ನವದೆಹಲಿ(ಏ.06): ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ನಾಲ್ಕನೇ ಅಲೆ ಕಾಣಿಸಿಕೊಂಡಿದೆ. ಈ ಮೊದಲಿಗಿಂತಲೂ ಹೆಚ್ಚು ವೇಗವಾಗಿ ಸೋಂಕು ಹಬ್ಬುತ್ತಿದ್ದು, ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿವೆ. ಹೀಗಿರುವಾಗ ಪರಿಸ್ಥಿತಿ ನಿಯಂತ್ರಿಸಲು ಸರ್ಕಾರ ನೈಟ್‌ ಕರ್ಫ್ಯೂ ಜಾರಿಗೊಳಿಸಿದೆ.

ಬಾವಲಿಗಳಿಂದ ಜನರಿಗೆ ಕೊರೋನಾ ವೈರಸ್..! WHO-ಚೀನಾ ಜಂಟಿ ಅಧ್ಯಯನ ವರದಿ

ಕೊರೋನಾ ಅಬ್ಬರ ನಿಯಂತ್ರಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಂಗಳವಾರ, ಏಪ್ರಿಲ್ 6 ರಿಂದ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಏಪ್ರಿಲ್ 6 ರಿಂದ ಏಪ್ರಿಲ್ 30ರವರೆಗೂ ದೆಹಲಿಯಲ್ಲಿ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೂ ಕರ್ಫ್ಯೂ ಜಾರಿಗೊಳಿಸಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರ್ಯಾವುದೇ ಸೌಲಭ್ಯಗಳಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ದೆಹಲಿಯಲ್ಲಿ ಒಂದೇ ದಿನ 3,548 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,79,962ಕ್ಕೆ  ತಲುಪಿದ್ದು, 14,589 ಸಕ್ರಿಯ ಪ್ರಕರಣಗಳಿವೆ.