ಇಬ್ಬರು ಉಗ್ರರನ್ನು ಸಜೀವವಾಗಿ ಸೆರೆ ಹಿಡಿಯಲಾಗಿದ್ದು, ಈ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ಘಟನೆ ನಡೆದಿದೆ.

ಭದ್ರತಾ ಸಿಬ್ಬಂದಿ ಗನ್‌ಡೌನ್ ಮಾಡಿಸಿ ಇಬ್ಬರನ್ನು ಸೆರೆ ಹಿಡಿದಿದ್ದಾರೆ. ಶೋಪಿಯಾನ್ ಜಿಲ್ಲೆಯ ವಾಂಗಂನಲ್ಲಿ ನಡೆದ ಘಟನೆಯಲ್ಲಿ ಮತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಆರ್ಮಿ ತಿಳಿಸಿದೆ.

ಟಿಕೆಟ್ ಜೊತೆ ಗಿಡ ಕೊಡೋ ಕಂಡಕ್ಟರ್: ಮೋದಿ ಮನಕೀ ಬಾತ್‌ನ ಇಂಟ್ರೆಸ್ಟಿಂಗ್ ವಿಚಾರಗಳಿವು

ಗಾಯಗೊಂಡ ಯೋಧನನ್ನು 92 ಬೇಸ್‌ ಆಸ್ಪತ್ರೆಗೆ ಸೇರಿಸಲಾಗಿದೆ ಎಂದಿದ್ದಾರೆ. ಶನಿವಾರ ಸಂಜೆ ದಕ್ಷಿಣ ಕಾಶ್ಮೀರದ ಶೋಪಿಯಾನ್‌ನ ವಂಗಮ್ ಪ್ರದೇಶದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದಾಗ ಅಲ್ಲಿ ಉಗ್ರರು ಇರುವ ಬಗ್ಗೆ ಮಾಹಿತಿ ನೀಡಲಾಗಿದೆ ಎನ್ನಲಾಗಿದೆ. ಕಾರ್ಯಾಚರಣೆಯ ಸಮಯದಲ್ಲಿ ಗಾಯಗೊಂಡಿದ್ದ ಸೇನಾ ಸಿಬ್ಬಂದಿಯನ್ನು 92 ಮೂಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.