ಲವ್ ಜಿಹಾದ್‌ಗೆ ಜೀವಾವಧಿ ಶಿಕ್ಷೆ; ಅಸ್ಸಾಂ ಸಿಎಂ ಹಿಮಂತ್ ಬಿಸ್ವ ಶರ್ಮಾ ಘೋಷಣೆ
ಅಸ್ಸಾಂನಲ್ಲಿ ‘ಲವ್ ಜಿಹಾದ್’ ಮಾಡಿದರೆ ಅಂಥ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ನೀಡಲಾಗುವುದು ಎಂದಿರುವ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ, ಈ ಸಂಬಂಧ ಸರ್ಕಾರ ಶೀಘ್ರ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.
ಗುವಾಹಟಿ (ಆ.5): ಅಸ್ಸಾಂನಲ್ಲಿ ‘ಲವ್ ಜಿಹಾದ್’ ಮಾಡಿದರೆ ಅಂಥ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ನೀಡಲಾಗುವುದು ಎಂದಿರುವ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ, ಈ ಸಂಬಂಧ ಸರ್ಕಾರ ಶೀಘ್ರ ಕಾನೂನು ರೂಪಿಸಲಿದೆ ಎಂದು ಹೇಳಿದ್ದಾರೆ.
ಭಾನುವಾರ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆ ಸಂದರ್ಭದಲ್ಲಿ ‘ಲವ್ ಜಿಹಾದ್’ ಬಗ್ಗೆ ಮಾತನಾಡಿದ್ದೆವು, ಶೀಘ್ರದಲ್ಲೇ ನಾವು ಅಂತಹ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನು ತರುತ್ತೇವೆ ಎಂದರು.ಇದೇ ವೇಳೆ, ಹಿಂದೂ-ಮುಸಲ್ಮಾನರ ನಡುವಿನ ಭೂಮಿ ಮಾರಾಟದ ಬಗ್ಗೆಯೂ ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದ ಸಿಎಂ, ಅಂತಹ ವಹಿವಾಟನ್ನು ತಡೆಯಲು ಸರ್ಕಾರಕ್ಕೆ ಸಾಧ್ಯವಾಗದಿದ್ದರೂ, ವಹಿವಾಟಿಗೂ ಮೊದಲು ಮುಖ್ಯಮಂತ್ರಿಗಳ ಒಪ್ಪಿಗೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.
ಕಲಘಟಗಿಯಲ್ಲಿ ಲವ್ ಜಿಹಾದ್?: ಮತಾಂತರಿಸಿ ಹಿಂದೂ ಮಹಿಳೆ ಮೇಲೆ ಮುಸ್ಲಿಂ ವ್ಯಕ್ತಿ ಹಲ್ಲೆ..!
ಅಸ್ಸಾಂನಲ್ಲಿ ಹುಟ್ಟಿದರಷ್ಟೇ ಸರ್ಕಾರಿ ನೌಕರಿಗುವಾಹಟಿ: ಅಸ್ಸಾಂನಲ್ಲಿ ರಾಜ್ಯ ಸರ್ಕಾರಿ ನೌಕರಿ ಪಡೆಯಲು ಆ ರಾಜ್ಯದಲ್ಲೇ ಜನಿಸಿರಬೇಕು ಎಂಬ ನಿಯಮ ಜಾರಿಗೊಳಿಸಲು ನಿರ್ಧರಿಸಲಾಗಿದೆ.ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಈ ವಿಷಯ ಪ್ರಕಟಿಸಿ, ‘ಶೀಘ್ರದಲ್ಲೇ ಹೊಸ ವಾಸಸ್ಥಳ ನೀತಿಯನ್ನು ಪರಿಚಯಿಸಲಾಗುವುದು, ಅದರ ಅಡಿಯಲ್ಲಿ ಅಸ್ಸಾಂನಲ್ಲಿ ಜನಿಸಿದವರು ಮಾತ್ರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ’ ಎಂದು ಹೇಳಿದರು.
ಮಂಗಳೂರಿನಲ್ಲಿ ಕಾಣೆಯಾಗಿದ್ದ ಹಿಂದೂ ಯುವತಿ ಮುಸ್ಲಿಂ ಜೊತೆ ಪತ್ತೆ, ಯುವಕನ ಹಿನ್ನೆಲೆ ಕೇಳಿ ಶಾಕ್!
ಚುನಾವಣಾ ಪೂರ್ವ ಭರವಸೆಯಂತೆ ಒದಗಿಸಲಾದ ‘ಒಂದು ಲಕ್ಷ ಸರ್ಕಾರಿ ಉದ್ಯೋಗ’ಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ ಎಂದ ಅವರು, ಇದು ಸಂಪೂರ್ಣ ಪಟ್ಟಿಯನ್ನು ಪ್ರಕಟಿಸಿದಾಗ ಸ್ಪಷ್ಟವಾಗುತ್ತದೆ ಎಂದು ನುಡಿದರು.