ಸುಮಾರು 3 ತಿಂಗಳಿನಿಂದ ಜನಾಂಗೀಯ ದ್ವೇಷಕ್ಕೆ ತುತ್ತಾಗಿ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ‘ಇಂಡಿಯಾ’ ಮೈತ್ರಿಕೂಟದ 20ಕ್ಕೂ ಹೆಚ್ಚು ಸಂಸದರು 2 ದಿನಗಳ ಕಾಲ ಭೇಟಿ ನೀಡಲಿದ್ದಾರೆ.
ನವದೆಹಲಿ: ಸುಮಾರು 3 ತಿಂಗಳಿನಿಂದ ಜನಾಂಗೀಯ ದ್ವೇಷಕ್ಕೆ ತುತ್ತಾಗಿ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ‘ಇಂಡಿಯಾ’ ಮೈತ್ರಿಕೂಟದ 20ಕ್ಕೂ ಹೆಚ್ಚು ಸಂಸದರು 2 ದಿನಗಳ ಕಾಲ ಭೇಟಿ ನೀಡಲಿದ್ದಾರೆ. ಜು.29 ಮತ್ತು 30 ರಂದು ವಿಪಕ್ಷ ಸಂಸದರ ನಿಯೋಗವು ಮಣಿಪುರಕ್ಕೆ ಭೇಟಿ ನೀಡಲಿದ್ದು ರಾಜ್ಯದ ಪರಿಸ್ಥಿತಿಯನ್ನು ಖುದ್ದು ಅವಲೋಕನ ನಡೆಸಲಿದೆ ಎಂದು ಕಾಂಗ್ರೆಸ್ ನಾಯಕ ಮಾಣಿಕ್ಯಂ ಟ್ಯಾಗೋರ್ ತಿಳಿಸಿದ್ದಾರೆ. ಈ ಹಿಂದೆಯೂ ವಿಪಕ್ಷ ನಾಯಕರು ಮಣಿಪುರಕ್ಕೆ ಭೇಟಿ ನೀಡಲು ಪ್ರಯತ್ನಿಸಿದರಾದರೂ ಅಲ್ಲಿನ ಪರಿಸ್ಥಿತಿಯ ಕಾರಣದಿಂದ ಅನುಮತಿ ನಿರಾಕರಿಸಲಾಗಿತ್ತು. ಈ ಹಿಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರಕ್ಕೆ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದ್ದರು.
ಮೋದಿ ಸಿದ್ಧಾಂತದಿಂದ ಮಣಿಪುರಕ್ಕೆ ಬೆಂಕಿ: ರಾಹುಲ್ ಕಿಡಿ
ನವದೆಹಲಿ: ಪ್ರಧಾನಿ ಮೋದಿ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಿದ್ದಾಂತದಿಂದ ಮಣಿಪುರ ಸುಟ್ಟುಹೋಗುತ್ತಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡು ಟ್ವೀಟ್ ಮಾಡಿರುವ ರಾಹುಲ್‌ಪ್ರಧಾನಿ ಮೋದಿ ಅವರು ಮಣಿಪುರದ ಬಗ್ಗೆ ಏಕೆ ಮಾತನಾಡುತ್ತಿಲ್ಲ ? ಏಕೆಂದರೆ ಮಣಿಪುರದ ವಿಚಾರದಲ್ಲಿ ಮಾಡಲು ಪ್ರಧಾನಿ ಮೋದಿ ಅವರಿಗೆ ಬೇರೇನೂ ಉಳಿದಿಲ್ಲ. ಅವರ ಸಿದ್ಧಾಂತ ಮಣಿಪುರವನ್ನು ಸುಟ್ಟು ಹಾಕಿದೆ ಎಂದು ಅವರಿಗೆ ತಿಳಿದಿದೆ. ಬಿಜೆಪಿ-ಆರ್‌ಎಸ್‌ಎಸ್ ಅಧಿಕಾರ ಪಡೆಯಲು ಏನು ಬೇಕಾದರೂ ಮಾಡುತ್ತಾರೆ. ಹಾಗಾಗಿ ಮಣಿಪುರದಲ್ಲಿ ಇಂಥಹ ಸ್ಥಿತಿ ನಿರ್ಮಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಮಣಿಪುರ ಹಿಂಸೆಗೆ ಮತ್ತೆ ಕಲಾಪ ಭಂಗ: ಚರ್ಚೆಗೆ ಸಿದ್ಧ ಎಂಬ ಶಾ ಮನವಿಗೂ ಓಗೊಡದ ವಿಪಕ್ಷ
Manipur: ಒಂದಲ್ಲ.. ಎರಡಲ್ಲ.. 7 ಅತ್ಯಾಚಾರ ನಡೆದಿದೆ: ಬಗೆದಷ್ಟೂ ಬಯಲಿಗೆ ಬರ್ತಿದೆ ರೇಪ್ ಕೇಸ್!
