ಸೈನ್ಯವನ್ನು ಸಜ್ಜುಗೊಳಿಸುವ ಪಾಕಿಸ್ತಾನದ ನಿರ್ಧಾರವು ಆಕ್ರಮಣಕಾರಿ ಉದ್ದೇಶವನ್ನು ಸೂಚಿಸುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ ಭಾರತೀಯ ಪಡೆಗಳು ಇದಕ್ಕೆ ಉತ್ತರಿಸಲು ಸಿದ್ಧವಾಗಿವೆ ಮತ್ತು ಜಾಗರೂಕವಾಗಿವೆ ಎಂದು ಸ್ಪಷ್ಟಪಡಿಸಿದೆ.
ನವದೆಹಲಿ (ಮೇ.11): 1999 ರ ಕಾರ್ಗಿಲ್ ಯುದ್ಧದ ನಂತರ ಪಾಕಿಸ್ತಾನ ತನ್ನ ಹೆಚ್ಚಿನ ಸೈನ್ಯವನ್ನು ಗಡಿಯುದ್ದಕ್ಕೂ ಸ್ಥಳಾಂತರಿಸುತ್ತಿದೆ. ಸೈನ್ಯವನ್ನು ಸಜ್ಜುಗೊಳಿಸುವ ಪಾಕಿಸ್ತಾನದ ನಿರ್ಧಾರವು ಆಕ್ರಮಣಕಾರಿ ಉದ್ದೇಶವನ್ನು ಸೂಚಿಸುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ ಭಾರತೀಯ ಪಡೆಗಳು ಇದಕ್ಕೆ ಉತ್ತರಿಸಲು ಸಿದ್ಧವಾಗಿವೆ ಮತ್ತು ಜಾಗರೂಕವಾಗಿವೆ ಎಂದು ಸ್ಪಷ್ಟಪಡಿಸಿದೆ.
ಶನಿವಾರ ವಿದೇಶಾಂಗ ಸಚಿವಾಲಯ ಹಾಗೂ ರಕ್ಷಣಾ ಸಚಿವಾಲಯದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ, ‘ಪಾಕಿಸ್ತಾನಿ ಸೇನೆಯು ಗಡಿ ಪ್ರದೇಶಗಳಿಗೆ ತನ್ನ ಸೈನಿಕರನ್ನು ಸ್ಥಳಾಂತರಿಸುತ್ತಿರುವುದನ್ನು ಗಮನಿಸಲಾಗಿದೆ, ಇದು ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸುವ ಆಕ್ರಮಣಕಾರಿ ಉದ್ದೇಶವನ್ನು ಸೂಚಿಸುತ್ತದೆ. ಆದಾಗ್ಯೂ, ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧತೆಯಲ್ಲಿವೆ ಮತ್ತು ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಮತ್ತು ಸೂಕ್ತವಾಗಿ ಪ್ರತಿಕ್ರಿಯಿಸಲಾಗಿದೆ’ ಎಂದು ನುಡಿದರು.
ಪಂಜಾಬ್ ಮೇಲೆ ವೇಗದ ಕ್ಷಿಪಣಿ ಪ್ರಯೋಗ: ಶನಿವಾರ ನಸುಕಿನಲ್ಲಿ ಪಾಕಿಸ್ತಾನ ಪಂಜಾಬ್ ಮೇಲೆ ಅತಿ ವೇಗದ ಕ್ಷಿಪಣಿಯನ್ನು ಉಡಾಯಿಸಿತ್ತು ಮತ್ತು ಶ್ರೀನಗರ, ಅವಂತಿಪುರ ಮತ್ತು ಉಧಂಪುರದಲ್ಲಿನ ವೈದ್ಯಕೀಯ ಘಟಕಗಳ ಮೇಲೆ ದಾಳಿ ಮಾಡಿತ್ತು. ಪಾಕಿಸ್ತಾನದ ಕ್ರಮಗಳಿಗೆ ಸೂಕ್ತ ಉತ್ತರ ನೀಡಲಾಗಿದೆ’ ಎಂದು ಖುರೇಷಿ ಹೇಳಿದರು. ‘ಪಂಜಾಬ್‌ನ ವಾಯುನೆಲೆಯನ್ನು ಗುರಿಯಾಗಿಸಲು ಪಾಕಿಸ್ತಾನ ಸೇನೆಯು ಬೆಳಗಿನ ಜಾವ 1.40 ಕ್ಕೆ ಅತಿ ವೇಗದ ಕ್ಷಿಪಣಿಗಳನ್ನು ಬಳಸಿತು’ ಎಂದು ಅವರು ಬಹಿರಂಗಪಡಿಸಿದರು.
8500 ಕೋಟಿ ಐಎಂಎಫ್ ಸಾಲದ ಭಿಕ್ಷೆಗಾಗಿ ಕದನ ವಿರಾಮಕ್ಕೆ ಒಪ್ಪಿದ್ದ ಪಾಕಿಸ್ತಾನ
ಪಶ್ಚಿಮದ ಗಡಿಯಲ್ಲಿರುವ ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನವು ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು, ಅಡ್ಡಾದಿಡ್ಡಿ ಯುದ್ಧಸಾಮಗ್ರಿಗಳು, ಜೆಟ್‌ಗಳನ್ನು ಬಳಸಿದೆ. ಪಾಕಿಸ್ತಾನದ ಕ್ರಮಗಳಿಗೆ ಪ್ರತಿಕ್ರಿಯೆಯಾಗಿ, ಭಾರತವು ತಕ್ಕುದಾದ ರೀತಿಯಲ್ಲಿ ಪ್ರತಿಕ್ರಿಯಿಸಿದೆ ಎಂದು ಇದೇ ವೇಳೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟಪಡಿಸಿದರು.


