ಕೇಂದ್ರ ಹೆದ್ದಾರಿ ಹಾಗೂ ಸಚಿವ ನಿತಿನ್ ಗಡ್ಕರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ವಾಹನ ಸವಾರರಿಗೆ ಇದೊಂದು ಶುಭ ಸಂದೇಶವಾಗಿದೆ.
ನವದೆಹಲಿ (ಡಿ.18): ರಾಷ್ಟ್ರೀಯ ಹೆದ್ದಾರಿಗಳಲ್ಲಿ ತಡೆ ರಹಿತ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿಟ್ಟಿನಿಂದ ಜಿಪಿಎಸ್ ಆಧಾರಿತ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದೆ. ಇದರಿಂದಾಗಿ ಭಾರತದ ಹೆದ್ದಾರಿಗಳು ಮುಂದಿನ 2 ವರ್ಷಗಳಲ್ಲಿ ಟೋಲ್‌ಬೂತ್ ಮುಕ್ತವಾಗಲಿವೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಅಸೋಚಾಮ್ ಸಂಸ್ಥಾಪನಾ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಪಿಎಸ್ ತಂತ್ರಜ್ಞಾನದ ನೆರವಿನಿಂದಾಗಿ ವಾಹನಗಳ ಚಲನೆಯ ಆಧಾರದ ಮೇಲೆ ಟೋಲ್ ಹಣ ಬ್ಯಾಂಕ್ ಖಾತೆಯಿಂದ ನೇರವಾಗಿ ಕಡಿತವಾಗಲಿದೆ. ಎಲ್ಲಾ ವಾಣಿಜ್ಯಿಕ ವಾಹನಗಳು ವಾಹನ ಕಣ್ಗಾವಲು ವ್ಯವಸ್ಥೆಯ ಅಡಿಯಲ್ಲಿ ಬರಲಿವೆ. ಹಳೆಯ ವಾಹನಗಳಲ್ಲೂ ಜಿಪಿಎಸ್ ತಂತ್ರಜ್ಞಾನವನ್ನು ಅಳವಡಿಸಲು ಸರ್ಕಾರ ಕೆಲವು ಯೋಜನೆಳನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.
ಕೈಗೆಟುಕುವ ದರದ ಬಜಾಜ್ ಪ್ಲಾಟಿನಾ 100 ಕಿಕ್ ಸ್ಟಾರ್ಟ್ ಬೈಕ್ ಬಿಡುಗಡೆ! ...
ಮುಂದಿನ ಮಾರ್ಚ್ ವೇಳೆಗೆ ಟೋಲ್ ಸಂಗ್ರಹ 34,000 ಕೋಟಿ ರು. ತಲುಪಬಹುದು. ಆದರೆ, ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯಿಂದ ಮುಂದಿನ 5 ವರ್ಷಗಳಲ್ಲಿ ಟೋಲ್ ಸಂಗ್ರಹ 1,34,000 ಕೋಟಿ ರು.ಗೆ ಏರಿಕೆ ಆಗಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸುವ ಅಗತ್ಯವಿದೆ ಎಂದು ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 18, 2020, 8:38 AM IST