ಪುಷ್ಪಕ್ ಎಕ್ಸ್‌ಪ್ರೆಸ್- ಕರ್ನಾಟಕ ಎಕ್ಸ್‌ಪ್ರೆಸ್ ದುರಂತ; ಪ್ರಯಾಣಿಕರ ಮೇಲೆ ಹರಿದ ರೈಲು
ಜಲಗಾಂವ್‌ನಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನಿಂದ ಇಳಿದ ಪ್ರಯಾಣಿಕರ ಮೇಲೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದು 6 ಜನರು ಸಾವನ್ನಪ್ಪಿದ್ದಾರೆ. ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಪ್ರಯಾಣಿಕರು ರೈಲಿನಿಂದ ಹೊರಗೆ ಜಿಗಿದಿದ್ದರು.

ಜಲಗಾಂವ್: ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದ್ದು, ಹಳಿ ಮೇಲೆ ನಿಂತಿದ್ದ ಪ್ರಯಾಣಿಕರ ಮೇಲೆ ರೈಲು ಹರಿದಿದೆ. ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣಿಕರು, ಟ್ರೈನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಕೆಳಗೆ ಇಳಿದಿದ್ದರು. ಈ ವೇಳೆ ಪಕ್ಕದ ಟ್ರ್ಯಾಕ್ ಮೇಲೆ ಬಂದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರಿಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ 8 ಜನರು ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.
ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಯಿಂದ ಪ್ರಯಾಣಿಕರು ಹೊರಗೆ ಜಿಗಿದಿದ್ದಾರೆ ಎನ್ನಲಾಗಿದೆ. ಹಳಿ ಮೇಲೆ ಬಿದ್ದ ಪ್ರಯಾಣಿಕರ ಮೇಲೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಹರಿದಿದೆ ಎಂದು ತಿಳಿದು ಬಂದಿದೆ. ಇದುವರೆಗೂ ರೈಲ್ವೆ ಇಲಾಖೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರ ಬಂದಿಲ್ಲ. ಮೃತದೇಹಗಳನ್ನು ಆಸ್ಪತ್ರೆಗೆ ಕಾರ್ಯ ನಡೆದಿದೆ. ಮೃತರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.