ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಉನ್ನತ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಿಲ್ಲ. ಇತ್ತೀಚಿನ ಬೆಳವಣಿಗೆಯಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಸಂಸತ್ತಿನಲ್ಲಿ ಭಾರತ ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗಿದೆ. ಪ್ರಪಂಚದ ಎಲ್ಲಾ ದೇಶಗಳು ಪಾಕಿಸ್ತಾನದ ಜೊತೆ ನಿಂತಿವೆ ಎಂದು ಹೇಳಿದರು. ಇಷ್ಟೇ ಅಲ್ಲ, ಭಾರತ ಮತ್ತು ಇಸ್ರೇಲ್ ಇಸ್ಲಾಂನ ಶತ್ರುಗಳು ಎಂದು ವಿಷ ಕಾರಿದ್ದಾರೆ.
India attack on pakistan: ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಪಾಕಿಸ್ತಾನದ ಉನ್ನತ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸುತ್ತಿಲ್ಲ. ಇತ್ತೀಚಿನ ಬೆಳವಣಿಗೆಯಲ್ಲಿ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಸಂಸತ್ತಿನಲ್ಲಿ ಭಾರತ ಇತ್ತೀಚಿನ ದಿನಗಳಲ್ಲಿ ಏಕಾಂಗಿಯಾಗಿದೆ. ಪ್ರಪಂಚದ ಎಲ್ಲಾ ದೇಶಗಳು ಪಾಕಿಸ್ತಾನದ ಜೊತೆ ನಿಂತಿವೆ ಎಂದು ಹೇಳಿದರು. ಇಷ್ಟೇ ಅಲ್ಲ, ಭಾರತ ಮತ್ತು ಇಸ್ರೇಲ್ ಇಸ್ಲಾಂನ ಶತ್ರುಗಳು ಎಂದು ವಿಷ ಕಾರಿದ್ದಾರೆ.
ಇಡೀ ಜಗತ್ತು ಪಾಕಿಸ್ತಾನದೊಂದಿಗಿದೆ:
ಖವಾಜಾ ಆಸಿಫ್ ಅವರು, ಪಾಕಿಸ್ತಾನವು ಗಲ್ಫ್ ರಾಷ್ಟ್ರಗಳು, ಇರಾನ್, ಚೀನಾ, ಟರ್ಕಿ ಮತ್ತು ಅಜೆರ್ಬೈಜಾನ್ ಸೇರಿದಂತೆ ಅನೇಕ ದೇಶಗಳ ಬೆಂಬಲವನ್ನು ಹೊಂದಿದೆ ಎಂದು ಹೇಳಿದ್ದಾರೆ. 'ನಾವು ಯುಎಇ, ಸೌದಿ ಅರೇಬಿಯಾ, ಕತಾರ್ ಮತ್ತು ಚೀನಾದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ವಿಶ್ವಸಂಸ್ಥೆಯಲ್ಲಿ ನಮ್ಮ ಮಿಷನ್ ಭಾರತಕ್ಕೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುತ್ತಿದೆ' ಎಂದಿದ್ದಾರೆ.
ಇದನ್ನೂ ಓದಿ: ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ...
ಭಾರತದೊಂದಿಗೆ ಇಸ್ರೇಲ್ ಮಾತ್ರ
ಭಾರತಕ್ಕೆ ಕೇವಲ ಇಸ್ರೇಲ್‌ನ ಬೆಂಬಲವಿದೆ ಎಂದಿರುವ ಖವಾಜಾ ಮುಹಮ್ಮದ್ ಆಸಿಫ್, ಇಸ್ರೇಲ್ ಮತ್ತು ಭಾರತ ಇಸ್ಲಾಂನ ಶತ್ರುಗಳು. ಮುಸ್ಲಿಂ ರಾಷ್ಟ್ರಗಳ ವಿರುದ್ಧ ದ್ವೇಷದಲ್ಲಿ ಒಂದಾಗಿವೆ.ಇದಕ್ಕೆ ಪೂರಕವಾಗಿ, ಟರ್ಕಿ, ಚೀನಾ ಮತ್ತು ಅಜೆರ್ಬೈಜಾನ್ ಪಾಕಿಸ್ತಾನಕ್ಕೆ ಬಹಿರಂಗ ಬೆಂಬಲ ಸೂಚಿಸಿವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಕೇಂದ್ರದ ವಿರುದ್ಧ ಸುಳ್ಳು ಸುದ್ದಿ; ಕೋಲಾರದ ಮುನೀರ್ ಖಾನ್ ವಿರುದ್ಧ ಎಫ್‌ಐಆರ್
ವಾಸ್ತವವಾಗಿ ಅನೇಕ ರಾಷ್ಟ್ರಗಳು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ಬೆಂಬಲ ಸೂಚಿಸಿವೆ. ಪಾಕಿಸ್ತಾನ ಮಾತ್ರ ಇದಕ್ಕೆ ತದ್ವಿರುದ್ಧವಾಗಿ ಸುಳ್ಳುಗಳನ್ನೇ ಹರಡುತ್ತಿದೆ.


