ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಕಣಿವೆಯ ರೆಸಾರ್ಟ್ ಪ್ರದೇಶದಲ್ಲಿ ಮಂಗಳವಾರ (ಏ.22, 2025) ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 26ಕ್ಕೂ ಅಧಿಕ ಪ್ರವಾಸಿಗರು ಮೃತಪಟ್ಟಿದ್ದಾರೆಂದು ವರದಿಯಾಗಿದೆ ಈ ಘಟನೆಯಲ್ಲಿ ಹಲವು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.

Pahalgam terror attack Live: 'ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಕಣಿವೆಯ ರೆಸಾರ್ಟ್ ಪ್ರದೇಶದಲ್ಲಿ ಮಂಗಳವಾರ (ಏ.22, 2025) ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ 26ಕ್ಕೂ ಅಧಿಕ ಪ್ರವಾಸಿಗರು ಮೃತಪಟ್ಟಿದ್ದಾರೆಂದು ವರದಿಯಾಗಿದೆ ಈ ಘಟನೆಯಲ್ಲಿ ಹಲವು ಪ್ರವಾಸಿಗರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶ್ರೀನಗರಕ್ಕೆ ಸ್ಥಳಾಂತರಿಸಲಾಗಿದೆ.

ನಮ್ಮ ದುಡಿಮೆ ಹಾಳಾಗಿದೆ: ಸ್ಥಳೀಯರು ಅಸಮಾಧಾನ:
 ಸ್ಥಳೀಯ ನಿವಾಸಿ ಉಮರ್, ಎಎನ್‌ಐ ಜೊತೆ ಮಾತನಾಡುತ್ತಾ, 'ಈ ದಾಳಿಯಿಂದ ನಾವು ತೀವ್ರ ಅಸಮಾಧಾನಗೊಂಡಿದ್ದೇವೆ. ಪ್ರವಾಸಿಗರ ಮೇಲಿನ ಈ ದಾಳಿ ನಮ್ಮ ಆತಿಥ್ಯ ಸಂಪ್ರದಾಯಕ್ಕೆ ಕಳಂಕವಾಗಿದೆ. ಈ ಘಟನೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ತಿಳಿಸುತ್ತೇವೆ. ಇಂತಹ ಘಟನೆ ಸಂಭವಿಸಬಾರದಿತ್ತು' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Pahalgam terror attack: : ಹಿಂದೂಗಳ ಗುರಿಯಾಗಿಸಿ ದಾಳಿ, ಪಾಕಿಸ್ತಾನದ ಕೈವಾಡ, ಪೊಲೀಸ್ ಸಮವಸ್ತ್ರದಲ್ಲಿದ್ದ ಟೆರರಿಸ್ಟ್!

ಸಿಆರ್‌ಪಿಎಫ್ ತಂಡಗಳ ನಿಯೋಜನೆ: ದಾಳಿಯ ಬಳಿಕ, ಭದ್ರತೆಯನ್ನು ಬಿಗಿಗೊಳಿಸಲು ಸಿಆರ್‌ಪಿಎಫ್‌ನ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ಪಹಲ್ಗಾಮ್ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಗುಪ್ತಚರ ಏಜೆನ್ಸಿಗಳ ಪ್ರಕಾರ, ಈ ದಾಳಿಯ ಹಿಂದೆ ಟಿಆರ್‌ಎಫ್ (ದಿ ರೆಸಿಸ್ಟೆನ್ಸ್ ಫ್ರಂಟ್) ಭಯೋತ್ಪಾದಕ ಸಂಘಟನೆಯ ಕೈವಾಡವಿರಬಹುದು ಎಂದು ಶಂಕಿಸಲಾಗಿದೆ. 2-3 ದಾಳಿಕೋರರು ಪೊಲೀಸ್ ಸಮವಸ್ತ್ರದಲ್ಲಿ ಬಂದು ಯೋಜಿತವಾಗಿ ದಾಳಿ ನಡೆಸಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ.

ಪ್ರಧಾನಿ ಮೋದಿ ಸೂಚನೆ: ಸೌದಿ ಅರೇಬಿಯಾದ ಜೆಡ್ಡಾದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ದಾಳಿಯ ಸ್ಥಳಕ್ಕೆ ಭೇಟಿ ನೀಡಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಸೂಚಿಸಿದ್ದಾರೆ. ಅಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ನಿವಾಸದಲ್ಲಿ ತುರ್ತು ಸಭೆ ಕರೆದಿದ್ದು, ಇದರಲ್ಲಿ ಗುಪ್ತಚರ ಇಲಾಖೆಯ ಮುಖ್ಯಸ್ಥ, ಗೃಹ ಕಾರ್ಯದರ್ಶಿ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಸಿಆರ್‌ಪಿಎಫ್ ಮಹಾನಿರ್ದೇಶಕ, ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಸೇರಿದಂತೆ ಇತರ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಿದ್ದಾರೆ. ಅಲ್ಲದೇ ಘಟನೆ ಸ್ಥಳಕ್ಕೆ ಗೃಹ ಸಚಿವರು ಭೇಟಿ ನೀಡಿದ್ದಾರೆ.

ದಾಳಿ ಖಂಡಿಸಿದ ಒಮರ್ ಅಬ್ದುಲ್ಲಾ:
ಈ ದಾಳಿಯನ್ನು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಖಂಡಿಸಿದ್ದು, ಇದೊಂದು ಅಮಾನವೀಯ ದಾಳಿ ಎಂದಿದ್ದಾರೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮಾತನಾಡಿ, ಈ ಕೃತ್ಯದ ಹಿಂದಿರುವವರನ್ನು ಕ್ಷಮಿಸುವುದಿಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ:Pahalgam terror attack: 'ಈಗ ಮಾತಾಡಿದ್ರೆ ರಾಜಕೀಯ ಆಗುತ್ತೆ..' ಉಗ್ರರ ದಾಳಿ ಬಗ್ಗೆ ಸಂತೋಷ್ ಲಾಡ್ ಹೇಳಿದ್ದೇನು?

ತನಿಖೆ ಆರಂಭ: 
ಭಾರತೀಯ ಸೇನೆ, ಸಿಆರ್‌ಪಿಎಫ್, ಮತ್ತು ಜಮ್ಮು ಕಾಶ್ಮೀರ ಪೊಲೀಸ್‌ನ ವಿಶೇಷ ಕಾರ್ಯಾಚರಣೆ ತಂಡ ಜಂಟಿಯಾಗಿ ತನಿಖೆ ಆರಂಭಿಸಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೂಡ ಶೀಘ್ರದಲ್ಲಿ ಈ ಪ್ರಕರಣವನ್ನು ವಹಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಘಟನೆಯಿಂದ ಪಹಲ್ಗಾಮ್‌ನ ಪ್ರವಾಸೋದ್ಯಮಕ್ಕೆ ತಾತ್ಕಾಲಿಕ ಆಘಾತವಾಗಿದ್ದು, ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

Scroll to load tweet…