ದೆಹಲಿ: ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪಾಟ್ನಾ-ದೆಹಲಿ ಸ್ಪೈಸ್ ಜೆಟ್ ವಿಮಾನವನ್ನು ತಕ್ಷಣ ಲ್ಯಾಂಡ್ ಮಾಡಲಾಗಿದೆ ಲ್ಯಾಂಡಿಂಗ್ ಸುರಕ್ಷಿತವಾಗಿದೆ ಎಂದು ವರದಿಗಳು ತಿಳಿಸಿವೆ.

ದೆಹಲಿ: ಟೇಕ್ ಆಫ್ ಆದ ಕೆಲವೇ ಕ್ಷಣದಲ್ಲಿ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪಾಟ್ನಾ-ದೆಹಲಿ ಸ್ಪೈಸ್ ಜೆಟ್ ವಿಮಾನವನ್ನು ತಕ್ಷಣ ಲ್ಯಾಂಡ್ ಮಾಡಲಾಗಿದೆ ಲ್ಯಾಂಡಿಂಗ್ ಸುರಕ್ಷಿತವಾಗಿದೆ ಎಂದು ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ, ವಿಮಾನವು ಪಾಟ್ನಾ ವಿಮಾನ ನಿಲ್ದಾಣದಿಂದ ದೆಹಲಿಯೆಡೆಗೆ ಹೊರಟಿತ್ತು. ಟೇಕ್ ಆಫ್ ಆದ ಕೂಡಲೇ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. 180 ಕ್ಕೂ ಹೆಚ್ಚು ಪ್ರಯಾಣಿಕರು ಈ ವಿಮಾನದಲ್ಲಿದ್ದರು ಮತ್ತು ಯಾರಿಗೂ ಏನೂ ಗಾಯವಾದ ಬಗ್ಗೆ ವರದಿಯಾಗಿಲ್ಲ.

ಪಾಟ್ನಾ ಡಿಎಂ ಚಂದ್ರಶೇಖರ್ ಸಿಂಗ್ (Chandrashekhar Singh) ಮಾತನಾಡಿ, ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು , ಜಿಲ್ಲಾ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ನಂತರ ತಕ್ಷಣವೇ ದೆಹಲಿಗೆ ಹೊರಟಿದ್ದ ವಿಮಾನವು ಪಾಟ್ನಾ ವಿಮಾನ ನಿಲ್ದಾಣಕ್ಕೆ ಮರಳಿತು. ಎಲ್ಲಾ 185 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಬೆಂಕಿಗೆ ತಾಂತ್ರಿಕ ದೋಷವೇ ಕಾರಣ. ಎಂಜಿನಿಯರಿಂಗ್ ತಂಡವು ಘಟನೆಯನ್ನು ವಿಶ್ಲೇಷಿಸುತ್ತಿದೆ ಎಂದು ಸಿಂಗ್ ಹೇಳಿದರು.

Scroll to load tweet…

ಸುದ್ದಿ ಸಂಸ್ಥೆ ANI ಪೋಸ್ಟ್ ಮಾಡಿದ ತುರ್ತು ಲ್ಯಾಂಡ್ ಆದ ಸ್ಪೈಸ್‌ಜೆಟ್ ವಿಮಾನದ ವೀಡಿಯೊದಲ್ಲಿ ರನ್‌ವೇಯಲ್ಲಿ ಪ್ರಯಾಣಿಕರು ವಿಮಾನದಿಂದ ಇಳಿಯುತ್ತಿರುವುದು ಕಂಡು ಬಂದಿದೆ. ವರದಿ ಬಂದ ತಕ್ಷಣ ಟ್ವಿಟರ್‌ನಲ್ಲಿ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ (Priyanka Chaturvedi) ಟ್ವಿಟ್‌ ಮಾಡಿದ್ದು, ಇದು ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ ಎಂದಿದ್ದಾರೆ. ಸಚಿವರೊಂದಿಗೆ, ವಿಮಾನಯಾನ ಕಾರ್ಯದರ್ಶಿಯೊಂದಿಗೆ ಪದೇ ಪದೇ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಅವರು ಯಾವಾಗ ಈ ವಿಚಾರದ ಬಗ್ಗೆ ಧ್ವನಿ ಎತ್ತುತ್ತಾರೆ ಹಾಗೂ ಸಂಭವಿಸುವ ದೊಡ್ಡ ಅನಾಹುತವನ್ನು ತಪ್ಪಿಸುತ್ತಾರೆ ಎಂದು ತಿಳಿದಿಲ್ಲ ಎಂದು ಚತುರ್ವೇದಿ ಟ್ವೀಟ್ ಮಾಡಿದ್ದಾರೆ.

Scroll to load tweet…

 ಸ್ಪೈಸ್‌ ವಿಮಾನಯಾನ ಸಂಸ್ಥೆಯ ವಿಮಾನದಲ್ಲಿ ಇತ್ತೀಚಿನ ದಿನಗಳಲ್ಲಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಅನೇಕ ಘಟನೆಗಳು ನಡೆದಿದ್ದವು. ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು (Directorate General of Civil Aviation) ಕಳೆದ ತಿಂಗಳು ತನ್ನ ಬೋಯಿಂಗ್ 737 ಮ್ಯಾಕ್ಸ್ ವಿಮಾನದ ಪೈಲಟ್‌ಗಳಿಗೆ ದೋಷಪೂರಿತ ಸಿಮ್ಯುಲೇಟರ್‌ನಲ್ಲಿ ತರಬೇತಿ ನೀಡಿದ್ದಕ್ಕಾಗಿ ಸ್ಪೈಸ್‌ಜೆಟ್‌ಗೆ ₹10 ಲಕ್ಷ ದಂಡವನ್ನು ವಿಧಿಸಿತು ಏಕೆಂದರೆ ಇದು ವಿಮಾನ ಸುರಕ್ಷತೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ. 

ಏಪ್ರಿಲ್‌ನಲ್ಲಿ, DGCA 90 ಸ್ಪೈಸ್‌ಜೆಟ್ ಪೈಲಟ್‌ಗಳು ಸರಿಯಾಗಿ ತರಬೇತಿ ಪಡೆದಿಲ್ಲ ಎಂದು ಕಂಡುಹಿಡಿದ ನಂತರ ಮ್ಯಾಕ್ಸ್ ವಿಮಾನವನ್ನು ಅವರು ನಿರ್ವಹಿಸುವುದನ್ನು ನಿರ್ಬಂಧಿಸಿತ್ತು.