Union Budget Session: ಜನವರಿ 31 ರಿಂದ 66 ದಿನಗಳ ಸಂಸತ್ ಬಜೆಟ್ ಅಧಿವೇಶನ: ಪ್ರಲ್ಹಾದ್ ಜೋಶಿ

ಕೇಂದ್ರ ಬಜೆಟ್ ಅಧಿವೇಶನ ಇದೇ ತಿಂಗಳ 31 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಜಾದ್ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಈ ಬಾರಿ 66 ದಿನಗಳ ಸಂಸತ್ ಅಧಿವೇಶನ ನಡೆಸಲು ಕಾರ್ಯಕ್ರಮ ಹಾಕಿಕೊಂಡಿರುವುದಾಗಿ ಹೇಳಿದ್ದಾರೆ. 

Parliament's Budget Session From January 31 To April 6th gow

ನವದೆಹಲಿ (ಜ.13): ಕೇಂದ್ರ ಬಜೆಟ್ ಅಧಿವೇಶನ ಇದೇ ತಿಂಗಳ 31 ರಿಂದ ಆರಂಭವಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಜಾದ್ ಜೋಶಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಈ ಬಾರಿ 66 ದಿನಗಳ ಸಂಸತ್ ಅಧಿವೇಶನ ನಡೆಸಲು ಕಾರ್ಯಕ್ರಮ ಹಾಕಿಕೊಂಡಿರುವುದಾಗಿ ಹೇಳಿದ್ದಾರೆ. ಜನವರಿ 31ರಂದು ಆರಂಭಗೊಳ್ಳುವ ಲೋಕಸಭೆ ಹಾಗೂ ರಾಜ್ಯಸಭೆಯ ಕಲಾಪಗಳು ಎಪ್ರಿಲ್ 6 ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಬಜೆಟ್ ಮಂಡನೆ, ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಸೇರಿದಂತೆ ಇತರ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.

 

 Business Ideas : ಆಧಾರ್ ಕಾರ್ಡ್ ಕೇಂದ್ರ ತೆರೆದು ಗಳಿಕೆ ಶುರು ಮಾಡಿ

ಅಧಿವೇಶನದ ಸಂದರ್ಭದಲ್ಲಿ, ಸಂಸತ್ತಿನ ಸ್ಥಾಯಿ ಸಮಿತಿ ಎದುರಿರುವ ಹಲವು ರಾಜ್ಯಗಳ ಅನುದಾನಗಳ ಬೇಡಿಕೆ ಕುರಿತು ನಿರ್ಣಯ ಕೈಗೊಳ್ಳಲು ಹಾಗೂ ವಿವಿಧ ಸಚಿವಾಲಯಗಳಿಗೆ ಸಂಬಂಧಪಟ್ಟ ವಿಷಯಗಳ ಕುರಿತು ವರದಿ ಸಿದ್ಧ ಪಡಿಸಲು ಫೆಬ್ರವರಿ 14 ರಿಂದ ಮಾರ್ಚ್ 12ರ ವರೆಗೆ ವಿರಾಮ ಪಡೆಯಲಾಗುವುದು ಎಂದು ಇದೇ ವೇಳೆ ಜೋಶಿ ತಿಳಿಸಿದ್ದಾರೆ.

ಇಂದಿನಿಂದ ಜ. 28ರವರೆಗೆ ಬೆಂಗಳೂರಿನ ಈ ಪ್ರದೇಶದ ಸುತ್ತ ನಿತ್ಯ 2 ತಾಸು ವಿದ್ಯುತ್‌ ಇರಲ್ಲ..!

Latest Videos
Follow Us:
Download App:
  • android
  • ios