ನವದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಿಗೆ ಕೊರೋನಾ ವೈರಸ್ ತಗುಲಿರುವುದು ದೃಢಪಟ್ಟಿದ್ದು, ರಾಜಕೀಯ ನಾಯಕರ ಆತಂಕಕ್ಕೆ ಕಾರಣವಾಗಿದೆ.

ನವದೆಹಲಿ, (ಜೂನ್, 13): ನವದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ‌ ಭವನದ ಸಿಬ್ಬಂದಿಯೊಬ್ಬರಲ್ಲಿ ಕೋವಿಡ್ -19 ಸೋಂಕು ಇರುವುದು ಶನಿವಾರ ದೃಢಪಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರೂಂ ಬಾಯ್ ಆಗಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ 25 ವರ್ಷದ ಯುವಕನಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ.

ಜೂನ್ 8ರವರೆಗೆ ಕೆಲಸಕ್ಕೆ ಬಂದಿದ್ದ ಈ ವ್ಯಕ್ತಿ ಜ್ವರದಿಂದ ಬಳಲಿದ್ದರಿಂದ ಪರೀಕ್ಷೆಗೆ ಒಳಪಡಿಸಲಾಗಿತ್ತು. ಶನಿವಾರ ಸೋಂಕು ಇರುವುದು ದೃಢಪಟ್ಟಿದೆ.

ಬೆಂಗ್ಳೂರು ಡಾಕ್ಟರ್‌ಗೆ, ಬಿಎಸ್‌ಎಫ್ ಯೋಧನಿಗೆ ಕೊರೋನಾ ಪಾಸಿಟಿವ್

 ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ‌ ಭವನ-1ರಲ್ಲಿ ಈ ವ್ಯಕ್ತಿ ರೂಂ ಬಾಯ್ ಕೆಲಸ ಮಾಡುತ್ತಿದ್ದ. ಇವರ ಸಂಪರ್ಕಕ್ಕೆ ಬಂದಿದ್ದ ಇತರ ಸಿಬ್ಬಂದಿ ಯಾರು ಎಂಬ ಕುರಿತು ಪತ್ತೆ ಮಾಡುವ ಕಾರ್ಯ ನಡೆದಿದೆ.

ದೆಹಲಿಯ ನಿವಾಸಿಯಾಗಿರುವ ಈ ವ್ಯಕ್ತಿಗೆ ಭವನದ ಸಿಬ್ಬಂದಿ ಅಲ್ಲದ, ಇತರರ ಸಂಪರ್ಕದಿಂದ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್

"