PM Modi Security Breach: ಪ್ರಧಾನ ಮಂತ್ರಿ ಘನತೆ ಕಾಪಾಡುವುದು ಪ್ರತಿ ಸರ್ಕಾರದ ಕರ್ತವ್ಯ: ಪಟ್ನಾಯಕ್‌

*ಪ್ರಧಾನಿ ನರೇಂದ್ರ ಮೋದಿ  ಭದ್ರಾತ ಲೋಪ 
*ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಟ್ವೀಟ್‌
*ಪ್ರಧಾನ ಮಂತ್ರಿ ಒಂದು ಸಂಸ್ಥೆ:  ಪಟ್ನಾಯಕ್‌ 
 

Narendra Modi Security Lapse The Prime Minister of India is an institution says CM Naveen Patnaik mnj

ನವದೆಹಲಿ (ಜ. 6): ಭಾರತದ ಪ್ರಧಾನ ಮಂತ್ರಿ (Prime Ministter) ಒಂದು ಸಂಸ್ಥೆ ಇದ್ದಂತೆ ಎಂದು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ (Naveen Patnaik) ಹೇಳಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿದೆ.ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ( Security Lapse) ಎನ್ನಿಸಿಕೊಂಡಿದೆ  

ಈ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ " ಭಾರತದ ಪ್ರಧಾನ ಮಂತ್ರಿ ಒಂದು ಸಂಸ್ಥೆ ಇದ್ದಂತೆ. ಯಾವುದೇ ಲೋಪವಿಲ್ಲದ ಭದ್ರತೆಯನ್ನುಒದಗಿಸುವುದು ಮತ್ತು ಈ ಸಂಸ್ಥೆಯ ಘನತೆಯನ್ನು ಕಾಪಾಡುವುದು ಪ್ರತಿ ಸರ್ಕಾರದ ಕರ್ತವ್ಯವಾಗಿದೆ. ನಮ್ಮ ಪ್ರಜಾಪ್ರಭುತ್ವದಲ್ಲಿ ಇದಕ್ಕೆ ವಿರುದ್ಧವಾದುದನ್ನು ಒಪ್ಪಿಕೊಳ್ಳಲಾಗುವುದಿಲ್ಲ" ಎಂದು ಹೇಳಿದ್ದಾರೆ.

 

 


ಜನವರಿ 5, ಬುಧವಾರದಂದು ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದಾರೆ.ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ( Security Lapse) ಎನ್ನಿಸಿಕೊಂಡಿದೆ. ಇದರ ಬೆನ್ನಲ್ಲೇ ಮೋದಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದಾರೆ. ಘಟನೆಯನ್ನು ಅತ್ಯಂತ ಗಂಭೀರ ಎಂದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಪಂಜಾಬ್‌ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದೆ. ಈ ನಡುವೆ, ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಎಂಬ ಸಂಘಟನೆ ಈ ಘಟನೆಯ ಹೊಣೆ ಹೊತ್ತಿದೆ

ಇದನ್ನೂ ಓದಿ: PM Security Lapse ಪಂಜಾಬ್ ಸರ್ಕಾರ, ಪೊಲೀಸರ ಉದ್ದೇಶಿತ ಕೃತ್ಯ, ದೋಗ್ರಾ ಸೇರಿ ಭಾರತದ ಮಾಜಿ DGPಗಳಿಂದ ರಾಷ್ಟ್ರಪತಿಗೆ ಪತ್ರ!

ಇನ್ನು ಇದರ ಬೆನ್ನಲ್ಲೇ ಇದೀಗ ನರೇಂದ್ರ ಮೋದಿ  ರಾಷ್ಟ್ರಪತಿ ರಾಮನಾಥ್ ಕೋವಿಂದ್(President Ram Nath Kovind ) ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಭದ್ರತಾ ಲೋಪದ ಕುರಿತು ಮಾಹಿತಿ ಪಡೆದ ರಾಮನಾಥ್ ಕೋವಿಂದ್ (Ram Nath Kovind), ದೇಶದಲ್ಲಿ ಈ ರೀತಿ ಘಟನೆ ನಡೆದಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ. ಭೇಟಿಯಲ್ಲಿ ಪ್ರಧಾನಿ ಮೋದಿ ಬಳಿಯಿಂದ ಭದ್ರತಾ ಲೋಪದ ಕುರಿತು ಮೊದಲ ಮಾಹಿತಿ ಪಡೆದುಕೊಂಡಿದ್ದಾರೆ. ಅತ್ಯುನ್ನತ ನಾಯಕನಿಗೆ ನೀಡಬೇಕಿದ್ದ ಭದ್ರತೆಯಲ್ಲಿ ಲೋಪವಾಗಲೇಬಾರದು. ಸಣ್ಣ ಲೋಪಕ್ಕೂ ಅವಕಾಶವಿಲ್ಲ. ಹೀಗಿರುವಾಗ ಆತಂಕಕಾರಿ ಬೆಳವಣಿಗೆಯೇ ನಡೆದುಹೋಗಿದೆ ಎಂದು ರಾಮನಾಥ್ ಕೋವಿಂದ್ ಕಳವಳ ವ್ಯಕ್ತಪಡಿಸಿದ್ದಾರೆ. 

