ಪಟನಾ/ನವದೆಹಲಿ(ಸೆ.26): ಬಿಹಾರ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಪ್ರಕಟಿಸಿದ ಬೆನ್ನಲ್ಲೇ, ತಕ್ಷಣಕ್ಕೆ ಚುನಾವಣೆ ನಡೆದರೆ ಯಾರು ಗೆಲ್ಲಬಹುದು ಎಂಬುದರ ಕುರಿತು ಎಬಿಪಿ ನ್ಯೂಸ್‌- ಸಿ ವೋಟರ್‌ ಸಮೀಕ್ಷೆಯೊಂದನ್ನು ನಡೆಸಿದೆ.

ಅದರನ್ವಯ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ನಿತೀಶ್‌ 4ನೇ ಸಲ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಮೀಕ್ಷೆ ಭವಿಷ್ಯ ನುಡಿದಿದೆ. 243 ಸಂಖ್ಯಾಬಲದ ವಿಧಾನಸಭೆಯಲ್ಲಿ ಎನ್‌ಡಿಎ ಶೇ.45ರಷ್ಟು ಮತ ಗಳಿಕೆಯೊಂದಿಗೆ 141- 161 ಸೀಟು ಗೆಲ್ಲಲಿದೆ.

ಇನ್ನು ಕಾಂಗ್ರೆಸ್‌ ಮತ್ತು ಆರ್‌ಜೆಡಿ ಪಕ್ಷಗಳು 64-84 ಸೀಟುಗಳು ಮತ್ತು ಇತರ ಪಕ್ಷಗಳು 13-23 ಸ್ಥಾನಗಳನ್ನು ಗೆಲ್ಲಬಹುದು ಎಂದು ಈ ಸಮೀಕ್ಷೆ ತಿಳಿಸಿದೆ.