ಭಾರತೀಯರು ಎಂದು ಸಾಬೀತು ಮಾಡಲು ಹಿಂದಿ ಬೇಕಿಲ್ಲ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿಕೆ ತಮಿಳುನಾಡಿನಲ್ಲಿ ಹಿಂದಿ ಹೇರಿಕೆಯನ್ನು ಯಾರೂ ಸಹಿಸುವುದಿಲ್ಲ
ಚೆನ್ನೈ: ಭಾರತೀಯರು ಎಂದು ನಮ್ಮನ್ನು ನಾವು ಸಾಬೀತು ಮಾಡಿಕೊಳ್ಳಲು ಹಿಂದಿ ಕಲಿಬೇಕಾದ ಅಗತ್ಯವಿಲ್ಲ. ರಾಷ್ಟ್ರೀಯ ಸಂಪರ್ಕ ಭಾಷೆಯಾಗುವ ಎಲ್ಲಾ ಅರ್ಹತೆ ತಮಿಳು ಭಾಷೆಗೆ ಇದೆ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವಾಗಲೀ, ಜನರಾಗಲೀ ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಸಂಪರ್ಕ ಭಾಷೆಯಾಗಿ ಹಿಂದಿ ಬಳಕೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯವರೇ ಆದ ಅಣ್ಣಾಮಲೈ ಹೇಳಿಕೆಗೆ ಮಹತ್ವ ಬಂದಿದೆ.
‘ಭಾರತೀಯರು ಎಂದು ಸಾಬೀತು ಮಾಡಲು ಒಂದು ಭಾಷೆಯನ್ನು ಕಲಿಯಬೇಕಾದ ಕಡ್ಡಾಯ ಸ್ಥಿತಿ ಇಲ್ಲ. ಉದ್ಯೋಗ ಅಥವಾ ಜೀವನಕ್ಕೆ ಅಗತ್ಯವಿದ್ದರೆ ಅವರಾಗಿಯೇ ಹಿಂದಿ ಕಲಿಯುತ್ತಾರೆ. ನಾವು ಯಾವುದೇ ಭಾಷೆಯನ್ನು ವಿರೋಧಿಸುತ್ತಿಲ್ಲ. ಆದರೆ ತಮಿಳನ್ನು ಬದಲಾಯಿಸುವ ಯಾವುದೇ ಭಾಷೆ ಹೇರಿಕೆಯನ್ನು ನಾವು ಸಹಿಸುವುದಿಲ್ಲ. ಭಾರತ ವಿಶ್ವಗುರು ಆಗಬೇಕು ಎಂದು ನಾವು ಬಯಸುತ್ತೇವೆ. ಅದೇ ರೀತಿ ತಮಿಳುನಾಡು ಭಾರತದ ಗುರು ಆಗಬೇಕು’ ಎಂದು ಹೇಳಿದ್ದಾರೆ.
Annamalai In Karnataka: ಬೆಳಗಾವಿಯಲ್ಲಿ ಅಣ್ಣಾಮಲೈ, ಬನ್ನಂಜೆ ರಾಜಾ ವಿರುದ್ಧ ಸಾಕ್ಷ್ಯ
ಭಾರತದಲ್ಲಿ (India) ಭಿನ್ನ ರಾಜ್ಯಗಳ ನಾಗರೀಕರು ಪರಸ್ಪರ ಸಂವಹನ ನಡೆಸುವ ವೇಳೆ ಅವರು ಹಿಂದಿಯಲ್ಲೇ (Hindi) ಮಾತನಾಡಬೇಕು. ಇಂಗ್ಲೀಷ್ (English) ಭಾಷೆಯ ಬಳಕೆ ಇಲ್ಲಿ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ (Union Home Minister Amit Shah) ಕೆಲ ದಿನಗಳ ಹಿಂದೆ ಹೇಳಿದ್ದರು.
ಸಂಸದೀಯ ಅಧಿಕೃತ ಭಾಷಾ ಸಮಿತಿಯ ( Parliamentary Official Language Committee) 37 ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾ, ವಿವಿಧ ರಾಜ್ಯಗಳ ನಾಗರಿಕರು ಪರಸ್ಪರ ಸಂವಹನ ನಡೆಸಿದಾಗ ಅವರು ಬಳಸುವ ಭಾಷೆ ಭಾರತೀಯರದ್ದಾಗಿರಬೇಕು ಎಂದು ಹೇಳಿದ್ದಾರೆ. ಹಿಂದಿಯನ್ನು ಇಂಗ್ಲಿಷ್‌ಗೆ ಪರ್ಯಾಯವಾಗಿ ಸ್ವೀಕರಿಸಬೇಕೇ ಹೊರತು ಸ್ಥಳೀಯ ಭಾಷೆಗಳಿಗೆ ಅಲ್ಲ ಎಂದು ಹೇಳಿದ ಕೇಂದ್ರ ಸಚಿವರು, ನಾವು ಇತರ ಸ್ಥಳೀಯ ಭಾಷೆಗಳ ಪದಗಳನ್ನು ಸ್ವೀಕರಿಸಿ ಹಿಂದಿಯನ್ನು ಸುಲಭ ಮಾಡುತ್ತೇವೆಯೇ ಹೊರತು ಅದನ್ನು ಪ್ರಚಾರ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿರುವ ಪ್ರಕಟಣೆಯಲ್ಲಿ ತಿಳಿಸಿದರು. ಈಗ ಅಧಿಕೃತ ಭಾಷೆಯನ್ನು ದೇಶದ ಏಕತೆಯ ಪ್ರಮುಖ ಭಾಗವಾಗಿಸುವ ಸಮಯ ಬಂದಿದೆ ಎಂದು ಹೇಳಿದ್ದರು.
ಅಣ್ಣಾಮಲೈಗೆ ತಿರುಗೇಟು : ಮೇಕೆದಾಟು ಪರ ನಿಂತ ಸಿಎಂಗೆ ಕ್ಷೀರಾಭಿಷೇಕ
ಸರ್ಕಾರ ನಡೆಸುವ ಮಾಧ್ಯಮವೇ ಅಧಿಕೃತ ಭಾಷೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಿರ್ಧರಿಸಿದ್ದಾರೆ ಮತ್ತು ಇದು ಹಿಂದಿಯ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ ಎಂದು ಅಮಿತ್ ಷಾ ಹೇಳಿರುವ ಮಾತು ಸಭೆಯಲ್ಲಿ ಗಮನಸೆಳೆದಿದೆ. ಅಧಿಕೃತ ಭಾಷಾ ಸಮಿತಿಯ ಅಧ್ಯಕ್ಷರಾಗಿರುವ ಕೇಂದ್ರ ಸಚಿವರು, ಸಚಿವ ಸಂಪುಟದ ಶೇ 70 ರಷ್ಟು ಕಾರ್ಯಸೂಚಿಯನ್ನು ಹಿಂದಿ ಭಾಷೆಯಲ್ಲಿ ಸಿದ್ಧಪಡಿಸಲಾಗಿದೆ ಎಂದು ಸದಸ್ಯರಿಗೆ ತಿಳಿಸಿದರು.
