ಅಯೋಧ್ಯೆ: ಜ.22ಕ್ಕೆ ಪ್ರಧಾನಿ ನರೇಂದ್ರ ಮೋದಿ ಹೊಸ ರಾಮಮಂದಿರ ಉದ್ಘಾಟನೆ ಸಾಧ್ಯತೆ!
ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯವಾದ ರಾಮ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ಜ.22ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ಅಂದೇ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನೂ ಪ್ರತಿಷ್ಠಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಅಯೋಧ್ಯೆ (ಸೆ.10) : ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಭವ್ಯವಾದ ರಾಮ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ವರ್ಷ ಜ.22ರಂದು ಉದ್ಘಾಟನೆ ಮಾಡಲಿದ್ದಾರೆ ಎಂದು ದೇವಸ್ಥಾನದ ಮೂಲಗಳು ತಿಳಿಸಿವೆ. ಅಂದೇ ಗರ್ಭಗುಡಿಯಲ್ಲಿ ಶ್ರೀರಾಮನ ವಿಗ್ರಹವನ್ನೂ ಪ್ರತಿಷ್ಠಾಪಿಸುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್(Arun yogiraj) ರಾಮನ ಸುಂದರ ಮೂರ್ತಿಯನ್ನು ಕೆತ್ತಿದ್ದು ಅದನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು.
ಈ ಹಿಂದಿನ ವರದಿಗಳ ಪ್ರಕಾರ ಡಿಸೆಂಬರ್ ಅಂತ್ಯದ ವೇಳೆಗೆ ರಾಮಮಂದಿರ(Ayodhye ramamandir) ಮೊದಲ ಹಂತ ಪೂರ್ಣಗೊಳ್ಳಲಿದ್ದು, 2023ರ ಸಂಕ್ರಾತಿ ದಿನದಂದು ಗರ್ಭಗುಡಿಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಹೇಳಲಾಗಿತ್ತು.
ರಾಮಾಯಣದಲ್ಲಿ ಹನುಮಂತನಂತೆ, ಈಗ ಮೋದಿ ದೇಶಕ್ಕಾಗಿ ತ್ಯಾಗ ಮಾಡ್ತಿದ್ದಾರೆ: ಯೋಗಿ ಆದಿತ್ಯನಾಥ
ಅಯೋಧ್ಯೆ ರಾಮ ವಿಗ್ರಹ ಪ್ರತಿಷ್ಟಾಪನೆ ವೀಕ್ಷಣೆಗೆ ಈಗಲೇ ಹೋಟೆಲ್ ಬುಕ್
ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀರಾಮನ ವಿಗ್ರಹ ಪ್ರತಿಷ್ಠಾಪನೆಗೆ ಇನ್ನೂ 4 ತಿಂಗಳು ಬಾಕಿ ಇರುವಾಗಲೇ ಸಮಾರಂಭದಲ್ಲಿ ಭಾಗಿಯಾಗಲು ಜನರು ನಗರದ ಹೋಟೆಲ್ ಮತ್ತು ಟ್ರಾವೆಲ್ ಏಜೆನ್ಸಿಗಳಲ್ಲಿ ಮುಂಗಡವಾಗಿ ಬುಕಿಂಗ್ ಶುರು ಮಾಡಿದ್ದಾರೆ.
ಐತಿಹಾಸಿಕ ಕಾರ್ಯಕ್ರಮದಲ್ಲಿ ಭಾಗಿಯಾಗಲು ಕೊಠಡಿ ಮತ್ತು ಬಸ್‌ಗಳು ಸೇರಿದಂತೆ ಹಲವೆಡೆ ಈಗಾಗಲೇ ಜನರು ಭಾರೀ ಪ್ರಮಾಣದಲ್ಲಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ಜ.22ರಂದು ವಿಗ್ರಹ ಪ್ರತಿಷ್ಠಾಪಿಸುವ ಸಾಧ್ಯತೆ ಇದೆ
ರಾಮಮಂದಿರದೊಂದಿಗೆ ರಾಮರಾಜ್ಯ ಸ್ಥಾಪನೆಯಾಗಬೇಕು - ಪೇಜಾವರ ಶ್ರೀ
ಅಯೋಧ್ಯೆ ಜಿಲ್ಲಾಧಿಕಾರಿ ಅತಿಥಿಗಳಿಗೆ ಉತ್ತಮ ಸ್ವಾಗತ ಸಂಬಂಧ ಈಗಾಗಲೇ ಸಭೆ ನಡೆಸಿದ್ದು ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವಂತೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಮಾಲೀಕರಿಗೆ ಸೂಚಿಸಲಾಗಿದೆ. ದೆಹಲಿ, ಬಾಂಬೆ ಕರ್ನಾಟಕ ಮತ್ತು ಇತರ ಪ್ರಮುಖ ನಗರಗಳಿಂದ ಬುಕ್ಕಿಂಗ್‌ಗಾಗಿ ಕರೆ ಬರುತ್ತಿವೆ. ಕೆಲವರು 10 ರಿಂದ 12 ದಿನಗಳ ಕಾಲ ದಿನಗಳವರೆಗೆ ಕೊಠಡಿಗಳನ್ನು ಕಾಯ್ದಿರಿಸುತ್ತಿದ್ದಾರೆ ಎಂದಿದ್ದಾರೆ.