NTR Jr donates ₹1 crore ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 31 ಜನರು ಸಾವನ್ನಪ್ಪಿದ್ದಾರೆ ಮತ್ತು ವ್ಯಾಪಕ ಹಾನಿ ಸಂಭವಿಸಿದೆ. ಪರಿಹಾರ ಕಾರ್ಯಗಳು ಪ್ರಗತಿಯಲ್ಲಿವೆ ಮತ್ತು ಜೂನಿಯರ್ ಎನ್‌ಟಿಆರ್ ಪರಿಹಾರ ನಿಧಿಗೆ ₹1 ಕೋಟಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಹೈದರಾಬಾದ್‌ (ಸೆ.3): ಭಾರೀ ಪ್ರವಾಹದ ಕಾರಣದಿಂದಾಗಿ ಸಂಕಷ್ಟಕ್ಕೆ ತುತ್ತಾಗಿರುವ ದಕ್ಷಿಣದ ಎರಡು ತೆಲುಗು ರಾಜ್ಯಗಳಾದ ತೆಲಂಗಾಣ ಹಾಗೂ ಆಂಧ್ರಪ್ರದೇಶದಲ್ಲಿ ಈವರೆಗೂ 31 ಮಂದಿ ಸಾವು ಕಂಡಿದ್ದಾರೆ. ಸಾಕಷ್ಟು ರೈಲು ಸೇವೆಗಳು ರದ್ದಾಗಿದ್ದು, ಸರ್ಕಾರದ ಮಟ್ಟದಿಂದ ಪರಿಹಾರ ಕಾರ್ಯಾಚರಣೆಗಳು ಬಹಳ ಜೋರಾಗಿ ನಡೆಯುತ್ತಿದೆ. ಮಳೆಯಿಂದಾಗಿ ಆಂಧ್ರಪ್ರದೇಶದಲ್ಲಿ ಈವರೆಗೂ 4.5 ಲಕ್ಷ ಜನರಿಗೆ ಸಮಸ್ಯೆಯಾಗಿದ್ದು, 31, 238 ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್‌ ಮಾಡಲಾಗಿದೆ. 166 ನಿರಾಶ್ರಿತ ಶಿಬಿರದಲ್ಲಿ ಇವರನ್ನು ಇರಿಸಲಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಮಳೆಯ ಪರಿಣಾಮ ಇನ್ನಷ್ಟು ಭೀಕರವಾಗಿದೆ. ಇನ್ನೊಂದೆಡೆ, ತೆಲಂಗಾಣದಾದ್ಯಂತ 117 ಕ್ಕೂ ಹೆಚ್ಚಿನ ಹಳ್ಳಿಗಳ ರಸ್ತೆಗಳು ಕೊಚ್ಚಿ ಹೋಗಿದ್ದು, ತಿರುಮಲಯಪಾಲೆಂ ಮಂಡಲದಲ್ಲಿ ಕಳೆದ 24 ಗಂಟೆಯಲ್ಲಿ 52.2 ಸೆಂ.ಮೀ ಮಳೆ ಸುರಿದಿದೆ. ಮಳೆಯಿಂದ 5000 ಕೋಟಿ ರು. ಹಾನಿ ಆಗಿದ್ದು, 1.5 ಲಕ್ಷ ಹೆಕ್ಟೇ‌ರ್ ಬೆಳೆ ಹಾನಿ ಆಗಿದೆ ಎನ್ನುವ ಮಾಹಿತಿಗಳಿವೆ. ಇದರ ನಡುವೆ ಸಿನಿಮಾ ಸ್ಟಾರ್‌ಗಳು ಕೂಡ ಆಂಧ್ರ, ತೆಲಂಗಾಣದ ಪ್ರವಾಹಕ್ಕೆ ಮರುಗಿದ್ದಾರೆ.

