಡೆಸುತ್ತಿದ್ದಾರೆ.

ನಂತರ ಪೊಲೀಸ್ ವ್ಯಾನಿನಲ್ಲಿ ಅರ್ನಬ್ ಗೋಸ್ವಾಮಿಯವರನ್ನು ಬಂಧಿಸಿ ಕರೆದುಕೊಂಡು ಹೋಗಲಾಗುತ್ತಿದೆ.