ಜ.29ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ| ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಾಜ್ಯಸಭೆ| ಸಂಜೆ 4ರಿಂದ ರಾತ್ರಿ 8ರವರೆಗೆ ಲೋಕಸಭೆ ಕಲಾಪ| ಎಲ್ಲಾ ಸಂಸದರಿಗೂ ಆರ್‌ಟಿಪಿಸಿಆರ್‌ ಪರೀಕ್ಷೆ ಕಡ್ಡಾಯ

ನವದೆಹಲಿ(ಜ.20): ಜನವರಿ 29ರಿಂದ ಸಂಸತ್ತಿನ ಬಜೆಟ್‌ ಅಧಿವೇಶನ ಆರಂಭವಾಗಲಿದೆ. ಕೊರೋನಾ ಹಿನ್ನೆಲೆಯಲ್ಲಿ ಈ ಸಲವೂ ಸಕಲ ಮುಂಜಾಗ್ರತೆಯೊಂದಿಗೆ ಅಧಿವೇಶನ ನಡೆಸಲು ನಿರ್ಧರಿಸಲಾಗಿದ್ದು, ಜ.27 ಹಾಗೂ 28ರಂದು ಎಲ್ಲ ಸದಸ್ಯರಿಗೆ ಹಾಗೂ ಸಂಸತ್ತಿನ ಸಿಬ್ಬಂದಿಗೆ ಕೋವಿಡ್‌ ಆರ್‌ಟಿಪಿಸಿಆರ್‌ ಟೆಸ್ಟ್‌ ನಡೆಸಲಾಗುತ್ತದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲೋಕಭಾಧ್ಯಕ್ಷ ಓಂ ಬಿರ್ಲಾ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಸಂಸದರಿಗೆ ಸಂಸತ್‌ ಆವರಣದಲ್ಲಿ ಹಾಗೂ ಅವರವರ ಮನೆಯ ಬಳಿಯೇ ಕೋವಿಡ್‌ ಟೆಸ್ಟ್‌ ನ ನಡೆಸಲಾಗುತ್ತದೆ ಎಂದರು.

ಈ ಹಿಂದಿನಂತೆಯೇ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪಗಳನ್ನು ಸಾಮಾಜಿಕ ಅಂತರ ಪಾಲನೆಯೊಂದಿಗೆ 2 ಪ್ರತ್ಯೇಕ ಅವಧಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಾಜ್ಯಸಭೆ ಹಾಗೂ ಸಂಜೆ 4ರಿಂದ ರಾತ್ರಿ 8ರವರೆಗೆ ಲೋಕಸಭೆ ಕಲಾಪ ನಡೆಯಲಿದೆ ಎಂದರು.