Sharad Pawar admitted to hospital: ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅನಾರೋಗ್ಯದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ನವೆಂಬರ್‌ 2ರಂದು ಡಿಸ್ಚಾರ್ಜ್‌ ಆಗುವ ಸಾಧ್ಯತೆಯಿದೆ.

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಆರೋಗ್ಯದಲ್ಲಿ ಏರುಪೇರಾಗಿದ್ದು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪವಾರ್‌ ನವೆಂಬರ್‌ 2ರಂದು ಬಿಡುಗಡೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಶಿರಡಿಯಲ್ಲಿ 4 ಮತ್ತು 5ನೇ ತಾರೀಕು ಪಕ್ಷದ ಕಾರ್ಯಕ್ರಮದಲ್ಲಿ ಶರದ್‌ ಪವಾರ್‌ ಭಾಗಿಯಾಗಲಿದ್ದಾರೆ ಎಂದು ಪಕ್ಷದ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಸಚಿವರಾಗಿಯೂ ಶರದ್‌ ಪವಾರ್‌ ಕಾರ್ಯನಿರ್ವಹಿಸಿದ್ದಾರೆ. ಮಹಾರಾಷ್ಟ್ರ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಶರದ್‌ ಪವಾರ್‌ ಮಹಾ ಘಟ ಬಂಧನವನ್ನು ಮುನ್ನಡೆಸಿದ್ದರು. 

ಫೀನಿಕ್ಸ್‌ನಂತೆ ಎದ್ದು ಬಂದಿದ್ದ ಪವಾರ್‌:

‘ಮಹಾರಾಷ್ಟ್ರದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್‌ (ಎನ್‌ಸಿಪಿ) ಯುಗ ಮುಗಿದೇ ಹೋಯಿತು. ಅದು ಎರಡಂಕಿಯನ್ನೂ ತಲುಪಲ್ಲ’ ಎಂದು ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ನಾಯಕರು ಪ್ರಚಾರ ಮಾಡಿದರು. ಆದರೆ ಈಗ ಚುನಾವಣಾ ಫಲಿತಾಂಶದಲ್ಲಿ ಎನ್‌ಸಿಪಿ 50ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದು, ತಮ್ಮ ಯುಗ ಇನ್ನೂ ಅಂತ್ಯವಾಗಿಲ್ಲ ಎಂಬ ಸಂದೇಶವನ್ನು ವಿರೋಧಿಗಳಿಗೆ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಸಂದೇಶ ರವಾನಿಸಿದ್ದಾರೆ.

ವಕೀಲಿಕೆ ಬಿಟ್ಟು ರಾಜಕೀಯ ಪ್ರವೇಶಿಸಿದ ಫಡ್ನವೀಸ್ ಯಶೋಗಾಥೆ

ಎನ್‌ಸಿಪಿ ನಾಯಕರಿಗೆ ಭೂಗತ ಲೋಕದ ನಂಟು, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಪವಾರ್‌ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ವಿಚಾರಣೆ, ಪ್ರಮುಖ ನಾಯಕರ ಪಕ್ಷಾಂತರ- ಈ ರೀತಿ ಅನೇಕ ಸಮಸ್ಯೆಗಳನ್ನು ಶರದ್‌ ಪವಾರ್‌ ಎದುರಿಸಿದರು. ಆದರೆ ಜನರು ಫಲಿತಾಂಶವನ್ನೇ ಬೇರೆ ರೀತಿ ನೀಡಿದ್ದು, ಮಿತ್ರಪಕ್ಷ ಕಾಂಗ್ರೆಸ್‌ಗಿಂತ ಎನ್‌ಸಿಪಿಗೆ ಹೆಚ್ಚು ಸ್ಥಾನ ಬಂದಿದ್ದು, ವಿಧಾನಸಭೆಯ ಮುಖ್ಯ ವಿಪಕ್ಷವಾಗಿ ಹೊರಹೊಮ್ಮಿದೆ.

ತಮ್ಮದೇ ಪಕ್ಷದ ಸಂಸದರಾಗಿದ್ದ ಶಿವಾಜಿ ಮಹಾರಾಜರ ವಂಶಜ ಉದಯನ್‌ರಾಜೇ ಭೋಂಸ್ಲೆ ಅವರು ಬಿಜೆಪಿ ಸೇರಿ ಸತಾರಾ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಕಣಕ್ಕಿಳಿದಿದ್ದರು. ಭೋಂಸ್ಲೆ ಅವರನ್ನು ಎನ್‌ಸಿಪಿ ಅಭ್ಯರ್ಥಿ ಶ್ರೀನಿವಾಸ ಪಾಟೀಲ್‌ ಸೋಲಿಸಿದ್ದಾರೆ. ಇದೇ ಕ್ಷೇತ್ರದಲ್ಲಿ ಪವಾರ್‌ ಅವರು ಸುರಿವ ಮಳೆಯಲ್ಲೇ ಭಾಷಣ ಮಾಡಿ ಗಮನ ಸೆಳೆದಿದ್ದರು.

ಇದನ್ನೂ ಓದಿ: 100 ಕೋಟಿ ಹಫ್ತಾ ಹಗರಣ: ಮಹಾರಾಷ್ಟ್ರ ಸರ್ಕಾರ ತಲ್ಲಣ!

ಶರದ್ ಪವಾರ್ ಮಳೆಯಲ್ಲಿ ನೆನೆದು ಪ್ರಚಾರ ಮಾಡಿದರು!

ಎನ್‌ಸಿಪಿ ನಾಯಕ ಶರದ್ ಪವಾರ್ ಸುರಿಯುತ್ತಿರುವ ಮಳೆಯಲ್ಲೇ ಪ್ರಚಾರ ಮಾಡಿದ್ದ ಸತಾರಾ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್‌ಸಿಪಿ ಅಭ್ಯರ್ಥಿ ಶ್ರೀನಿವಾಸ್ ಪಾಟೀಲ್ ಗೆಲುವು ಸಾಧಿಸಿದ್ದಾರೆ.