Asianet Suvarna News Asianet Suvarna News

ಮಹಾರಾಷ್ಟ್ರದ ಸತಾರಾದಲ್ಲಿ ಕೋಮುಗಲಭೆಗೆ 1 ಬಲಿ, ಇಬ್ಬರಿಗೆ ಗಾಯ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಗ್ರಾಮವೊಂದರಲ್ಲಿ 2 ಸಮುದಾಯಗಳ ನಡುವೆ ಕೋಮು ಸಂಘರ್ಷ ಉಂಟಾಗಿದ್ದು, ಘಟನೆಯಲ್ಲಿ ಒರ್ವ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ.

objectionable post on social media communal clash broke out between 2 communities in a village of Satara district of Maharashtra 1 killed akb
Author
First Published Sep 12, 2023, 10:00 AM IST


ಪುಣೆ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಬರಹಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಗ್ರಾಮವೊಂದರಲ್ಲಿ 2 ಸಮುದಾಯಗಳ ನಡುವೆ ಕೋಮು ಸಂಘರ್ಷ ಉಂಟಾಗಿದ್ದು, ಘಟನೆಯಲ್ಲಿ ಒರ್ವ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಖಟಾವೋ ತಾಲೂಕಿನ ಪುಸೇಸ್ವಾಲಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಸಂಘರ್ಷ ಉಂಟಾಗಿದ್ದು, ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್ನೆಟ್‌ ಸಂಪರ್ಕ ನಿರ್ಬಂಧಿಸಲಾಗಿದೆ. ಸಂಘರ್ಷದಿಂದಾಗಿ ಕೆಲವು ಮನೆಗಳು ಹಾನಿಗೊಳಗಾಗಿದ್ದು, ಕೆಲವು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.  ಸಾಮಾಜಿಕ ಜಾಲತಾಣದಲ್ಲಿ ಯುವಕನೊಬ್ಬ ಬರೆದ ಆಕ್ಷೇಪಾರ್ಹ ಪೋಸ್ಟ್‌ ಗ್ರಾಮದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು. ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಮುಂಬೈ ಕೇಂದ್ರಾಡಳಿತ ಪ್ರದೇಶ ಮಾಡಲು ಕೇಂದ್ರ ಹುನ್ನಾರ

ಮುಂಬೈ: ಮುಂಬೈ ಮಹಾನಗರವನ್ನು ಮಹಾರಾಷ್ಟ್ರ (maharashtra)ರಾಜ್ಯದಿಂದ ಪ್ರತ್ಯೇಕಿಸಿ ಅದನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸುವುದೇ ವಿಶೇಷ ಸಂಸತ್‌ ಅಧಿವೇಶನ ಕರೆದಿರುವ ಹಿಂದಿನ ಉದ್ದೇಶವಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಆರೋಪಿಸಿದ್ದಾರೆ.  ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪಟೋಲೆ ‘ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಕೋವಿಡ್‌ ಸಾಂಕ್ರಾಮಿಕದ ಸಮಯದಲ್ಲಾಗಲೀ, ನೋಟ್‌ ಬ್ಯಾನ್‌ ಅಥವಾ ಮಣಿಪುರ ಹಿಂಸೆ ವಿಚಾರವಾಗಿ ಎಂದಿಗೂ ವಿಶೇಷ ಅಧಿವೇಶನ ಕರೆದಿಲ್ಲ. ಇದೀಗ ಸರ್ಕಾರದ ಇಚ್ಛೆ ಮತ್ತು ಆಸಕ್ತಿಗನುಗುಣವಾಗಿ ಅಧಿವೇಶನ ಕರೆಯಲಾಗಿದೆ. ಈ ಅಧಿವೇಶನದಲ್ಲಿ ಮುಂಬೈಯನ್ನು ಮಹಾರಾಷ್ಟ್ರದಿಂದ ಪ್ರತ್ಯೇಕಿಸಿ ಕೇಂದ್ರಾಡಳಿತ (Union Territory) ಪ್ರದೇಶವೆಂದು ಘೋಷಿಸುವ ಸಾಧ್ಯತೆ ಇದೆ ಎಂದು ಕಿಡಿಕಾರಿದರು.

