Asianet Suvarna News Asianet Suvarna News

Padma Awards 2021| ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ: ಹರೇಕಳ ಹಾಜಬ್ಬ, ಕಂಬಾರ, ತುಳಸಿ ಗೌಡಗೆ ಗೌರವ!

* 2021ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಧಾನ ಸಮಾರಂಭ

* ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ ಪ್ರಶಸ್ತಿ ಪ್ರಧಾನ

* ಚಂದ್ರಶೇಖರ ಕಂಬಾರ, ಹರೇಕಳ ಹಾಜಬ್ಬ, ಮಂಜಮ್ಮ ಜೋಗತಿ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಗೌರವ

Padma Awards 2021 Sushma Swaraj PV Sindhu Kangana Ranaut among 119 recipients pod
Author
Bangalore, First Published Nov 8, 2021, 2:02 PM IST
  • Facebook
  • Twitter
  • Whatsapp

ನವದೆಹಲಿ(ನ.08): ದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ (Rashtrapati Bhavan) ಐತಿಹಾಸಿಕ ದರ್ಬಾರ್ ಹಾಲ್‌ನಲ್ಲಿ 2021ನೇ ಸಾಲಿನ ಪದ್ಮ ಪ್ರಶಸ್ತಿ (Padma Awards 2021) ಪ್ರಧಾನ ಸಮಾರಂಭ ನಡೆದಿದೆ. 7 ಪದ್ಮವಿಭೂಷಣ (, 10 ಪದ್ಮಭೂಷಣ ಹಾಗೂ 102 ಪದ್ಮಶ್ರೀ (Padma Shri) ಪ್ರಶಸ್ತಿ ಸೇರಿದಂತೆ ಒಟ್ಟು 119 ಪದ್ಮ ಪ್ರಶಸ್ತಿ ನೀಡಲಾಗಿದೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಶಸ್ತಿ ಪ್ರಧಾನ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿದಂತೆ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. 

ಈ ಸಮಾರಂಭದಲ್ಲಿ ಕವಿ, ನಾಟಕಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರರಿಗೆ (Chandrashekhara Kambara) ಪದ್ಮಭೂಷಣ (Padma Bhushan) ನೀಡಿ ಗೌರವಿಸಲಾಗಿದೆ. ಇವರನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳ ಹಾಜಬ್ಬ (Harekala Hajabba), ಮಾತಾ ಬಿ. ಮಂಜಮ್ಮ ಜೋಗತಿ ಸೇರಿ ಇನ್ನೂ ಕೆಲ ಕನ್ನಡಿಗರು ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಒಲಿಂಪಿಯನ್ ಪಿವಿ ಸಿಂಧು, ನಟಿ ಕಂಗನಾ ರಣಾವತ್ ಸೇರಿದಂತೆ ಪ್ರಮುಖರಿಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಪದ್ಮ ಪ್ರಶಸ್ತಿ ನೀಡಿ ಗೌರವಿಸಿದರು. ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರ ಪುತ್ರಿ ಬಾನ್ಸುರಿ ಸ್ವರಾಜ್ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈ ಬಾರಿ ಒಟ್ಟು 119 ಪದ್ಮ ಪ್ರಶಸ್ತಿ ಪಡೆದವರಲ್ಲಿ, 29 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಹಾಗೂ 16 ಮಂದಿ ಮರಣೋತ್ತರ ಪ್ರಶಸ್ತಿ ಪುರಸ್ಕೃತರಿದ್ದಾರೆ. 

ಪದ್ಮವಿಭೂಷಣ ಪ್ರಶಸ್ತಿ ಪಡೆದವರ ಪಟ್ಟಿ

ಜಪಾನ್‌ನ ಮಾಜಿ ಪ್ರಧಾನಿ ಶಿಂಬೊ ಅಬೆ'

ಕರ್ನಾಟಕದ ಡಾ. ಬಿ. ಎಂ. ಹೆಗ್ಡೆ

ಗಾಯಕ ಎಸ್‌. ಪಿ. ಬಾಲಸುಬ್ರಮಣ್ಯಂ (ಮರಣೋತ್ತರ)

ನರಿಂದರ್ ಸಿಂಗ್ ಕಪಾನಿ (ಮರಣೋತ್ತರ)

ಮೌಲಾನಾ ವಹೀದುದ್ದೀನ್ ಖಾನ್

ಬಿ. ಬಿ. ಲಾಲ್

ಸುದರ್ಶನ್ ಸಾಹೋ 

ಪದ್ಮಭೂಷಣ ಪ್ರಶಸ್ತಿ ಪಡೆದವರ ಪಟ್ಟಿ

ಕೃಷ್ಣನ್ ನಾಯರ್ ಶಾಂತಾ ಕುಮಾರಿ ಚಿತ್ರಾ'

ತರುಣ್ ಗೊಗಯ್ (ಮರಣೋತ್ತರ)

ಚಂದ್ರಶೇಖರ ಕಂಬಾರ'

ಸುಮಿತ್ರಾ ಮಹಾಜನ್

ನೃಪೇಂದ್ರ ಮಿಶ್ರಾ

ರಾಮ್ ವಿಲಾಸ್ ಪಾಸ್ವಾನ್ (ಮರಣೋತ್ತರ)

ಕೇಶುಭಾಯ್ ಪಟೇಲ್ (ಮರಣೋತ್ತರ)

ಕಲ್ಬೆ ಸಾದಿಕ್ (ಮರಣೋತ್ತರ)

ರಜನಿಕಾಂತ್ ದೇವಿದಾಸ್ ಶ್ರಾಫ್

ತರ್‌ಲೋಚನ್ ಸಿಂಗ್ 

ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರಿವರು

* ಮಾತಾ ಬಿ. ಮಂಜಮ್ಮ ಜೋಗತಿ (ಕಲೆ)

* ಹರೇಕಳ ಹಾಜಬ್ಬ

* ರಂಗಸ್ವಾಮಿ ಲಕ್ಷ್ಮಿನಾರಾಯಣ ಕಶ್ಯಪ್ (ಸಾಹಿತ್ಯ ಮತ್ತು ಶಿಕ್ಷಣ)

* ಕೆ. ವೈ. ವೆಂಕಟೇಶ್ (ಕ್ರೀಡೆ) 

* ತುಳಸಿಗೌಡ

Follow Us:
Download App:
  • android
  • ios