ಪಟನಾ(ಜು.05): ಬಿಹಾರ ವಿಧಾನ ಪರಿಷತ್ತಿನ ಹಂಗಾಮಿ ಸಭಾಪತಿ ಅವ್‌ದೇಶ್‌ ನಾರಾಯಣ್‌ ಸಿಂಗ್‌ ಅವರಿಗೆ ಕೊರೋನಾ ಸೋಂಕು ದೃಢಪಟ್ಟಬೆನ್ನಲ್ಲೇ, ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಶನಿವಾರ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮಿತ್‌ ಶಾ ಸಂಧಾನ: ಮಣಿಪುರ ಸರ್ಕಾರ ಪತನದಿಂದ ಬಚಾವ್‌!

ನಿತೀಶ್‌ ಅವರ ಗಂಟಲು ದ್ರವ ಮಾದರಿಯನ್ನು ಇಂದಿರಾಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ಗೆ ಕಳುಹಿಸಿಕೊಡಲಾಗಿದ್ದು, ಭಾನುವಾರ ಫಲಿತಾಂಶ ಬರುವ ನಿರೀಕ್ಷೆ ಇದೆ. ನಿತೀಶ್‌ ಕುಮಾರ್‌ ಮಾತ್ರವಲ್ಲದೆ ಮುಖ್ಯಮಂತ್ರಿ ಕಾರ್ಯಾಲಯದ 15 ಸಿಬ್ಬಂದಿಗಳೂ ಕೊರೋನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೊಸದಾಗಿ ಆಯ್ಕೆಯಾದ ಶಾಸಕರ ಪ್ರಮಾಣವಚನ ಕಾರ‍್ಯಕ್ರಮದಲ್ಲಿ ಅವ್‌ದೇಶ್‌ ನಾರಾಯಣ್‌ ಮತ್ತು ನಿತೀಶ್‌ ಕುಮಾರ್‌ ಒಂದೇ ವೇದಿಕೆ ಹಂಚಿಕೊಂಡಿದ್ದರು.