ನವದೆಹಲಿ(ಏ.12):  ಪಶ್ಚಿಮ ಬಂಗಾಳ ಚುನಾವಣೆ ಹಿಂಸಾಚಾರ, ವಾಕ್ಸಮರ, ರಾಜಕೀಯ ಕೆಸರೆರಚಾಟಕ್ಕೆ ದಾರಿ ಮಾಡಿಕೊಟ್ಟಿದೆ. ಶಾಂತಿಯುತವಾಗಿ ನಡೆಯಬೇಕಿದ್ದ ಮತದಾನದಲ್ಲಿ ಹಿಂಸಾಚಾರ ಪುನಾರವರ್ತನೆಗೊಳ್ಳುತ್ತಿದೆ. 4ನೇ ಹಂತದ ಮತದಾನದಲ್ಲಿ ನಡೆದ ಹಿಂಸಾಚಾರಕ್ಕೆ ಭದ್ರತಾ ಪಡೆಗಗಳನ್ನು ಗುರಿಯಾಗಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಇದೀಗ ಸಿಆರ್‌ಪಿಎಫ್ ಭದ್ರತಾ ಪಡೆ ತಿರುಗೇಟು ನೀಡಿದೆ.

ಮಮತಾ ಆರೋಪ ತಳ್ಳಿಹಾಕಿದ ಚುನಾವಣಾ ಆಯೋಗ; ಭದ್ರತಾ ಪಡೆಗೆ ಕ್ಲಿನ್ ಚಿಟ್!.

ಕೂಚ್‌ಬಿಹಾರ್ ಜಿಲ್ಲೆಯ ಸಿತಾಲ್‌ಕುಚಿಯಲ್ಲಿನ ಮತದಾನದ ವೇಳೆ ನಡೆದ ಹಿಂಸಾಚಾರದಲ್ಲಿ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಐವರು ಬಲಿಯಾಗಿದ್ದರು. ಇದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಣತಿಯಂತೆ ನಡೆದ ಹಿಂಸಾಚಾರ, ಭದ್ರತಾ ಪಡೆಗಳು ಅಮಿತ್ ಶಾ ನಿರ್ದೇಶನದಂತೆ ಕೆಲಸ ಮಾಡುತ್ತಿದೆ. ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಮಮತಾ ಆರೋಪಿಸಿದ್ದರು. ಈ ಆರೋಪವನ್ನು ಸಿಆರ್‌ಪಿಎಫ್ ಡೈರೆಕ್ಟರ್ ಜನರಲ್ ಕುಲ್ದೀಪ್ ಸಿಂಗ್ ನಿರಾಕರಿಸಿದ್ದಾರೆ.

ಬಂಗಾಳದ ಹಿಂಸಾಚಾರಕ್ಕೆ ಅಮಿತ್ ಶಾ ಕಾರಣ ಎಂದ ಮಮತಾ ಬ್ಯಾನರ್ಜಿ!.

ಚುನಾವಣೆ ಕರ್ತವ್ಯಕ್ಕೆ ನಿಯೋಯಿಸಿರುವ CRPF ಭದ್ರತಾ ಪಡೆ ಚುನಾವಣಾ ಆಯೋಗದ ನಿರ್ದೇಶನದಂತೆ ಕೆಲಸ ಮಾಡಲಿದೆ. ರಾಜಕೀಯ ಪಕ್ಷಗಳ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲ್ಪಟ್ಟಿರುವ ಅರೆಸೈನಿಕ ಪಡೆಗಳು ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಕುಲ್ದೀಪ್ ಸಿಂಗ್ ಹೇಳಿದ್ದಾರೆ.

ಘಟನೆ ದಿನವೇ ಚುನಾವಣಾ ಆಯೋಗ ಪೊಲೀಸ್ ಹಾಗೂ ಚುನಾವಣಾ ಅಧಿಕಾರಿಗಳಿಂದ ವರದಿ ತರಿಸಿಕೊಂಡಿತ್ತು. ಬಳಿಕ ಭದ್ರತಾ ಪಡೆಗಳಿಂದ ದುಷ್ಕರ್ಮಿಗಳು ಶಸ್ತಾಸ್ತ್ರ ಕಸಿಯಲು ಬಂದಾಗ ಅನಿವಾರ್ಯಾಗಿ ಗುಂಡಿನ ದಾಳಿ ನಡೆಸಲಾಗಿದೆ. ಇದರ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಸಿಆರ್‌ಪಿಎಫ್ ಕೂಡ ಮಮತಾ ಆರೋಪವನ್ನು ಅಲ್ಲಗೆಳೆದಿದೆ.