ಜೂ.2ರಂದು ಸಂಭವಿಸಿದ 292 ಜನರ ಸಾವಿಗೆ ಕಾರಣವಾದ ತ್ರಿವಳಿ ರೈಲು ದುರಂತದ ವಿಚಾರಣೆ ನಡೆಸುತ್ತಿರುವ ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಗ್ನಲ್‌ ಜೂನಿಯರ್‌ ಎಂಜಿನಿಯರ್‌ನನ್ನು ವಿಚಾರಣೆಗೆ ಒಳಪಡಿಸಿದೆ. ಅಲ್ಲದೇ ಹೆಚ್ಚಿನ ತನಿಖೆಗಾಗಿ ಆತನ ಮನೆಯನ್ನು ಸೀಲ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭುವನೇಶ್ವರ: ಜೂ.2ರಂದು ಸಂಭವಿಸಿದ 292 ಜನರ ಸಾವಿಗೆ ಕಾರಣವಾದ ತ್ರಿವಳಿ ರೈಲು ದುರಂತದ ವಿಚಾರಣೆ ನಡೆಸುತ್ತಿರುವ ಸಿಬಿಐ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಗ್ನಲ್‌ ಜೂನಿಯರ್‌ ಎಂಜಿನಿಯರ್‌ನನ್ನು ವಿಚಾರಣೆಗೆ ಒಳಪಡಿಸಿದೆ. ಅಲ್ಲದೇ ಹೆಚ್ಚಿನ ತನಿಖೆಗಾಗಿ ಆತನ ಮನೆಯನ್ನು ಸೀಲ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆ ನಡೆಸುತ್ತಿರುವ ಸಿಬಿಐನ ಐವರು ಅಧಿಕಾರಿಗಳ ತಂಡ ಸೋಮವಾರ ಎಂಜಿನಿಯರ್‌ ಮನೆಯ ಮೇಲೆ ದಾಳಿ ನಡೆಸಿ ಮನೆಯಲ್ಲಿ ದಾಖಲೆಗಳಿಗಾಗಿ ಹುಡುಕಾಟ ನಡೆಸಿದ್ದು, ಸೀಲ್‌ ಮಾಡಿದ್ದಾರೆ. ಅಲ್ಲದೆ ಎಂಜಿ​ನಿ​ಯ​ರ್‌​ನನ್ನು ಅಜ್ಞಾತ ಸ್ಥಳ​ದಲ್ಲಿ ವಿಚಾ​ರಣೆ ಮಾಡ​ಲಾ​ಗಿದೆ. ಹೆಚ್ಚಿನ ವಿಚಾ​ರ​ಣೆಗೆ ಆತ​ನನ್ನು ಮನೆಗೂ ಕರೆ​ತ​ರ​ಬ​ಹುದು ಎಂದು ವರ​ದಿ​ಗಳು ಹೇಳಿ​ವೆ.

ಈ ನಡುವೆ, ಎಂಜಿನಿಯರ್‌ ಘಟನೆ ನಡೆದಾಗಿನಿಂದ ತಲೆಮರೆಸಿಕೊಂಡಿದ್ದಾನೆ ಎಂಬ ವದಂತಿಗಳು ಹರ​ಡಿ​ದ್ದವು. ಆದರೆ ಅದನ್ನು ತಳ್ಳಿಹಾಕಿರುವ ರೈಲ್ವೆ ವಕ್ತಾ​ರರು, ‘ಯಾವ ಸಿಬ್ಬಂದಿಯೂ ನಾಪ​ತ್ತೆ​ಯಾ​ಗಿಲ್ಲ. ಎಲ್ಲರೂ ಸಿಬಿಐ ಹಾಗೂ ರೈಲ್ವೆ ಸುರ​ಕ್ಷತಾ ಆಯು​ಕ್ತರ ತನಿ​ಖೆಗೆ ಸಹ​ಕ​ರಿ​ಸು​ತ್ತಿ​ದ್ದಾ​ರೆ ಎಂದಿ​ದ್ದಾ​ರೆ. ವಿಚಾ​ರ​ಣೆಗೆ ಒಳ​ಪಟ್ಟ ಎಂಜಿ​ನಿ​ಯರ್‌, ಸಿಗ್ನ​ಲಿಂಗ್‌ ಉಪ​ಕ​ರ​ಣ​ಗಳ ಅಳ​ವ​ಡಿಕೆ, ನಿರ್ವ​ಹಣೆ ಹಾಗೂ ದುರ​ಸ್ತಿಯ ಹೊಣೆ ಹೊತ್ತಿ​ದ್ದರು. ರೈಲು ದುರಂತ​ದಲ್ಲಿ 292 ಜನರು ಮೃತ​ಪಟ್ಟು, 11 00 ಜನರು ಗಾಯ​ಗೊಂಡಿ​ದ್ದ​ರು. ಘಟ​ನೆಗೆ ಸಿಗ್ನಲ್‌ ವ್ಯವ​ಸ್ಥೆ​ಯ​ಲ್ಲಿನ ವೈಫ​ಲ್ಯವೇ ಕಾರಣ ಎಂದು ಆರೋ​ಪಿ​ಸ​ಲಾ​ಗಿ​ತ್ತು.


