ದೇವಸ್ಥಾನದಲ್ಲಿ ನಮಾಜ್ ಮಾಡಿದ ಯುವಕನ ವಿಡಿಯೋ ವೈರಲ್ ಆಗಿದ್ದು, ಆತನನ್ನು ಬಂಧಿಸಲಾಗಿದೆ. ಈ ಘಟನೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದೆ ಎಂದು ಆರೋಪಿಸಲಾಗಿದೆ.

ಲಕ್ನೋ: ಸಾಮಾಜಿಕ ಜಾಲತಾಣದಲ್ಲಿ ಯುವಕನೋರ್ವ ದೇವಸ್ಥಾನದ ಆವರಣದೊಳಗೆ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ಉತ್ತರ ಪ್ರದೇಶದ ಬದೌನ್ ಠಾಣಾ ವ್ಯಾಪ್ತಿಯ ದೇವಸ್ಥಾನದಲ್ಲಿ ನಮಾಜ್ ಮಾಡಿರುವ ಘಟನೆ ನಡೆದಿದೆ. ಈ ವಿಡಿಯೋ ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಜನರು ಶಾಂತಿ ಕಾಪಾಡಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಮುಂಜಾಗ್ರತ ಕ್ರಮವಾಗಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಡಿಯೋ ವೈರಲ್ ಬಳಿಕ ದೇವಸ್ಥಾನದ ಆವರಣದಲ್ಲಿ ನಮಾಜ್ ಮಾಡಿರುವ ಯುವಕನನ್ನು ಬಂಧಿಸಲಾಗಿದೆ. ಈ ಘಟನೆಯನ್ನು ಖಂಡಿಸಿರುವ ಹಿಂದೂ ಸಂಘಟನೆಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುಬೇಕೆಂದು ಪ್ರತಿಭಟನೆಯನ್ನು ನಡೆಸಿವೆ.

ಯಾವ ದೇವಸ್ಥಾನ?

ದತಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಪಡ್ ಗ್ರಾಮದಲ್ಲಿರುವ ಬ್ರಹ್ಮದೇವ್ ದೇವಸ್ಥಾನದ ಆವರಣದಲ್ಲಿ ನಮಾಜ್ ಮಾಡಲಾಗಿದೆ. ಇದೊಂದು ಪುರಾತನ ದೇಗುಲವಾಗಿದ್ದು, ವಿಡಿಯೋ ವೈರಲ್ ಬಳಿಕ ಪ್ರಕರಣ ಮುನ್ನಲೆಗೆ ಬಂದಿದೆ. ಯುವಕ ನಮಾಜ್ ಮಾಡುತ್ತಿರೋದನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ದೇವಸ್ಥಾನದ ಆವರಣದಲ್ಲಿ ನಮಾಜ್ ಮಾಡಿರುವ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವೃತ್ತ ಅಧಿಕಾರಿ ಕೆ.ಕೆ. ತಿವಾರಿ ಭಾನುವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿ ಬಂದ ತಕ್ಷಣ, ದೇವಾಲಯದ ಆವರಣದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸ್ ಪಡೆಗಳನ್ನು ನಿಯೋಜಿಸಲಾಯಿತು ಎಂದು ತಿವಾರಿ ತಿಳಿಸಿದ್ದಾರೆ. ಬಂಧಿತ ಯುವಕನನ್ನು ಅಲಿ ಹಸನ್ ಮೊಹಮ್ಮದ್ ಎಂದು ಗುರುತಿಸಲಾಗಿದೆ.

ಧಾರ್ಮಿಕ ಸ್ಥಳಗಳ ಘನತೆ ಕಾಪಾಡಿ!

ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗಿದೆ. ಆರೋಪಿಯೇ ದೇವಸ್ಥಾನ ಆವರಣದಲ್ಲಿ ನಮಾಜ್ ಮಾಡಿದನೋ ಅಥವಾ ಯಾರಾದ್ರೂ ಆತನಿಗೆ ಪ್ರೇರಣೆ ನೀಡಿದ್ರಾ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕೆ.ಕೆ. ತಿವಾರಿ ಹೇಳಿದ್ದಾರೆ.

