ಶ್ರೀನಗರ[ಫೆ.27]: ಇಂಡೋ-ಪಾಕ್ ಗಡಿ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನದ ಯುದ್ಧ ವಿಮಾನಗಳು ಇಂದು ಫೆ. 27ರಂದು ಬೆಳಗ್ಗೆ ಭಾರತದ ಗಡಿ ನಿಯಂತ್ರಣ ರೇಖೆ ದಾಟಿ ಬಂದಿವೆ. ಆದರೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ಕೊಟ್ಟಿರುವ ಭಾರತದ ವಾಯುಸೇನೆಯು ಗಡಿ ದಾಟಿದ ಪಾಕಿಸ್ತಾನದ F-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ.

ಫೆ. 14ರಂದು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಭಾರತೀಯ ಯೋಧರ ಮೇಲೆ ಆತ್ಮಾಹುತಿ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರ ಎಂಬಂತೆ ಭಾರತವೂ ಫೆ. 26ರಂದು ಪ್ರತಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸುಮಾರು 300ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.

ಕಾಶ್ಮೀರದಲ್ಲಿ ಮಿಗ್-21 ಫೈಟರ್ ಜೆಟ್ ಪತನ, ಇಬ್ಬರು ಪೈಲೆಟ್ ಸಾವು

ಪಾಕಿಸ್ತಾನದಿಂದ ಬಾಂಬ್ ದಾಳಿ:

ಈ ಎಲ್ಲಾ ಬೆಳವಣಿಗೆಗಳ ನಡುವೆ ತನ್ನ ದುರ್ಬುದ್ಧಿ ಬಿಡದ ಪಾಕಿಸ್ತಾನ, ಗಡಿಯಲ್ಲಿ ಬಾಂಬ್ ದಾಳಿ ನಡೆಸಿವೆ. ಯುದ್ಧ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಭಾರತದ ಉನ್ನತ ಅಧಿಕಾರಿಗಳು ಸಭೆ ನಡೆಸುತ್ತಿದ್ದು, ರಜೆಯ ಮೇಲೆ ತೆರಳಿದ್ದ ಸೈನಿಕರನ್ನು ಮರಳಿ ಬರುವಂತೆ ಸೂಚಿಸಲಾಗಿದೆ.