ರತನ್ ಟಾಟಾ ಪಾರ್ಥಿವ ಶರೀರ ಮುಂದೆ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಹಿಂದೂ ಗುರುಗಳಿಂದ ಪ್ರಾರ್ಥನೆ
ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ಮುಂಬೈನಲ್ಲಿ ನಿಧನರಾದರು. ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು, ವಿವಿಧ ಧರ್ಮಗಳ ಗುರುಗಳು ಪ್ರಾರ್ಥನೆ ಸಲ್ಲಿಸಿದರು.
ಮುಂಬೈ: ಭಾರತದ ಖ್ಯಾತ ಉದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ರಾತ್ರಿ 11:30ಕ್ಕೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮಹಾರಾಷ್ಟ್ರ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲು ಸೂಚಿಸಿದೆ. ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ನಲ್ಲಿ ರತನ್ ಟಾಟಾ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಜೆ 4 ಗಂಟೆಯವರೆಗೆ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಂತರ ವರ್ಲಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಸದ್ಯ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ ಎಲ್ಲಾ ಧರ್ಮದ ಗುರುಗಳಿಂದ ಪ್ರಾರ್ಥನೆ ಸಲ್ಲಿಸಲಾಗುತ್ತಿರುವ ದೃಶ್ಯಗಳು ಕಂಡು ಬರುತ್ತಿವೆ. ಪಾರ್ಸಿ, ಮುಸ್ಲಿಂ, ಕ್ರಿಶ್ಚಿಯನ್, ಸಿಖ್ ಮತ್ತು ಹಿಂದೂ ಧರ್ಮಗಳ ಪಾದ್ರಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಎಲ್ಲಾ ಧರ್ಮದವರು ಸಾಲಿನಲ್ಲಿ ನಿಂತು ಪ್ರಾರ್ಥನೆ ಸಲ್ಲಿಸುತ್ತಿರೋ ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಫೋಟೋಗಳಿಗೆ ಕಮೆಂಟ್ ಮಾಡುತ್ತಿರುವ ಜನರು, ರತನ್ ಟಾಟಾ ನಿಜವಾಗಲೂ ಭಾರತದ ಐಕಾನ್ ಎಂದು ಬರೆಯುತ್ತಿದ್ದಾರೆ.
ಉದ್ಯಮಿ ರತನ್ ಟಾಟಾ ಪಾರ್ಥಿವ ಶರೀರಕ್ಕೆ ಸಾರ್ವಜನಿಕರು ಅಂತಿಮ ನಮನ ಸಲ್ಲಿಸುತ್ತಿರುವಾಗ NCPAನಲ್ಲಿ ಎಲ್ಲಾ ಧರ್ಮದ ಗುರುಗಳು ಪ್ರಾರ್ಥನೆ ಮಾಡುತ್ತಿರೋದನ್ನು ಕಂಡು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.