ಒಡಿಶಾ ರೈಲು ದುರಂತ: ಗುರುತೇ ಸಿಗದೆ ಅನಾಥವಾದ 83 ಶವ; ಕೃತಕ ಬುದ್ಧಿಮತ್ತೆ ಬಳಸಿ ಮೃತರ ಗುರುತು ಪತ್ತೆಗೆ ಯತ್ನ

ಒಡಿಶಾದಲ್ಲಿ ತ್ರಿವಳಿ ರೈಲು ದುರಂತದಲ್ಲಿ ಮೃತರಾದ 83 ಜನರ ಮೃತದೇಹಗಳ ಗುರುತು ಪತ್ತೆ ಸಾಧ್ಯವಾಗಿಲ್ಲ. ಹೀಗಾಗಿ ತಮ್ಮವರನ್ನು ಕಳೆದುಕೊಂಡವರು ಇನ್ನೂ ಶವಗಳ ಅಂತ್ಯಸಂಸ್ಕಾರ ಮಾಡಲಾಗದೇ ಪರಿತಪಿಸುವಂತಾಗಿದೆ. ಅಪಘಾತದ ತೀವ್ರತೆಗೆ ಹಲವು ಶವಗಳು ಗುರುತು ಪತ್ತೆಯಾಗದ ರೀತಿಯಲ್ಲಿ ನಜ್ಜುಗುಜ್ಜಾಗಿರುವುದು, ಮೃತರ ಬಳಿ ಯಾವುದೇ ಗುರುತಿನ ವಸ್ತುಗಳು ಪತ್ತೆಯಾಗದೇ ಇರುವುದು ಅಥವಾ ವಾರಸುದಾರರು ಬರದೇ ಇರುವುದು ಶವಗಳ ಗುರುತು ಪತ್ತೆಗೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ನಡುವೆ ಘಟನೆಯಲ್ಲಿ ಮೃತ 288 ಜನರ ಗುರುತು ಪತ್ತೆಗೆ ರೈಲ್ವೆ ಅಧಿಕಾರಿಗಳು ಕೃತಕ ಬುದ್ಧಿಮತ್ತೆ ವ್ಯವಸ್ಥೆಯನ್ನು ಬಳಕೆ ಮಾಡಿದ್ದಾರೆ. ಸಂಚಾರ್‌ ಸಾರಥಿ ಮತ್ತು ಸಿಮ್‌ಕಾರ್ಡ್‌ ಟ್ರಯಾಂಗ್ಯುಲೇಷನ್‌ ಮಾದರಿ ಬಳಸಿದ ಕಾರಣ ಇದುವರೆಗೂ 45 ಶವಗಳ ಗುರುತು ಸಾಧ್ಯವಾಗಿದೆ. ಇನ್ನೂ 83 ಶವಗಳ ಗುರುತು ಪತ್ತೆಯಾಗಿಲ್ಲ.

