ಕೋಲ್ಕತ್ತಾ(ಏ. 14): ಪ್ರಧಾನಿ ನರೇಂದ್ರ ಮೋದಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಇಬ್ಬರಿಗೂ ಯಾವುದೇ ವ್ಯತ್ಯಾಸ ಇಲ್ಲ ಎಂದಿದ್ದಾರೆ.

ಪಶ್ಚಿಮ ಬಂಗಾಳದ ಅಸನ್‌ಸೋಲ್‌ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಂಗಳವಾರ ಮಾತನಾಡಿದ ಓವೈಸಿ, ಮಮತಾ ಬ್ಯಾನರ್ಜಿ ಹಾಗೂ ನರೇಂದ್ರ ಮೋದಿ ಅರ್ನ, ತಂಗಿಯಂತೆ. ಇಬ್ಬರೂ ತಮ್ಮ ಹೇಳಿಕೆಗಳಿಂದ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿರುವ ಟಿಎಂಸಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಓವೈಸಿ ಕಳೆದ ಹತ್ತು ವರ್ಷದಲ್ಲಿ ಮುಸಲ್ಮಾನರ ಅಭಿವೃದ್ಧಿಗಾಗಿ ತೆಗೆದುಕೊಂಡ ಕ್ರಮಗಳೇನೆಂದು ಟಿಎಂಸಿ ಪಟ್ಟಿ ಮಾಡಲು. ಸರ್ಕಾರಕ್ಕೆ ಇದು ನನ್ನ ಚಾಲೆಂಜ್ ಎಂದಿದ್ದಾರೆ. 

ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ನಾಲ್ಕು ಹಂತದ ಮತದಾನ ನಡೆದಿದೆ. ಏಪ್ರಿಲ್ 22ರಂದು ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ.