ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಪ್ರವಾಸಿಗರು ಗಾಯಗೊಂಡಿದ್ದಾರೆ. ಪೊಲೀಸ್ ಸಮವವಸ್ತ್ರ ಧರಿಸಿದ 2-3 ದಾಳಿಕೋರರು ಕುದುರೆ ಸವಾರಿ ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಹೆಚ್ಚುವರಿ ಕ್ಷಿಪ್ರ ಕಾರ್ಯಾಚರಣೆ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಅನಂತ್‌ನಾಗ್, ಜಮ್ಮು ಕಾಶ್ಮೀರ (ಏ.22): ಜಮ್ಮು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಪ್ರವಾಸಿಗರು ಗಾಯಗೊಂಡಿದ್ದಾರೆ. ಪೊಲೀಸ್ ಸಮವವಸ್ತ್ರ ಧರಿಸಿದ 2-3 ದಾಳಿಕೋರರು ಕುದುರೆ ಸವಾರಿ ಆನಂದಿಸುತ್ತಿದ್ದ ಪ್ರವಾಸಿಗರ ಮೇಲೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಹೆಚ್ಚುವರಿ ಕ್ಷಿಪ್ರ ಕಾರ್ಯಾಚರಣೆ ತಂಡಗಳನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

ಪಾಕಿಸ್ತಾನದ ನಂಟು: ಮೂಲಗಳ ಪ್ರಕಾರ, ಈ ದಾಳಿಯಲ್ಲಿ ಪಾಕಿಸ್ತಾನದ ಕೈವಾಡವಿದ್ದು, ಲಶ್ಕರ್-ಎ-ತೈಯಬಾದ ಶಾಖೆಯಾದ 'ದಿ ರೆಸಿಸ್ಟೆನ್ಸ್ ಫ್ರಂಟ್' (TRF) ಭಾಗಿಯಾಗಿರುವ ಸಾಧ್ಯತೆಯಿದೆ. ಜಮ್ಮು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಹೆಚ್ಚುತ್ತಿರುವುದನ್ನು ತಡೆಯಲು ಮತ್ತು ಅಮರನಾಥ ಯಾತ್ರೆಯನ್ನು ಅಡ್ಡಿಪಡಿಸಲು ಪಾಕಿಸ್ತಾನ ಈ ದಾಳಿಯನ್ನು ಯೋಜಿಸಿರುವ ಸಂಶಯ ವ್ಯಕ್ತವಾಗಿದೆ.

ಇದನ್ನೂ ಓದಿ: Pahalgam Terrorist Attack: ನಾಲ್ವರು ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ!

ಮೆಹಬೂಬಾ ಮುಫ್ತಿ ಖಂಡನೆ: ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. 'ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಹೇಡಿತನದ ದಾಳಿಯನ್ನು ಖಂಡಿಸುತ್ತೇನೆ. ಇಂತಹ ಹಿಂಸಾಚಾರ ಸ್ವೀಕಾರಾರ್ಹವಲ್ಲ' ಎಂದು ಅವರು Instagram ನಲ್ಲಿ ಬರೆದಿದ್ದಾರೆ.

ನಾಯಕರ ಆಕ್ರೋಶ: ಜಮ್ಮು ಕಾಶ್ಮೀರದ ನಾಯಕ ಅಲ್ತಾಫ್ ಠಾಕೂರ್, 'ಪಾಕಿಸ್ತಾನವು ಕಾಶ್ಮೀರದ ಪ್ರವಾಸೋದ್ಯಮ ಮತ್ತು ಆರ್ಥಿಕತೆಯನ್ನು ಹಾಳುಮಾಡಲು ಯತ್ನಿಸುತ್ತಿದೆ. ಈ ದಾಳಿ ಸ್ಥಳೀಯರ ಜೀವನೋಪಾಯದ ಮೇಲಿನ ಆಕ್ರಮಣವಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳ ಸ್ಥಿತಿ: ಗಾಯಗೊಂಡ 12 ಪ್ರವಾಸಿಗರನ್ನು ಹೆಲಿಕಾಪ್ಟರ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸ್ಥಳೀಯರು ಕೆಲವರನ್ನು ಹೇಸರಗತ್ತೆಗಳ ಮೂಲಕ ರಕ್ಷಿಸಿದ್ದಾರೆ. ಎಲ್ಲ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಜಮ್ಮುವಿನಲ್ಲಿ ಮೇಘಸ್ಫೋಟ: 3 ಸಾವು, 100ಕ್ಕೂ ಹೆಚ್ಚು ಜನರ ರಕ್ಷಣೆ, ರಾಷ್ಟ್ರೀಯ ಹೆದ್ದಾರಿ ಸ್ಥಗಿತ!

ಕೇಂದ್ರದ ಪ್ರತಿಕ್ರಿಯೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದಾಳಿಯ ಕುರಿತು ಚರ್ಚಿಸಿದ್ದು, ಶಾ ಅವರು ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಕಾಶ್ಮೀರದಲ್ಲಿ ಪ್ರವಾಸಿಗರ ಸಂಖ್ಯೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ನಡೆದ ಈ ದಾಳಿಯು ಭದ್ರತಾ ಕಾಳಜಿಗಳನ್ನು ಮತ್ತೆ ಮುನ್ನಲೆಗೆ ತಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಭಯೋತ್ಪಾದಕರನ್ನು ಹಿಡಿಯಲು ಶೋಧ ಕಾರ್ಯಾಚರಣೆ ತೀವ್ರಗೊಂಡಿದೆ.

Scroll to load tweet…