ನವದೆಹಲಿ(ಜೂ.01): ಲಸಿಕೆ ಸಿಕ್ಕಲ್ಲ, ಶಾಲೆ ಆರಂಭವೂ ಬೇಡ. ಇದು ಪೋಷಕರ ಅಭಿಯಾನ. ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನ್‌ಲಾಕ್ 1 ಮಾರ್ಗಸೂಚಿಯಲ್ಲಿ ಶಾಲಾ ಕಾಲೇಜು ಜೂನ್ 30 ಬಳಿಕ ಆರಂಭವಾಗಲಿದೆ ಎಂದಿದ್ದಾರೆ. ಇದಕ್ಕೆ ಮಕ್ಕಳ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಷ್ಟೇ ಅಲ್ಲ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ವೇಳೆ  ಕೇಂದ್ರ ಸರ್ಕಾರ ಶಾಲಾ ಆರಂಭಿಸುವ ನಿರ್ಧಾರ ಬದಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊರೋನಾದಿಂದ ತತ್ತರಿಸಿರುವ ಜನತೆಗೆ ವೈದ್ಯನ ಗುಡ್‌ನ್ಯೂಸ್!

ಮಕ್ಕಳ ಪೋಷಕರ ಸಂಘ ಇದೀಗ ಜುಲೈ ತಿಂಗಳಲ್ಲಿ ಶಾಲೆ ಆರಂಭಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಚೇಂಜ್.ಆರ್ಗ್ ಆನ್‌ಲೈನ್ ಮೂಲಕ ಪೋಷಕರು ಆನ್‌ಲೈನ್ ಸಹಿ ಸಂಗ್ರಹಿಸಿದ್ದಾರೆ. ಕೇವಲ 24 ಗಂಟೆಯಲ್ಲಿ 2.13 ಲಕ್ಷ ಪೋಷಕರು ಸಹಿ ಹಾಕಿದ್ದಾರೆ. ನೋ ವ್ಯಾಕ್ಸಿನ್, ನೋ ಸ್ಕೂಲ್ ಎಂದು ಆನ್‌ಲೈನ್ ಮೂಲಕ ಅಭಿಯಾನ ಆರಂಭಿಸಿದ್ದಾರೆ. 

120 ಲಸಿಕೆಗಳು ಅಭಿವೃದ್ಧಿ ಹಂತದಲ್ಲಿ: ಕೊರೋನಾ ಲಸಿಕೆ ಎಲ್ಲಿಗೆ ಬಂತು?

ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೂನ್ ತಿಂಗಳಲ್ಲಿ ಕರೋನಾ ವೈರಸ್ ನಿಯಂತ್ರಣಕ್ಕೆ ಬರುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಇಷ್ಟೇ ಅಲ್ಲ ಇದುವರಗೂ ಲಸಿಕೆ ಕೂಡ ಕಂಡು ಹಿಡಿದಿಲ್ಲ. ಹೀಗಾಗಿ ಜುಲೈ ತಿಂಗಳಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸುವುದು ಸುರಕ್ಷಿತವಲ್ಲ ಎಂದು ಪೋಷಕರು ಹೇಳಿದ್ದಾರೆ. ಈ ಕಾರಣದಿಂದ ಕೇಂದ್ರ ಸರ್ಕಾರ ಶಾಲಾ ಕಾಲೇಜು ಆರಂಭದಲ್ಲಿ ಪುನರ್ ಪರೀಶೀಲನೆ ನಡೆಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.