'ಭಾರೀ ಮಳೆಯಿಂದಾಗಿ ಎರಡು ತೆಲುಗು ರಾಜ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹದಿಂದ ನಾನು ತೀವ್ರವಾಗಿ ಮನನೊಂದಿದ್ದೇನೆ. ಈ ದುರಂತದಿಂದ ತೆಲುಗು ಜನರು ಬೇಗ ಚೇತರಿಸಿಕೊಳ್ಳಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ. ನನ್ನ ಕಡೆಯಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎರಡು ತೆಲುಗು ರಾಜ್ಯಗಳ ಸರ್ಕಾರಗಳು ಪ್ರವಾಹ ವಿಕೋಪದಿಂದ ಪರಿಹಾರಕ್ಕಾಗಿ ಕೈಗೊಂಡ ಕ್ರಮಗಳಿಗೆ ಸಹಾಯ ಮಾಡಲು ತಲಾ 50 ಲಕ್ಷ ದೇಣಿಗೆಯನ್ನು ಘೋಷಿಸುತ್ತಿದ್ದೇನೆ' ಎಂದು ಜೂನಿಯರ್‌ ಎನ್‌ಟಿಆರ್‌ ಟ್ವೀಟ್‌ ಮಾಡಿದ್ದಾರೆ.

ಚಿತ್ರೀಕರಣದ ಮೊದಲ ದಿನವೇ ಎಡವಟ್ಟು; ಗಂಭೀರ ಗಾಯದಿಂದ ಆಸ್ಪತ್ರೆಗೆ ದಾಖಲಾದ ಜೂ NTR

ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಭಾರೀ ಪ್ರಮಾಣದ ಪ್ರವಾಹ ಪರಿಸ್ಥಿತಿ ಎದುರಿಸುತ್ತಿದ್ದು, ಅನೇಕ ಜೀವಗಳನ್ನು ಬಲಿತೆಗೆದುಕೊಂಡಿದೆ. ಪ್ರವಾಹಕ್ಕೆ ಪ್ರತಿಕ್ರಿಯೆಯಾಗಿ, ಹಾನಿಯನ್ನು ಕಡಿಮೆ ಮಾಡಲು ಎನ್‌ಡಿಆರ್‌ಎಫ್‌ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ. ಟಾಲಿವುಡ್ ಸ್ಟಾರ್ ಜೂನಿಯರ್ ಎನ್‌ಟಿಆರ್ ಎರಡೂ ರಾಜ್ಯಗಳ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಅವರು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ತಮ್ಮ ದೇಣಿಗೆಯನ್ನು ಘೋಷಣೆ ಮಾಡಿದ್ದಾರೆ. ನಟ ಭಾರತೀಯ ಪ್ರಜೆಯಾಗಿ ತನ್ನ ಜವಾಬ್ದಾರಿಯನ್ನು ಪ್ರದರ್ಶನ ಮಾಡಿದ್ದು, ಮುಂದಿನ 48 ಗಂಟೆಗಳಲ್ಲಿ ನಿರೀಕ್ಷಿತ ಚಂಡಮಾರುತದ ಬಗ್ಗೆ ಹವಾಮಾನ ಇಲಾಖೆ ಆಂಧ್ರಪ್ರದೇಶಕ್ಕೆ ಎಚ್ಚರಿಕೆ ನೀಡಿದೆ.

ವೀರಭದ್ರ ದೇಗುಲಕ್ಕೆ ಸೈಲೆಂಟಾಗಿ 12.5 ಲಕ್ಷ ರೂ. ದೇಣಿಗೆ ನೀಡಿದ ಜ್ಯೂನಿಯರ್​ ಎನ್​ಟಿಆರ್​

ಜೂನಿಯರ್‌ ಎನ್‌ಟಿಆರ್‌ ರಾಜ್ಯಗಳಿಗೆ ಹಾನಿಯಾದ ಸಂದರ್ಭದಲ್ಲಿ ದೇಣಿಗೆ ನೀಡುತ್ತಿರುವುದು ಇದು ಮೊದಲೇನಲ್ಲ. 2020ರಲ್ಲಿ ಹೈದಾರಾಬಾದ್‌ ಪ್ರವಾಹಕ್ಕೆ ಸಿಲುಕಿದ್ದಾಗ ತೆಲಂಗಾಣದ ಸಿಎಂ ರಿಲೀಫ್‌ ಫಂಡ್‌ಗೆ 50 ಲಕ್ಷ ರೂಪಾಯಿ ದಾನ ಮಾಡಿದ್ದರು. ಆ ವೇಳೆ ಮಹೇಶ್‌ ಬಾಬು ಕೂಡ 1 ಕೋಟಿ ರೂಪಾಯಿ ನೀಡಿದ್ದರು. ಅಂದು ಚಿರಂಜೀವಿ ಕೂಡ 1 ಕೋಟಿ ರೂಪಾಯಿ ದೇಣಿಗೆ ನೀಡಿದ್ದರು.

Scroll to load tweet…