ನವದೆಹಲಿ (ಡಿ. 24): ಅಕ್ರಮ ಉತ್ಪಾದನಾ ಘಟಕಗಳಲ್ಲಿ ಬೆಂಕಿ ದುರಂತ ಸಂಭವಿಸಿ 43 ಮಂದಿ ಬಲಿಯಾದ ಘಟನೆ ನಡೆದ 15 ದಿನಗಳ ಅಂತರದಲ್ಲಿ ದೆಹಲಿಯಲ್ಲಿ ಮತ್ತೊಂದು ಅಗ್ನಿ ಅನಾಹುತ ನಡೆದಿದೆ. ಮೂವರು ಮಕ್ಕಳು ಸೇರಿದಂತೆ 9ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಮೃತರಲ್ಲಿ ಮೂರು ತಿಂಗಳ ಹಸುಗೂಸು ಕೂಡ ಇದೆ.

ಮಂಗ್ಳೂರು ಗಲಭೆ: ಎರಡು ರೀತಿಯ ತನಿಖೆಗೆ ಸಿಎಂ ಘೋಷಣೆ

ರಾಷ್ಟ್ರ ರಾಜಧಾನಿ ದೆಹಲಿ ಹೊರ ವಲಯದ ಕಿರಾರಿ ಎಂಬಲ್ಲಿ 3 ಅಂತಸ್ತಿನ ವಸತಿ ಹಾಗೂ ವಾಣಿಜ್ಯ ಕಟ್ಟಡದಲ್ಲಿ ಭಾನುವಾರ ಮಧ್ಯರಾತ್ರಿ ಈ ದುರ್ಘಟನೆ ನಡೆದಿದೆ. ಭಾನುವಾರ ಮಧ್ಯರಾತ್ರಿ 12.30ರ ವೇಳೆಗೆ ಕಟ್ಟಡದಲ್ಲಿ ಸಿಲಿಂಡರ್‌ ಸ್ಫೋಟದಿಂದ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿ, 9 ಮಂದಿ ಸಾವನ್ನಪ್ಪಿದ್ದಾರೆ.

ಸುಪಾರಿ ಕೊಟ್ಟು ಪತ್ನಿಯನ್ನು ಕೊಲೆ ಮಾಡಿಸಿದ್ದ ಪತಿ ಸೆರೆ

ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದರು. ಸತತ ನಾಲ್ಕು ಗಂಟೆಗಳ ಕಾಲದ ನಂತರ ಕಟ್ಟಡಕ್ಕೆ ಹೊತ್ತಿಕೊಂಡಿದ್ದ ಬೆಂಕಿಯು ತಹಬದಿಗೆ ತರಲಾಯಿತು ಎಂದು ಅಧಿಕಾರಿಗಳು ತಿಳಿಸಿದರು. ಅಲ್ಲದೆ, ಈ ಕಟ್ಟಡದಲ್ಲಿ ಸುರಕ್ಷತಾ ಕ್ರಮಗಳು ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.

ಘಟನೆ ಕುರಿತು ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಅಲ್ಲದೆ, ಮೃತರ ಕುಟುಂಬಕ್ಕೆ 10 ಲಕ್ಷ ರು. ಪರಿಹಾರ ಘೋಷಿಸಿದರು. ಮತ್ತೊಂದೆಡೆ, ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚದ ಜೊತೆಗೆ, ತಲಾ 1 ಲಕ್ಷ ರು. ಪರಿಹಾರವಾಗಿ ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ತಿಳಿಸಿದರು.