 

 

ಭದ್ರತಾ ಲೋಪ?:

ಪಾಕ್‌ ಗಡಿಗೆ ಹೊಂದಿಕೊಂಡ ಫಿರೋಜ್‌ಪುರದಲ್ಲಿ ರ‍್ಯಾಲಿ ಮತ್ತು ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಲುವಾಗಿ ಮೋದಿ ಬುಧವಾರ ಬೆಳಗ್ಗೆ ಪಂಜಾಬ್‌ನ ಬಠಿಂಡಾಕ್ಕೆ ಬಂದಿಳಿದಿದ್ದರು. ಅಲ್ಲಿಂದ ಅವರು ಮೊದಲಿಗೆ ಹುಸೇನಿವಾಲಾಕ್ಕೆ ಕಾಪ್ಟರ್‌ ಮೂಲಕ ತೆರಳಬೇಕಿತ್ತು. ಆದರೆ ಪ್ರತಿಕೂಲ ವಾತಾವರಣ ಇದ್ದ ಹಿನ್ನೆಲೆಯಲ್ಲಿ ಸ್ಥಳದಲ್ಲೇ 20 ನಿಮಿಷ ಕಾದ ಪ್ರಧಾನಿ, ಬಳಿಕ 2 ಗಂಟೆ ಸಮಯ ತೆಗೆದುಕೊಳ್ಳುವ ರಸ್ತೆ ಮಾರ್ಗದಲ್ಲೇ ತೆರಳಲು ನಿರ್ಧರಿಸಿದ್ದರು. ರಸ್ತೆ ಸಂಚಾರಕ್ಕೆ ಎಲ್ಲಾ ಅಗತ್ಯ ಭದ್ರತಾ ಕ್ರಮ ಕೈಗೊಂಡ ಬಗ್ಗೆ ಪಂಜಾಬ್‌ ಡಿಜಿಪಿ ಕೂಡ ಖಚಿತಪಡಿಸಿದ್ದರು.

ಇದನ್ನೂ ಓದಿ: PM Security Lapse ಪ್ರಧಾನಿ ರಕ್ಷಣೆ ಹೇಗೆ? ತಿಳಿದುಕೊಳ್ಳಲೇಬೇಕು ಮೋದಿ ಭದ್ರತೆ ಹೊಣೆ ಹೊತ್ತಿರುವ SPG, ಬ್ಲೂಕ್ ಬುಕ್ ನಿಯಮ!

ಹೀಗೆ ಪ್ರಯಾಣ ಆರಂಭಿಸಿದ ಮೋದಿ, ಹುತಾತ್ಮರ ಸ್ಮಾರಕದಿಂದ 30 ಕಿ.ಮೀ ದೂರದಲ್ಲಿನ ಪ್ಯಾರೇನಾ ಗ್ರಾಮದ ಫ್ಲೈಓವರ್‌ ಒಂದರ ಮೇಲೆ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಎದುರಿನಲ್ಲಿ 20ಕ್ಕೂ ಹೆಚ್ಚು ಪ್ರತಿಭಟನಾಕಾರರ ತಂಡವೊಂದು ವಾಹನಗಳನ್ನು ಅಡ್ಡಗಟ್ಟಿನಿಲ್ಲಿಸಿದ್ದು ಕಂಡುಬಂದಿದೆ. ಕೂಡಲೇ ಪ್ರಧಾನಿ ಬೆಂಗಾವಲು ವಾಹನಗಳು ಸ್ಥಳದಲ್ಲೇ ವಾಹನ ನಿಲ್ಲಿಸಿದವು. ಬಳಿಕ ಸುಮಾರು 20 ನಿಮಿಷ ಪ್ರಧಾನಿ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಸ್ಥಳದಲ್ಲೇ ಆತಂಕದ ಪರಿಸ್ಥಿತಿ ಎದುರಿಸಿದರು. ಆಗ ಸ್ಥಳದಲ್ಲಿನ ಭಾರೀ ಭದ್ರತಾ ಲೋಪ ವಿಶ್ಲೇಷಿಸಿದ ಪ್ರಧಾನಿಗಳ ಭದ್ರತೆಯ ಉಸ್ತುವಾರಿ ಹೊತ್ತಿರುವ ಎಸ್‌ಪಿಜಿ ತಂಡ, ಮೋದಿ ಅವರನ್ನು ಮರಳಿ ವಿಮಾನ ನಿಲ್ದಾಣಕ್ಕೆ ವಾಪಸ್‌ ಕರೆತಂದಿತು. ಪರಿಣಾಮ ತಮ್ಮೆಲ್ಲ ಕಾರ‍್ಯಕ್ರಮ ರದ್ದು ಮಾಡಿ ಮೋದಿ ನವದೆಹಲಿಗೆ ಮರಳಿದರು.

Latest Videos
Follow Us:
Download App:
  • android
  • ios