ಕೆವಾಡಿಯಾ(ನ.27): ಪದೇ ಪದೇ ಚುನಾವಣೆ ನಡೆಯುವುದರಿಂದ ಅಭಿವೃದ್ಧಿ ಕಾರ್ಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ ಒಂದು ದೇಶ, ಒಂದು ಚುನಾವಣೆ ಯೋಜನೆ ಜಾರಿ ಬಗ್ಗೆ ಮತ್ತೊಮ್ಮೆ ಪ್ರತಿಪಾದಿಸಿದ್ದಾರೆ. ಒಂದೇ ಮತದಾರರ ಪಟ್ಟಿಯ ಬಗ್ಗೆಯೂ ಬ್ಯಾಟ್‌ ಬೀಸಿದ್ದಾರೆ.

ಹೊಸ ನೀತಿ, ರೀತಿಯಡಿ ಉಗ್ರರ ವಿರುದ್ಧ ಹೋರಾಟ: ಮೋದಿ ಶಪಥ

ಶಾನನಸಭೆಗಳ ಮುಖ್ಯಸ್ಥರ 80ನೇ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ‘ದೇಶದ ಒಂದಲ್ಲಾ ಒಂದು ಭಾಗದಲ್ಲಿ ಕೆಲವು ತಿಂಗಳಿಗೊಮ್ಮೆ ಚುನಾವಣೆ ನಡೆಯುತ್ತಲೇ ಇರುತ್ತದೆ. ಅದರ ಪರಿಣಾಮ ಅಭಿವೃದ್ಧಿ ಕೆಲಸಗಳ ಮೇಲೆ ಆಗುತ್ತಿದೆ. ಹೀಗಾಗಿ ಒಂದು ದೇಶ, ಒಂದು ಚುನಾವಣೆ ಬಗ್ಗೆ ಆಳವಾದ ಅಧ್ಯಯನ ಮತ್ತು ಸಮಾಲೋಚನೆ ನಡೆಯಬೇಕಿದೆ’ ಎಂದು ಹೇಳಿದ್ದಾರೆ. ಜೊತೆಗೆ ಇದು ಕೇವಲ ಚರ್ಚೆಯ ವಿಷಯವಲ್ಲ, ಭಾರತದ ಇಂದಿನ ಅಗತ್ಯ ಎಂದು ಹೇಳಿದ್ದಾರೆ.

ದೇಶದ ಎಲ್ಲರಿಗೂ ಉಚಿತ ಲಸಿಕೆ?: ಕೇಂದ್ರ ಬಜೆಟ್‌ನಲ್ಲಿ ಘೋಷಣೆ ಸಂಭವ!

ಇದೇ ವೇಳೆ ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್‌ಗೆ ಒಂದೇ ಮತದಾರರ ಪಟ್ಟಿರೂಪುಗೊಳ್ಳಬೇಕು. ಪ್ರತಿಯೊಂದಕ್ಕೂ ಪ್ರತ್ಯೇಕ ಮತದಾರರ ಪಟ್ಟಿರಚಿಸುವುದರಿಂದ ಸಮಯ ಹಾಗೂ ಹಣ ಎರಡೂ ವ್ಯರ್ಥವಾಗುತ್ತದೆ ಎಂದು ಹೇಳಿದರು. ಜೊತೆಗೆ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ಒಂದಾಗಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಅದರು ರಾಷ್ಟ್ರೀಯ ಹಿತಾಸಕ್ತಿಯನ್ನು ಆಧರಿಸಿದ್ದಾಗಿರಬೇಕು ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದರು.