ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ| ಆದಾಯ ತೆರಿಗೆ ಇಲಾಖೆಯಿಂದ ಪವಾರ್‌ಗೆ ನೋಟಿಸ್| ಕೇಂದ್ರಕ್ಕೆ ನನ್ನ ಮೇಲೆ ಲವ್‌, ಅದಕ್ಕೇ ಐಟಿ ನೋಟಿಸ್‌ ಬಂದಿದೆ!

ಮುಂಬೈ(ಸೆ.23): ಚುನಾವಣಾ ಆಯೋಗಕ್ಕೆ ಸಲ್ಲಿಸಲಾದ ಪ್ರಮಾಣಪತ್ರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡುವಂತೆ ಆದಾಯ ತೆರಿಗೆ ಇಲಾಖೆ ತಮಗೆ ನೋಟಿಸ್‌ ಜಾರಿ ಮಾಡಿದೆ ಎಂದು ಎನ್‌ಸಿಪಿ ಪರಮೋಚ್ಚ ನಾಯಕ ಶರದ್‌ ಪವಾರ್‌ ಮಂಗಳವಾರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಅಫಿಡವಿಡ್‌ಗೆ ಸಂಬಂಧಿಸಿದಂತೆ ‘ಸ್ಪಷ್ಟನೆ ಮತ್ತು ವಿವರಣೆ’ಯನ್ನು ಕೇಳಿ ಆದಾಯ ತೆರಿಗೆ ಇಲಾಖೆ ಸೋಮವಾರ ನೋಟಿಸ್‌ ಜಾರಿ ಮಾಡಿದೆ. ಎಲ್ಲರನ್ನೂ ಬಿಟ್ಟು ಅವರು (ಕೇಂದ್ರ ಸರ್ಕಾರ) ನಮ್ಮನ್ನೇ ಪ್ರೀತಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ’ ಎಂದು ವ್ಯಂಗ್ಯವಾಡಿದ್ದಾರೆ.

ಇದೇ ವೇಳೆ ಪುತ್ರಿ, ಸಂಸದೆ ಸುಪ್ರಿಯಾ ಸುಳೆ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮತ್ತು ಪರಿಸರ ಸಚಿವ ಆದಿತ್ಯ ಠಾಕ್ರೆಗೂ ನೋಟಿಸ್‌ ನೀಡಿರುವುದಾಗಿ ತಿಳಿಸಿದ್ದಾರೆ.