72 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯ ಬದಲು ಗುಜರಾತ್‌ನ ಕೆವಾಡಿಯಾದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೆಪ್ಟೆಂಬರ್ 22ರಂದು ನಡೆಯಲಿರುವ ಈ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ನವದೆಹಲಿ(ಸೆ.8): 72 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದೆಹಲಿಯ ಬದಲು ಗುಜರಾತ್‌ನ ಕೆವಾಡಿಯಾದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಸೆ.22ರಂದು ನಡೆಯಲಿರುವ ಈ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಕೆವಾಡಿಯಾವನ್ನು ಏಕತಾ ನಗರ್ ಆಗಿ ಮರು ನಾಮಕರಣ ಮಾಡಲಾಗಿದ್ದು, ಇಲ್ಲಿ ವಿಶ್ವದ ಅತೀ ಎತ್ತರದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತೆಯ ಮೂರ್ತಿ ಇದೆ.
1954ರಲ್ಲಿ ಮೊದಲ ಸಮಾರಂಭ ದೆಹಲಿಯಲ್ಲಿ ನಡೆದಿತ್ತು
1954ರಲ್ಲಿ ಮೊದಲ ಸಲ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಸಮಾರಂಭವು ದೆಹಲಿಯ ವಿಜ್ಞಾನ ಭವನದಲ್ಲಿ ಆಯೋಜಿಸಲಾಗಿತ್ತು. ಆ ಬಳಿಕ ಎಲ್ಲಾ ಪ್ರಶಸ್ತಿ ಪ್ರದಾನ ಸಮಾರಂಭಗಳು ದೆಹಲಿಯಲ್ಲೇ ನಡೆಯುತ್ತಿದ್ದವು. ಇದೇ ಮೊದಲ ಬಾರಿಗೆ ಈ ಸಂಪ್ರದಾಯ ಮುರಿದು ಗುಜರಾತ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಆರ್ಟಿಕಲ್ 370 ಅತ್ಯುತ್ತಮ ಚಲನಚಿತ್ರ
ಆರ್ಟಿಕಲ್ 370 ಅತ್ಯುತ್ತಮ ಚಲನಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಯಾಮಿ ಗೌತಮ್ ಅವರು ಅತ್ಯುತ್ತಮ ನಟಿ, ಮಲಯಾಳಂ ಸೂಪರ್‌ಸ್ಟಾರ್ ಮೊಮ್ಮೊಟ್ಟಿ ಮತ್ತು ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಮೊಮ್ಮಟ್ಟಿ ಅವರಿಗೆ ಬ್ರಹ್ಮಯುಗಂ ಮತ್ತು ಕಾರ್ತಿಕ್ ಆರ್ಯನ್ ್ವರಿಗೆ ಚಂದು ಚಾಂಪಿಯನ್ ಚಿತ್ರಕ್ಕಾಗಿ ಈ ಪ್ರಶಸ್ತಿ ದೊರಕಿದೆ.


