ವಾಹನಗಳಿಗೆ ಶೀಘ್ರ ತಬಲಾ, ಕೊಳಲು, ಪಿಟೀಲು ಹಾರ್ನ್: ಕರ್ಕಶ ಧ್ವನಿ ತಪ್ಪಿಸಲು ಗಡ್ಕರಿ ಪ್ಲಾನ್!

* ವಾಹನಗಳ ಹಾರ್ನ್‌ ಮಾಡಿದಾಗ ಅದರಿಂದ ಹೊರಹೊಮ್ಮುವ ಕರ್ಕಶ ಧ್ವನಿಗೆ ಬೇಸರ 

* ವಾಹನಗಳಿಗೆ ಶೀಘ್ರ ತಬಲಾ, ಕೊಳಲು, ಪಿಟೀಲು ಹಾರ್ನ್

* ಕರ್ಕಶ ಧ್ವನಿ ತಪ್ಪಿಸಲು ಗಡ್ಕರಿ ಪ್ಲಾನ್!

Nitin Gadkari soon to take decision on changing Horn sound in vehicles pod

ನವದೆಹಲಿ(ಸೆ.04): ವಾಹನಗಳ ಹಾರ್ನ್‌ ಮಾಡಿದಾಗ ಅದರಿಂದ ಹೊರಹೊಮ್ಮುವ ಕರ್ಕಶ ಧ್ವನಿಗೆ ಬೇಸರ ಪಡುವವರೇ ಹೆಚ್ಚು. ಆದರೆ ಮುಂದಿನ ದಿನಗಳಲ್ಲಿ ಇಂಥ ಕರ್ಣಕಠೋರ ಶಬ್ದಕ್ಕೆ ಬದಲಾಗಿ ಭಾರತೀಯ ಸಂಗೀತದ ವಾದ್ಯಗಳು ಕೇಳಿಬರುವ ಸಾಧ್ಯತೆ ಇದೆ! ಅಂದರೆ ತಬಲಾ, ಪಿಟೀಲು, ಕೊಳಲು ಸೇರಿದಂತೆ ನಾನಾ ವಾದ್ಯಗಳ ಮಧುರ ಧ್ವನಿ ಕೇಳಿಬರಲಿದೆ.

ಶಿರಾಡಿ ಘಾಟ್‌ನಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅವಕಾಶ

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ, ‘ನಾನು ನಾಗಪುರದಲ್ಲಿರುವ ಕಟ್ಟಡದಲ್ಲಿ 11ನೇ ಅಂತಸ್ತಿನಲ್ಲಿ ವಾಸಿಸುತ್ತಿದ್ದೇನೆ. ಆದರೂ ಮುಂಜಾನೆ ಪ್ರಾಣಾಯಾಮ ಮಾಡುವಾಗ ವಾಹನಗಳ ಹಾರ್ನ್‌ ಏಕಾಗ್ರತೆ ಹಾಳು ಮಾಡುತ್ತದೆ.

ಶಿರಾಡಿಯಲ್ಲಿ ಲಘು ವಾಹನಗಳಗೆ ಅವಕಾಶ

ಈ ವೇಳೆ ಇಂಥ ಕರ್ಕಶ ಧ್ವನಿಗಳನ್ನು ಸರಿಪಡಿಸುವ ಅಗತ್ಯ ಅರಿವಾಯ್ತು. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ವೇಳೆ ಸಂಗೀತ ವಾದ್ಯಗಳ ಧ್ವನಿ ಅಳವಡಿಕೆ ಬಗ್ಗೆ ಪ್ರಸ್ತಾಪ ಬಂತು. ಅದನ್ನು ಜಾರಿ ಮಾಡುವ ಹಾದಿಯಲ್ಲಿ ಇದೀಗ ಅಧಿಕಾರಿಗಳು ತೊಡಗಿಸಿಕೊಂಡಿದ್ದಾರೆ. ಈ ಸಂಬಂಧ ನಾವು ಹೊಸ ಕಾಯ್ದೆ ಜಾರಿ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

Latest Videos
Follow Us:
Download App:
  • android
  • ios