ಒಡಿಶಾ ರೈಲು ಅಪಘಾತದಲ್ಲಿ ಜೀವ ಉಳಿದರೂ, ವಾಪಸ್‌ ಮನೆಗೆ ಬರುವ ಮೊದಲೇ ಪ್ರಾಣ ಹೋಯ್ತು

ಘಟನೆ ನಡೆದ ಬಳಿಕ ಆಧಾರ್‌ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಸಿ, ಬೆರಳಚ್ಚುಗಳ ಮೂಲಕ ಶವಗಳ ಗುರುತು ಪತ್ತೆಗೆ ರೈಲ್ವೆ ಅಧಿಕಾರಿಗಳು ಯತ್ನಿಸಿದ್ದರು. ಆದರೆ ಘಟನೆಯಲ್ಲಿ ಹಲವರ ಬೆರಳಿಗೆ ಘಾಸಿಯಾಗಿದ್ದ ಕಾರಣ ಆ ವಿಧಾನ ಪೂರ್ಣ ಯಶಸ್ವಿಯಾಗಿರಲಿಲ್ಲ. ಹೀಗಾಗಿ ಅಧಿಕಾರಿಗಳು ಅಂತಿಮವಾಗಿ ಕೃತಕ ಬುದ್ಧಿಮತ್ತೆಯಡಿಯಲ್ಲಿ ಕೆಲಸ ಮಾಡುವ ಸಂಚಾರ್‌ ಸಾಥಿ ಪೋರ್ಟಲ್‌ ಬಳಸಿಕೊಂಡು ಮೃತರ ಪತ್ತೆ ಮಾಡುತ್ತಿದ್ದಾರೆ. ಇದರಡಿಯಲ್ಲಿ 64 ಮೃತದೇಹಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 45 ಮೃತದೇಹಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಏನಿದು ಸಂಚಾರ್‌ ಸಾಥಿ?:
ಗ್ರಾಹಕರು ಪಡೆದುಕೊಂಡಿರುವ ಮೊಬೈಲ್‌ ಕನೆಕ್ಷನ್‌ಗಳ ಮಾಹಿತಿಯನ್ನು ಇದು ಒದಗಿಸಲಿದ್ದು, ಕಳೆದು ಹೋದ ಮೊಬೈಲ್‌ಗಳನ್ನು ಟ್ರ್ಯಾಕ್‌ ಮತ್ತು ಬ್ಲಾಕ್‌ ಮಾಡಲು ಸಹಾಯ ಮಾಡುತ್ತದೆ. ಈ ಪೋರ್ಟಲ್‌, ಬಳಕೆದಾರರ ಫೋಟೋ ಆಧಾರವಾಗಿಟ್ಟುಕೊಂಡು ಅವರ ಮೊಬೈಲ್‌ ನಂಬರ್‌ ನಂಬರ್‌ ಮತ್ತು ಆಧಾರ್‌ ಕಾರ್ಡ್‌ ಮಾಹಿತಿಯನ್ನು ಪತ್ತೆ ಹಚ್ಚುತ್ತದೆ. ಈ ಮಾಹಿತಿ ಆಧರಿಸಿ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಲಾಗಿದೆ. ಇದರ ಜೊತೆಗೆ ಅಪಘಾತಕ್ಕೂ ಸಮೀಪದ ಮೊಬೈಲ್‌ ಟವರ್‌ಗಳ ಮೂಲಕ ಮಾಡಲಾದ ಕರೆಯನ್ನು ಮೊಬೈಲ್‌ ನಂಬರ್‌ನೊಂದಿಗೆ ಹೊಂದಾಣಿಕೆ ಮಾಡಿ ಮತ್ತು ಘಟನೆ ನಡೆದ ಬಳಿಕ ಸ್ವಿಚಾಫ್‌ ಆದ ಸಂಖ್ಯೆಯನ್ನು ಪತ್ತೆ ಮಾಡಿ ಅವುಗಳ ಮೂಲಕವೂ ಗುರುತು ಪತ್ತೆ ಮಾಡಲಾಗುತ್ತಿದೆ.

ಕೋರಮಂಡಲ್‌ ಎಕ್ಸ್‌ಪ್ರೆಸ್‌ ದುರಂತದ ಶವಗಳನ್ನು ಇಟ್ಟ ಶಾಲೆಯನ್ನು ಧ್ವಂಸ ಮಾಡಿದ ಸರ್ಕಾರ!