Breaking: ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ: ಸಂಜೆ ಬಿಜೆಪಿ ಜತೆ ಸೇರಿ ಮತ್ತೆ ಪ್ರಮಾಣ ವಚನ!
ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಂತರ ನಿತೀಶ್ ಕುಮಾರ್ ಭಾನುವಾರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಪಾಟ್ನಾ (ಜನವರಿ 28, 2024): ಬಿಹಾರ ರಾಜಕೀಯ ಭಾರಿ ಕುತೂಹಲ ಕೆರಳಿಸಿದ್ದು, ನಿತೀಶ್ ಕುಮಾರ್ ಬಿಹಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಹಾರ ರಾಜ್ಯಪಾಲರನ್ನು ಭೇಟಿ ಮಾಡಿದ ನಿತೀಶ್ ಕುಮಾರ್ ಅಧಿಕೃತವಾಗಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಆರ್‌ಜೆಡಿ, ಕಾಂಗ್ರೆಸ್, ಎಡರಂಗ ಹಾಗೂ ಜೆಡಿಯು ಮೈತ್ರಿ ಸರ್ಕಾರ ಪತನಗೊಂಡಿದೆ.
ಇನ್ನೊಂದೆಡೆ, ಬಿಜೆಪಿ ಜತೆಗೆ ಸೇರಿ ಇಂದು ಸಂಜೆ ಮತ್ತೆ ಜೆಡಿಯು - ಬಿಜೆಪಿ ಸರ್ಕಾರ ರಚನೆಯಾಗೋದು ಸಹ ಬಹುತೇಕ ಖಚಿತವಾಗಿದೆ. ಭಾನುವಾರ ಸಂಜೆ 4 ಗಂಟೆ ಅಥವಾ 5 ಗಂಟೆಯ ವೇಳೆಗೆ ನಿತೀಶ್ ಕುಮಾರ್ ಮತ್ತೆ ಸಿಎಂ ಆಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಘಟಬಂಧನ್ ಬಿಟ್ಟು ಇಂದು ಮತ್ತೆ ಬಿಜೆಪಿ ತೆಕ್ಕೆಗೆ ನಿತೀಶ್? ಇಂಡಿಯಾ ಮೈತ್ರಿಕೂಟಕ್ಕೆ ಮರಣಶಾಸನ!
ರಾಜಭವನದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ ನಂತರ ನಿತೀಶ್ ಕುಮಾರ್ ಭಾನುವಾರ ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಜನತಾ ದಳ (ಯುನೈಟೆಡ್) ಅನುಭವಿ ಈಗ ಬಿಜೆಪಿಯೊಂದಿಗೆ ಹೊಸ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ ಎಂದು ತಿಳಿದುಬಂದಿದೆ.
ಬಿಹಾರ ರಾಜ್ಯಪಾಲರ ಜತೆ ಮಾತನಾಡಿದ ನಿತೀಶ್ ಕುಮಾರ್, ರಾಜ್ಯದಲ್ಲಿನ ಮಹಾಘಟಬಂಧನ ಸರ್ಕಾರಕ್ಕೆ (ಆರ್‌ಜೆಡಿ, ಕಾಂಗ್ರೆಸ್) ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದಾಗಿ ಹೇಳಿ ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಇದನ್ನು ಓದಿ: ಯಾವುದೇ ಕ್ಷಣದಲ್ಲಿ ನಿತೀಶ್ ರಾಜೀನಾಮೆ! ಭಾನುವಾರ ಮತ್ತೆ ಸಿಎಂ ಆಗಿ ಪ್ರಮಾಣ ವಚನ; ಇಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಪಟ್ಟ?
ಈ ಮಧ್ಯೆ, ರಾಜೀನಾಮೆ ಪತ್ರ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ನಿತೀಶ್ ಕುಮಾರ್, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ದೃಢಪಡಿಸಿದರು. ಅಲ್ಲದೆ, ಮಹಾಘಟಬಂಧನದ ಬಿಹಾರ ಸರ್ಕಾರದಲ್ಲಿ ಯಾವ ಕೆಲಸಗಳೂ ಸರಿಯಾಗಿ ನಡೆಯುತ್ತಿಲ್ಲ, ಇಂಡಿಯ ಮೈತ್ರಿಕೂಟದಲ್ಲೂ ಏನೂ ಆಗ್ತಿಲ್ಲ ಎಂದೂ ನಿತೀಶ್ ಕುಮಾರ್ ಆರೋಪಿಸಿದ್ದಾರೆ. ಇನ್ನು, ಬಿಜೆಪಿ ಜತೆಗೆ ಸರ್ಕಾರ ರಚನೆ ಬಗ್ಗೆ ತುಟಿ ಬಿಚ್ಚಿಲ್ಲ. ಆದರೆ, ಬಿಜೆಪಿ ನೀಡಿರೋ ಬೆಂಬಲದ ಪತ್ರದ ಬಗ್ಗೆ ಅಪ್ಡೇಟ್ ನೀಡೋದಾಗಿಯೂ ಹೇಳಿದ್ದಾರೆ.
ರಾಹುಲ್ ಗಾಂಧಿ ಅವಮಾನ ಮಾಡಿದ್ದಕ್ಕೆ ‘I.N.D.I.A’ ಮೈತ್ರಿಕೂಟಕ್ಕೆ ಸೆಡ್ಡು ಹೊಡೆದ ನಿತೀಶ್! ಮೋದಿ ಜತೆ ಸೇರೋದು ಪಕ್ಕಾನಾ?