ಆಯಿಲ್ ಇಂಡಿಯಾ ಲಿ. ಅಂಡಮಾನ್ ಸಮುದ್ರದಲ್ಲಿ ಹೊಸ ನೈಸರ್ಗಿಕ ಅನಿಲ ಬಾವಿಯನ್ನು ಪತ್ತೆ ಮಾಡಿದೆ. ಅಂಡಮಾನ್ ದ್ವೀಪದ ಪೂರ್ವ ಕರಾವಳಿಯಿಂದ 15 ಕಿ.ಮೀ. ದೂರದಲ್ಲಿರುವ ಶ್ರೀ ವಿಜಯಪುರಂ-3 ಬಾವಿಯಲ್ಲಿ ಅನಿಲದ ಉಪಸ್ಥಿತಿ ದೃಢಪಟ್ಟಿದೆ ಎಂದು ಕೇಂದ್ರ ಸಚಿವ ಹರ್ದೀಪ್ ಪುರಿ ತಿಳಿಸಿದ್ದಾರೆ.

ನವದೆಹಲಿ: ಮಧ್ಯಪ್ರಾಚ್ಯ ಯುದ್ಧದಿಂದ ದೇಶ ಕಚ್ಚಾತೈಲದ ಜತೆ ನೈಸರ್ಗಿಕ ಇಂಧನದ ಕೊರತೆಯನ್ನೂ ಎದುರಿಸುತ್ತಿರುವ ಹೊತ್ತಿನಲ್ಲಿ ಅಂಡಮಾನ್‌ ಸಮುದ್ರದಲ್ಲಿ ನೈಸರ್ಗಿಕ ಅನಿಲವಿರುವ ಇನ್ನೊಂದು ಬಾವಿಯನ್ನು ಆಯಿಲ್ ಇಂಡಿಯಾ ಲಿ. ಪತ್ತೆ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶ್ರೀ ವಿಜಯಪುರಂ-3 ಬಾವಿ

ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಪುರಿ ಅವರು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ‘ಅಂಡಮಾನ್ ದ್ವೀಪದ ಪೂರ್ವ ಕರಾವಳಿಯಿಂದ 15 ಕಿ.ಮೀ. ದೂರದಲ್ಲಿ ತೋಡಲಾದ ಶ್ರೀ ವಿಜಯಪುರಂ-3 ಬಾವಿಯಲ್ಲಿ ನೈಸರ್ಗಿಕ ಅನಿಲ ಪತ್ತೆಯಾಗಿದೆ. 1900 ಮೀಟರ್‌ಗಿಂತಲೂ ಹೆಚ್ಚು ಆಳದಲ್ಲಿರುವ ಬಾವಿಯಲ್ಲಿ ಅನಿಲದ ಉಪಸ್ಥಿತಿಯನ್ನು ಉರಿಯುವಿಕೆಯ ಮೂಲಕ ಖಚಿತಪಡಿಸಿಕೊಳ್ಳಲಾಯಿತು’ ಎಂದು ಬರೆದುಕೊಂಡಿದ್ದಾರೆ.

ಅನಿಲ ಪತ್ತೆಗೆಂದು ಅಂಡಮಾನ್‌ ಸಮುದ್ರದಲ್ಲಿ 3 ಬಾವಿಗಳನ್ನು ತೋಡಲಾಗಿದ್ದು, ಅನಿಲ ಪತ್ತೆಯಾದ 2ನೇ ಬಾವಿ ಇದಾಗಿದೆ.

Scroll to load tweet…

Scroll to load tweet…