ಕೊರೋನಾ ವೈರಸ್‌ ವಿರುದ್ಧದ ಸಮರ ಸಾರಿರುವ ದೇಶಗಳಲ್ಲಿ ಭಾರತ ಒಂದು ಹೆಜ್ಜೆ ಮುಂದೆ ಇದೆ.  ಇದನ್ನು ಇಡೀ ಜಗತ್ತೆ ಕೊಂಡಾಡಿದೆ. ಇದೀಗ ಭಾರತೀಯರಿಗೊಂದು ಸಂತೋಷದ ಸುದ್ದಿ ಅಂದ್ರೆ 80 ಜಿಲ್ಲೆಯಲ್ಲಿ14 ದಿನಗಳಿಂದ ಕೊರೋನಾ ಕೇಸ್ ಇಲ್ಲ

ನವದೆಹಲಿ, (ಏ.24): ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್‌ ಡೌನ್‌ ಜಾರಿಗೊಳಿಸಲಾಗಿದ್ದು, ಇದರಿಂದ ಕೊರೋನಾ ವೈರಸ್ ಸೋಂಕಿತರ ಏರಿಕೆ ಪ್ರಮಾಣ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು (ಶುಕ್ರವಾರ) ಸುದ್ದಿಗೋಷ್ಠಿಯಲ್ಲಿ ಕೊವಿಡ್-19 ಕುರಿತು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್, ಕಳೆದ 14 ದಿನಗಳಿಂದ ದೇಶದ 80 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಸರಿಯಾದ ಸಮಯಕ್ಕೆ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಮತ್ತು ಇದು ಕೊರೋನಾ ವೈರಸ್ ನಿಯಂತ್ರಿಸುವಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂದರು.

ಕೊರೋನಾ ಹೋರಾಟದಲ್ಲಿ ವಿಶ್ವನಾಯಕನಾಗಿ ಹೊರಹೊಮ್ಮಿದ ಮೋದಿ

ದೇಶಾದ್ಯಂತ ಕರೋನಾ ಸೋಂಕಿತರ ಸಂಖ್ಯೆ 23 ಸಾವಿರಕ್ಕೂ ಹೆಚ್ಚಿದ್ದು, ಒಟ್ಟು ಈವರೆಗೆ 718 ಜನರು ಮೃತಪಟ್ಟಿದ್ದಾರೆ. ಇನ್ನು 4748ಕ್ಕೂ ಜನರು ಈವರೆಗೆ ಸೋಂಕಿನಿಂದ ಪೂರ್ಣ ಗುಣಮುಖರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಲಾಕ್ ಡೌನ್ ಜಾರಿಯಾದ ಕಾರಣ ಕೊರೋನಾ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗಿಲ್ಲ. ಕಳೆದ 24 ಗಂಟೆಯಲ್ಲಿ ದೇಶಾದ್ಯಂತ 1,684 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 23, 077 ಕ್ಕೆ ಏರಿಕೆಯಾಗಿದೆ. ಒಂದು ವೇಳೆ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸದಿದ್ದರೆ ಇದುವರೆಗೆ 73 ಸಾವಿರ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದವು ಎಂದು ಹೇಳಿದರು,

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ನಂತರ ದೆಹಲಿ, ಮಧ್ಯಪ್ರದೇಶ, ರಾಜಸ್ತಾನದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

Scroll to load tweet…