ನಮ್ಮ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಉದ್ಯೋಗಕ್ಕಿಂತ ಒಂದೂವರೆ ಪಟ್ಟು ಹೆಚ್ಚು (1.5ರಷ್ಟು) ಉದ್ಯೋಗ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನವದೆಹಲಿ: ನಮ್ಮ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಉದ್ಯೋಗಕ್ಕಿಂತ ಒಂದೂವರೆ ಪಟ್ಟು ಹೆಚ್ಚು (1.5ರಷ್ಟು) ಉದ್ಯೋಗ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ರೋಜ್‌ಗಾರ ಮೇಳ ಯೋಜನೆಯಡಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದಿರುವ 1 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮೋದಿ ಉದ್ಯೋಗ ಪ್ರಮಾಣ ಪತ್ರ ವಿತರಿಸಿದರು.

ಈ ವೇಳೆ ಮಾತನಾಡಿದ ಅವರು ನಮ್ಮ ಸರ್ಕಾರವು ಪಾರದರ್ಶಕವಾಗಿ ಹಾಗೂ ಕಾಲಮಿತಿಯಲ್ಲಿ ಉದ್ಯೋಗ ನೇಮಕಾತಿ ಮಾಡಿದೆ. ಆದರೆ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಉದ್ಯೋಗಕ್ಕೆ ಲಂಚ ಪಡೆಯಲಾಗಿದೆ ಮತ್ತು ನೇಮಕಾತಿಯನ್ನು ತೀರಾ ವಿಳಂಬ ಮಾಡಲಾಗುತ್ತಿತ್ತು ಎಂದು ಕಿಡಿಕಾರಿದರು. ಅಲ್ಲದೇ ‘ಯುಪಿಎ ಅವಧಿಯಲ್ಲಿ ಸೃಷ್ಟಿಯಾಗಿದ್ದ ಉದ್ಯೋಗಕ್ಕಿಂತ ಒಂದೂವರೆ ಪಟ್ಟು ಹೆಚ್ಚು ಉದ್ಯೋಗಳನ್ನು ನಮ್ಮ ಸರ್ಕಾರದಲ್ಲಿ ನೀಡಲಾಗಿದೆ. ಈಗ ಎಲ್ಲರಿಗೂ ಸಮಾನ ಅವಕಾಶವಿದೆ. ಕಠಿಣ ಪರಿಶ್ರಮ ಮತ್ತು ಪ್ರತಿಭೆಯಿಂದ ಸರ್ಕಾರಿ ಉದ್ಯೋಗ ಪಡೆಯಬಹುದು ಎಂದು ಈಗ ಯುವಕರು ನಂಬಿದ್ದಾರೆ’ ಎಂದು ಹೇಳಿದರು.

3ನೇ ಅವಧಿ ದೂರವಿಲ್ಲ, ರಾಜ್ಯಸಭೆಯಲ್ಲಿ ಮೋದಿ 3.O ಸರ್ಕಾರದ ವಿಷನ್ ಮುಂದಿಟ್ಟ ಪ್ರಧಾನಿ!

ಧನ್ಯವಾದ ತಿಳಿಸಲು ಮೋದಿ ಕತಾರ್‌ಗೆ?

ನವದೆಹಲಿ: 8 ಭಾರತೀಯರ ಬಿಡುಗಡೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಫೆ.14ರಂದು ಕತಾರ್‌ಗೆ ಒಂದು ದಿನದ ಭೇಟಿ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಈ ಮೊದಲು ಯುಎಇನ ಮೊದಲ ಹಿಂದೂ ದೇಗುಲ ಉದ್ಘಾಟನೆಗಾಗಿ ಫೆ.13-14ರಂದು ಮೋದಿ ಯುಎಇ ಪ್ರವಾಸ ಕೈಗೊಳ್ಳಿದ್ದಾರೆ ಎಂದು ಸರ್ಕಾರ ಹೇಳಿಕೆ ನೀಡಿತ್ತು. ಆದರೆ ಇದೀಗ ಭಾರತೀಯರ ಬಿಡುಗಡೆ ಬೆನ್ನಲ್ಲೇ ಕತಾರ್‌ ಭೇಟಿಯ ವಿಷಯವನ್ನು ಪ್ರಕಟಿಸಲಾಗಿದೆ. ಇದು ಮೋದಿ ಅವರು ಕತಾರ್‌ಗೆ ಧನ್ಯವಾದ ತಿಳಿಸಲು ನೀಡುತ್ತಿರುವ ಲಘು ಭೇಟಿಯಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ.

ನನ್ನ ದೇಶ ಕೇವಲ ದೆಹಲಿಯಲ್ಲ, ಬೆಂಗಳೂರು ಕೂಡ ನನ್ನ ದೇಶ; ವಿಪಕ್ಷಗಳಿಗೆ ಚಾಟಿ ಬಿಸಿದ ಪ್ರಧಾನಿ ಮೋದಿ !