ಧಾರ್ಮಿಕ ಸ್ಥಳಗಳ ಘನತೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮೇಲ್ವಿಚಾರಣೆ ನಡೆಸಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಪೊಲೀಸರು ಕಠಿಣ ಕಾನೂನು ಕ್ರಮಗಳನ್ನು ಆರೋಪಿ ವಿರುದ್ಧಮ ಜರುಗಿಸಬೇಕು ಎಂದು ಸ್ಥಳೀಯರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಗ್ರಹಿಸಿದ್ದಾರೆ. ಈ ರೀತಿಯ ಘಟೆನಗಳು ನಡೆಯದಂತೆ ದೇವಸ್ಥಾನದ ಆಡಳಿತ ಮಂಡಳಿಗಳು ಎಚ್ಚರವಹಿಸಬೇಕೆಂದು ಭಕ್ತರು ಸಲಹೆ ನೀಡಿದ್ದಾರೆ.

ಜೂನ್ 28ರಂದು ಹೆಡ್‌ ಕಾನ್ಸ್‌ಟೇಬಲ್‌ ಸುರೇಂದ್ರ ಕುಮಾರ್ ಮತ್ತು ಕಾನ್ಸ್‌ಟೇಬಲ್ ವಿಶ್ವಜಿತ್ ಸಿಂಗ್ ಗಸ್ತು ತಿರುಗುತ್ತಿದ್ದರು. ಈ ವೇಳೆ ಕೆಲವರು ವ್ಯಕ್ತಿಯೋರ್ವ ನಮಾಜ್ ಮಾಡುತ್ತಿರುವ ವಿಡಿಯೋವನ್ನು ತೋರಿಸಿದ್ದಾರೆ. ಸುರೇಂದ್ರ ಕುಮಾರ್ ಮತ್ತು ವಿಶ್ವಜಿತ್ ಸಿಂಗ್ ಪ್ರಕಾರ, ಈ ವಿಡಿಯೋ ಎರಡು ತಿಂಗಳ ಹಿಂದಿನದ್ದು. ಸೋಶಿಯಲ್ ಮೀಡಿಯಾದಲ್ಲಿ ಒಬ್ಬರಿಂದ ಒಬ್ಬರಿಗೆ ಶೇರ್ ಆಗುವ ಮೂಲಕ ವೈರಲ್ ಆಗಿದೆ. ನಮಾಜ್ ಮಾಡಿರುವ ಯುವಕ ದಹರ್‌ಪುರ್ ಕಲಾನ್ ಗ್ರಾಮದ ನಿವಾಸಿಯಾಗಿದ್ದು, ಆತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದೇವಾಲಯದಲ್ಲಿ ಕೆಲಸ ಮಾಡುತ್ತಿರುವ ಅಲಿ

ಪೊಲೀಸರ ವಿಚಾರಣೆಯ ಸಮಯದಲ್ಲಿ, ಹಸನ್ ಅಲಿ ಮೊಹಮ್ಮದ್ ಸುಮಾರು 25-30 ವರ್ಷಗಳಿಂದ ದೇವಾಲಯದ ಆವರಣದಲ್ಲಿ ವಾಸಿಸುತ್ತಿದ್ದು, ದೇವಾಲಯ ಮತ್ತು ಗೋಸೇವೆಯನ್ನು ಸ್ವಚ್ಛಗೊಳಿಸುವಂತಹ ಕೆಲಸ ಮಾಡುತ್ತಿದ್ದಾರೆ ಎಂದು ಜನರು ತಿಳಿಸಿದ್ದಾರೆ. ಹಾಗಾಗಿ ಹಸನ್ ಅಲಿ ಮೊಹಮ್ಮದ್ ಅಲ್ಲಿಯೇ ನಮಾಜ್ ಮಾಡಿರಬಹುದು ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.

Scroll to load tweet…