ರಾಹುಲ್ ಗಾಂಧಿ ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ವಿಡಿಯೋ ಬಹಿರಂಗ ಪಡಿಸಿದ ಬಿಜೆಪಿ!
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಸದ್ಯ ಮಧ್ಯಪ್ರದೇಶದಲ್ಲಿ ಸಂಚರಿಸುತ್ತಿದೆ. ಆದರೆ ಯಾತ್ರೆಗೆ ಹೊಸ ವಿವಾದ ಸುತ್ತಿಕೊಂಡಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ವಿಡಿಯೋ ಬಹಿರಂಗ ಮಾಡಿದೆ.
ನವದೆಹಲಿ(ನ.25): ಕಾಂಗ್ರೆಸ್‌ನ ಅತೀ ದೊಡ್ಡ ಯಾತ್ರೆ ಭಾರತ್ ಜೋಡೋ ಸದ್ಯ ಮಧ್ಯಪ್ರದೇಶದಲ್ಲಿ ಸಂಚಲನ ಸೃಷ್ಟಿಸುತ್ತಿದೆ. ಕನ್ಯಾಕುಮಾರಿಯಿಂದ ಆರಂಭಗೊಂಡ ಈ ಯಾತ್ರೆ ಕಾಶ್ಮೀರದಲ್ಲಿ ಅಂತ್ಯಗೊಳ್ಳಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಈಗಾಗಲೇ ಹಲವು ವಿವಾದಕ್ಕೆ ಕಾರಣವಾಗಿದೆ. ಇದೀಗ ಹೊಸ ವಿವಾದ ಮೆತ್ತಿಕೊಂಡಿದೆ. ಮಧ್ಯಪ್ರದೇಶದ ಖಾರ್ಗೊನ್ ಬಳಿ ಯಾತ್ರೆ ಸಂಚರಿಸುತ್ತಿರುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಈ ಕುರಿತು ವಿಡಿಯೋ ಪೋಸ್ಟ್ ಮಾಡಿದ್ದಾರೆ. ವಿಡಿಯೋದ ಅಂತ್ಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವುದನ್ನು ಗಮನಿಸಿ ಎಂದು ಬರೆದುಕೊಂಡಿದ್ದಾರೆ. ಆದರೆ ಕಾಂಗ್ರೆಸ್ ಈ ಆರೋಪವನ್ನು ತಳ್ಳಿ ಹಾಕಿದೆ. ಇದು ಫೇಕ್ ವಿಡಿಯೋ, ಭಾರತ್ ಜೋಡೋ ಯಾತ್ರೆಯಿಂದ ಬೆಚ್ಚಿ ಬಿದ್ದಿರುವ ಬಿಜೆಪಿ ಈ ರೀತಿ ಆರೋಪ ಮಾಡುತ್ತಿದೆ ಎಂದಿದೆ.
ವಿವಾದಿತ ನಟಿ ರಿಚಾ ಚಡ್ಡಾ ಭಾರತ್ ಜೋಡೋ ಯಾತ್ರೆ ಸೇರಲು ಬಹಿರಂಗ ಹೇಳಿಕೆ ಬಳಿಕ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ. ವಿಡಿಯೋದ ಕೊನೆಯಲ್ಲಿ ಈ ಘೋಷಣೆ ಇದೆ. ಕಾಂಗ್ರೆಸ್ ಸಂಸದ ಈ ವಿಡಿಯೋ ಪೋಸ್ಟ್ ಮಾಡಿದ್ದರು. ಬಳಿಕ ಡಿಲೀಟ್ ಮಾಡಿದ್ದಾರೆ. ಇದು ಕಾಂಗ್ರೆಸ್ ಅಸಲಿ ಮುಖ ಎಂದು ಅಮಿತ್ ಮಾಳವಿಯಾ ಟ್ವೀಟ್ ಮಾಡಿದ್ದಾರೆ.
ನೀವು ಹಿಂದಿಯಲ್ಲೇ ಮಾತನಾಡಿ ಎಂದು ವೇದಿಕೆಯಿಂದ ರಾಹುಲ್ ಗಾಂಧಿ ಭಾಷಣ ಅನುವಾದಕ ಎಸ್ಕೇಪ್!
ಬಿಜೆಪಿ ಆರೋಪವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ತಳ್ಳಿ ಹಾಕಿದ್ದಾರೆ. ಸಾರ್ವಜನಿಕರ ಅಭೂತಪೂರ್ವ ಬೆಂಬಲ ನೋಡಿ ಬಿಜೆಪಿ ತಲೆಕೆಡಿಸಿಕೊಂಡಿದೆ. ಇದರಿಂದ ಆಘಾತಕ್ಕೊಳಗಾಗಿ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಸುಳ್ಳಿ ವಿಡಿಯೋಗಳನ್ನು ಹಾಕಿ ಭಾರತ್ ಜೋಡೋ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.
ಭಾರತ್ ಜೋಡೋ ಯಾತ್ರೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಹೇಳಿದ್ದಾರೆ. ರಾಹುಲ್ ಗಾಂಧಿ ಆಯೋಜಿಸುತ್ತಿರುವ ಭಾರತ್ ಜೋಡೋ ಯಾತ್ರೆ ಭಾರತವನ್ನು ಒಂದು ಮಾಡುವುದೇ ಅಥವಾ ಭಾರತವನ್ನು ಒಡೆಯುತ್ತೇವೆ ಎನ್ನುವವರನ್ನು ಒಟ್ಟು ಸೇರಿಸುವುದೇ? ಎಂದು ಶಿವರಾಜ್ ಸಿಂಗ್ ಪ್ರಶ್ನಿಸಿದ್ದಾರೆ.