ನವದೆಹಲಿ[ಮಾ.17]: ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸೋಮವಾರ ಮತ್ತೆ 13 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ದೇಶದಲ್ಲಿ ಸೋಂಕಿತರ ಸಂಖ್ಯೆ 123ಕ್ಕೇರಿದೆ.

ಈವರೆಗೆ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರದ ಮುಂಬೈನಲ್ಲಿ ಹೊಸದಾಗಿ 6 ಮಂದಿಗೆ ಸೋಂಕು ತಗುಲಿದೆ. ಒಡಿಶಾದಲ್ಲಿ ಇದೇ ಮೊದಲ ಬಾರಿ ಇಟಲಿಯಿಂದ ಮರಳಿದ ಒಬ್ಬನಲ್ಲಿ ಕೊರೋನಾ ಪತ್ತೆಯಾಗಿದೆ. ಇನ್ನು ಬೆಂಗಳೂರು, ಲಡಾಖ್‌, ಜಮ್ಮು-ಕಾಶ್ಮೀರ ಹಾಗೂ ಕೇರಳದಲ್ಲಿ ತಲಾ 3 ಕೊರೋನಾ ಕೇಸುಗಳು ಖಚಿತಪಟ್ಟಿವೆ.

ಈ 123 ಪ್ರಕರಣಗಳಲ್ಲಿ ಇಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಆದರೆ ಸಮಾಧಾನದ ವಿಚಾರದಲ್ಲಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಅತಿ ಹೆಚ್ಚು ಪ್ರಕರಣಗಳು (39) ಮಹಾರಾಷ್ಟ್ರದಲ್ಲಿ ದಾಖಲಾಗಿವೆ.