ಕಾಶ್ಮೀರದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ನವದೆಹಲಿ/ರಿಯಾದ್(ಏ 22): ಕಾಶ್ಮೀರದಲ್ಲಿ ಸಂಭವಿಸಿದ ಭಯೋತ್ಪಾದಕ ದಾಳಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸೌದಿ ಅರೇಬಿಯಾದ ಅಧಿಕೃತ ಭೇಟಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ, ತಕ್ಷಣವೇ ಭಾರತಕ್ಕೆ ಮರಳಲು ನಿರ್ಧರಿಸಿದ್ದಾರೆ. ಸೌದಿ ಅರೇಬಿಯಾದಲ್ಲಿ ಆಯೋಜಿಸಲಾಗಿದ್ದ ಉನ್ನತ ಮಟ್ಟದ ಭೋಜನಕೂಟವನ್ನು ತಪ್ಪಿಸಿರುವ ಅವರು, ಇಂದು ರಾತ್ರಿಯೇ ರಿಯಾದ್‌ನಿಂದ ಭಾರತಕ್ಕೆ ತೆರಳಲಿದ್ದಾರೆ ಎಂದು ವರದಿಯಾಗಿದೆ.

ಮೂಲತಃ ಪ್ರಧಾನಿ ಮೋದಿ ಅವರು ತಮ್ಮ ಎರಡು ದಿನಗಳ ಭೇಟಿಯನ್ನು ಪೂರ್ಣಗೊಳಿಸಿ, ನಾಳೆ ರಾತ್ರಿ ಅಂದರೆ ಏಪ್ರಿಲ್ 23ರಂದು ಭಾರತಕ್ಕೆ ಮರಳಬೇಕಿತ್ತು. ಆದರೆ, ಕಾಶ್ಮೀರದಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಅಟ್ಟಹಾಸ ಮೆರೆದಿರುವ ಹಿನ್ನೆಲೆ ಇದನ್ನು ಗಂಭೀರವಾಗಿ ಪರಿಗಣಿಸಿ ಅವರು ತಮ್ಮ ಎಲ್ಲ ಯೋಜನೆಯನ್ನು ಬದಲಾಯಿ ಹಿಂತಿರುಗಲಿದ್ದಾರೆ. ಪ್ರಧಾನಿ ಅವರು ಬುಧವಾರ ಬೆಳಿಗ್ಗೆ ದೆಹಲಿಗೆ ಆಗಮಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:Video | ನಮ್ಮ ದುಡಿಮೆನೇ ಹಾಳಾಗೋಯ್ತು..' ಭಯೋತ್ಪಾದಕ ದಾಳಿ ಬಗ್ಗೆ ಸ್ಥಳೀಯರು ಆಕ್ರೋಶ

ಪಹಲ್ಗಾಮ್ ಭಯೋತ್ಪಾದಕ ದಾಳಿ: 
ದಕ್ಷಿಣ ಕಾಶ್ಮೀರದ ಪ್ರಮುಖ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಸುಮಾರು 26ಕ್ಕೂ ಹೆಚ್ಚು ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯ ನಂತರ, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿವೆ. ಈ ಮಧ್ಯೆ, ದಾಳಿಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. 

ಭಯೋತ್ಪಾದಕರನ್ನು ಸುಮ್ಮನೆ ಬಿಡುವುದಿಲ್ಲ - ಪ್ರಧಾನಿ ಮೋದಿ

ಸಂತ್ರಸ್ತ ಜನರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಘೋರ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು. ಯಾವುದೇ ಕಾರಣಕ್ಕೂ ಅವರನ್ನು ಸುಮ್ಮನೆ ಬಿಡಲಾಗುವುದಿಲ್ಲ. ಅವರ ದುಷ್ಟರ ಕಾರ್ಯ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Pahalgam terror attack: : ಹಿಂದೂಗಳ ಗುರಿಯಾಗಿಸಿ ದಾಳಿ, ಪಾಕಿಸ್ತಾನದ ಕೈವಾಡ, ಪೊಲೀಸ್ ಸಮವಸ್ತ್ರದಲ್ಲಿದ್ದ ಟೆರರಿಸ್ಟ್!

ಶ್ರೀನಗರಕ್ಕೆ ತೆರಳಿದ ಗೃಹ ಸಚಿವ: 
ಪಹಲ್ಗಾಮ್ ದಾಳಿಯ ನಂತರ, ಗೃಹ ಸಚಿವ ಅಮಿತ್ ಶಾ ತುರ್ತು ಸಭೆ ಕರೆದರು. ಇದರಲ್ಲಿ ಐಬಿ ಮುಖ್ಯಸ್ಥರು ಮತ್ತು ಗೃಹ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯ ನಂತರ ಗೃಹ ಸಚಿವರು ನೇರವಾಗಿ ಶ್ರೀನಗರಕ್ಕೆ ತೆರಳಿದರು. ಘಟನೆಯ ಬಗ್ಗೆ ಗೃಹ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಹಿತಿ ನೀಡಿದರು.

ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಯ ನಂತರ ದೆಹಲಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೆಹಲಿಯಲ್ಲಿ ಕಟ್ಟೆಚ್ಚರ. ಪ್ರವಾಸಿ ಸ್ಥಳಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ತೀವ್ರ ನಿಗಾ ಇಡಲು ದೆಹಲಿ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ ಎಂದು ANI ವರದಿ ಮಾಡಿದೆ.