ಜಿ20 ಔತಣಕ್ಕೆ ಮಮತಾ ಬ್ಯಾನರ್ಜಿ ಹೋಗಿದ್ದಕ್ಕೆ ಕಾಂಗ್ರೆಸ್‌ ಆಕ್ಷೇಪ

ಇದಲ್ಲದೆ, ಬಾಂಬೆ ಷೇರು ಪೇಟೆ (Bombay stock exchange) ಹಾಗೂ ರಾಷ್ಟ್ರೀಯ ಷೇರು ಪೇಟೆಗಳನ್ನು ಗುಜರಾತ್‌ಗೆ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಏರ್‌ ಇಂಡಿಯಾ (Air India), ಅಂತಾರಾಷ್ಟ್ರೀಯ ಹಣಕಾಸು ಕೇಂದ್ರ ಕಚೇರಿಗಳು ಮತ್ತು ವಜ್ರದ ಮಾರುಕಟ್ಟೆಯನ್ನು ನಗರದಿಂದ ಸ್ಥಳಾಂತರಿಸಲಾಗುತ್ತಿದೆ ಎಂದು ಕಿಡಿಕಾರಿದರು. ಸೆ.18ರಿಂದ 22ರವರೆಗೆ ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ.

ನಾಯ್ಡು ಬಂಧನ ವಿರೋಧಿಸಿದ್ದ ಆಂಧ್ರ ಬಂದ್‌ ನೀರಸ

ಅಮರಾವತಿ: ಬಹುಕೋಟಿ ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು (Chandrbabu naidu) ಬಂಧನ ವಿರೋಧಿಸಿ ತೆಲುಗು ದೇಶಂ ಪಕ್ಷ (ಟಿಡಿಪಿ) ನೀಡಿದ್ದ ರಾಜ್ಯಾದ್ಯಂತ ಬಂದ್‌ ಕರೆಗೆ ಆಂಧ್ರ ಪ್ರದೇಶದಲ್ಲಿ ಸೋಮವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ಹಲವೆಡೆ ಎಂದಿನಂತೆಯೇ ವ್ಯಾಪಾರ ವಹಿವಾಟುಗಳು ಪ್ರಾರಂಭವಾಗಿದ್ದವು ಹಾಗೂ ಇದೇ ವೇಳೆ ಕೆಲವೆಡೆ ಪ್ರತಿಭಟನೆ ನಡೆಸುತ್ತಿದ್ದ ಪಕ್ಷದ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದ್ದಾರೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಶಂಖ ಬ್ರತಾ ಬಾಗ್ಚಿ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತರ ಘಟನೆಗಳು ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ. ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ವಿಜಯವಾಡ ಸ್ಥಳೀಯ ನ್ಯಾಯಾಲಯವು ಚಂದ್ರಬಾಬು ಅವರನ್ನು ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನು ವಿರೋಧಿಸಿ ಟಿಡಿಪಿಯು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿತ್ತು. ಆದರೆ ಇದಕ್ಕೆ ಸಾರ್ವಜನಿಕರ ಸಕ್ರಿಯ ಪ್ರತಿಕ್ರಿಯೆ ಇಲ್ಲದಿರುವುದು ಪಕ್ಷಕ್ಕೆ ಮುಜುಗರವಾಗಿದೆ ಎನ್ನಲಾಗಿದೆ.

ಬಿಜೆಪಿ ವಿಷ ಸರ್ಪವಿದ್ದಂತೆ, ಅದನ್ನು ರಾಜ್ಯದಿಂದ ಅಟ್ಟಾಡಿಸಿ ಓಡಿಸಬೇಕು: ಉದಯನಿಧಿ

Follow Us:
Download App:
  • android
  • ios