ಭಾರತ ಮತ್ತು ಪಾಕಿಸ್ತಾನ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನದ ಡಿಜಿಎಂಒ ಫೋನ್ ಕರೆ ಮಾಡುವ ಮೂಲಕ ಉಪಕ್ರಮವನ್ನು ತೆಗೆದುಕೊಂಡ ನಂತರ ಚರ್ಚೆಗಳು ನಡೆದು ಒಮ್ಮತಕ್ಕೆ ಬರಲಾಯಿತು.

ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವ ಇಷ್ಕ್ ದರಾರ್ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಪಾಕಿಸ್ತಾನ ಮತ್ತು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಪಾಕಿಸ್ತಾನವು ತನ್ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಧಕ್ಕೆಯಾಗದಂತೆ ಈ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಗಾಗಿ ಯಾವಾಗಲೂ ಶ್ರಮಿಸಿದೆ ಎಂದು ಪಾಕ್ ಸಚಿವರು ಬರೆದುಕೊಂಡಿದ್ದಾರೆ. ಭಾರತದ ಪ್ರತಿದಾಳಿಗೆ ಹೆದರಿರುವ ಪಾಕಿಸ್ತಾನ, ಕದನ ವಿರಾಮಕ್ಕೆ ನಮಗೆ ಅವಕಾಶ ನೀಡಬೇಕೆಂದು ಅಮೆರಿಕ ಮುಂದೆ ಹೋಗಿತ್ತು. ಅಮೆರಿಕೆಯ ಮಧ್ಯಸ್ಥಿಕೆಯಲ್ಲಿ ಪಾಕ್ ಕದಮ ವಿರಾಮಕ್ಕೆ ಅಂಗಲಾಚಿಕೊಂಡಿತ್ತು ಎಂದು ವರದಿಯಾಗಿದೆ. 

ಈ ಬಗ್ಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಮ್ ಮಿಶ್ರಿ, ಪಾಕಿಸ್ತಾನದ ಡಿಜಿಎಂಒ ಫೋನ್ ಕರೆ ಮಾಡುವ ಮೂಲಕ ಉಪಕ್ರಮವನ್ನು ತೆಗೆದುಕೊಂಡರು, ನಂತರ ಚರ್ಚೆಗಳು ನಡೆದು ಒಮ್ಮತಕ್ಕೆ ಬರಲಾಯಿತು. ಬೇರೆ ಯಾವುದೇ ಸ್ಥಳದಲ್ಲಿ ಬೇರೆ ಯಾವುದೇ ವಿಷಯದ ಕುರಿತು ಮಾತುಕತೆ ನಡೆಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಅವರು ಹೇಳಿದರು.

. "ಅಮೆರಿಕದ ಮಧ್ಯಸ್ಥಿಕೆಯಲ್ಲಿ ರಾತ್ರಿಯಿಡೀ ನಡೆದ ಮಾತುಕತೆಗಳ ನಂತರ, ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದ ಬಗ್ಗೆ ನಿಮ್ಮ ಗಮನಕ್ಕೆ ಧನ್ಯವಾದಗಳು ಎಂದು ಡೊನಾಲ್ಡ್ ಟ್ರಂಪ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Scroll to load tweet…