Karnataka Hijab Verdict: ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಲು ಸಿದ್ಧತೆ!

* ತರಗತಿಯಲ್ಲಿ ಇನ್ಮುಂದೆ ಹಿಜಾಬ್ ಧರಿಸುವಂತಿಲ್ಲ

* ಐತಿಹಾಸಿಕ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್‌

* ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರಿಂ ಮೆಟ್ಟಿಲೇರಲು ಅರ್ಜಿದಾರರ ನಿರ್ಧಾರ

Petitioners and Waqf Board to move SC against Karnataka HC Verdict on Hijab Ban pod

ಬೆಂಗಳೂರು(ಮಾ.15): ಈಗಾಗಲೇ ಕರ್ನಾಟಕ ಹೈಕೋರ್ಟ್‌ ಹಿಜಾಬ್ ವಿವಾದದ ವಿಚಾರವಾಗಿ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಶಾಲೆಯಲ್ಲಿ ಹಿಜಾಬ್ ಧರಿಸುವ ವಿಚಾರವಾಗಿ ತೀರ್ಪು ಪ್ರಕಟಿಸಿದೆ ಹೈಕೋರ್ಟ್‌ ತ್ರಿಸದಸ್ಯ ಪೀಠ, ತರಗತಿಗಳಿಗೆ ಸಮವಸ್ತ್ರ ಧರಿಸಿಯೇ ಆಗಮಿಸಬೇಕೆಂದು ಆದೇಶಿಸಿದೆ. ಆದರೀಗ ಈ ತೀರ್ಪಿನ ಬೆನ್ನಲ್ಲೇ ವಿದ್ಯಾರ್ಥಿಗಳ ಪರ ವಕೀಲರು ಈ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧತೆ ಆರಂಭಿಸಿದ್ದಾರೆ.

ಹೌದು ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ವಕ್ಫ್‌ ಬೋರ್ಡ್‌ ನಿರ್ಧರಿಸಿದೆ. ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯಿಸಿದ ವಕ್ಫ್ ಬೋರ್ಡ್‌ ಅಧ್ಯಕ್ಷ ಶಾಫಿ ಸಾದಿ ಮೂವರು ಜಡ್ಜ್‌ಗಳಲ್ಲಿ ಒಬ್ಬರು ಮುಸಲ್ಮಾನರಾಗಿದ್ದರು. ಹಿಜಾಬ್ ಕಕುರಾನ್‌ನಲ್ಲಿ ಕಡ್ಡಾಯ ಎನ್ನಲಾಗಿದೆ. ಯಾವ ಆಧಾರದ ಮೇಲೆ ತೀರ್ಪು ಕೊಟ್ಟಿದ್ದಾರೆ ಗೊತ್ತಿಲ್ಲ. ಹೀಗಾಗಿ ಧಾರ್ಮಿಕ ಮುಖಂಡರೊಂದಿಗೆ ಚರ್ಚಿಸಿ ಸುಪ್ರೀಂ ಕೋರ್ಟ್‌ಗೆ ಹೋಹಗುವ ನಿರ್ಧಾರ ಕೈಗೊಳ್ಳುತ್ತೇವೆ. ಕಾನೂನಾತ್ಮಕವಾಗಿ ನಮ್ಮ ಹಕ್ಕನ್ನು ಪಡೆದುಕೊಳ್ಳಲು ಯತ್ನಿಸುತ್ತೇವೆ ಎಂದಿದ್ದಾರೆ. 

ಹೈಕೋರ್ಟ್‌ ಹೇಳಿದ್ದೇನು?

ಹಿಜಾಬ್‌ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸುವ ಮತ್ತು ಸಮವಸ್ತ್ರವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ರಾಜ್ಯ ಸರ್ಕಾರ ಫೆ.5ರಂದು ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್‌ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಏಳು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಈ ಎಲ್ಲ ಅರ್ಜಿಗಳ ಕುರಿತು ಸತತ 11 ದಿನ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ, ನ್ಯಾ.ಕೃಷ್ಣ ಎಸ್‌. ದೀಕ್ಷಿತ್‌ ಮತ್ತು ನ್ಯಾ.ಜೆ.ಎಂ. ಖಾಜಿ ಅವರನ್ನು ಒಳಗೊಂಡ ಪೀಠ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರ್ಕಾರದ ಆದೇಶ ಪಾಲನೆ ಮಾಡಬೇಕು, ಇದು ಕಾನೂನು ಬದ್ಧವಾಗಿದೆ ಎಂದಿದೆ.

Karnataka Hijab Verdict: ಹಿಜಾಬ್, ಕೇಸರಿ ಯಾವುದೂ ಇಲ್ಲ, ತರಗತಿಗೆ ಸಮವಸ್ತ್ರ ಧರಿಸಿಯೇ ಎಂಟ್ರಿ

ಹೈಕೋರ್ಟ್‌ ತೀರ್ಪಿನಲ್ಲಿ ಉಲ್ಲೇಖಿಸಿದ ಮಹತ್ವದ ವಿಚಾರಗಳು:

1- ವಿದ್ಯಾರ್ಥಿನಿಯರು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಲೇಬೇಕು
2. ಹಿಜಾಬ್ ಇಸ್ಲಾಮಿನ ಅವಿಭಾಜ್ಯ ಅಂಗವೇ ಅಲ್ಲ- ಹೈಕೋರ್ಟ್ ಐತಿಹಾಸಿಕ ತೀರ್ಪು
3. ಸಮವಸ್ತ್ರ ಕಡ್ಡಾಯಕ್ಕೆ ವಿದ್ಯಾರ್ಥಿಗಳು ವಿರೋಧಿಸುವಂತಿಲ್ಲ
4. ವಿದ್ಯಾರ್ಥಿನಿಯರು ಸಮವಸ್ತ್ರ ಸಂಹಿತೆ ಆದೇಶ ಪಾಲಿಸಲೇಬೇಕು
5. ಸಮವಸ್ತ್ರ ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ
6. ಹಿಜಾಬ್ಗೆ ಅವಕಾಶ ಕೊಡುವುದು ಬಿಡುವುದು ಆಯಾ ಸಂಸ್ಥೆಗೆ ಬಿಟ್ಟದ್ದು
7. ಹಿಜಾಬ್ಗೆ ಅವಕಾಶ ಇಲ್ಲ ಎಂದರೆ ಮುಸ್ಲಿಂ ವಿದ್ಯಾರ್ಥಿನಿಯರ ಧಾರ್ಮಿಕ ಹಕ್ಕಿನ ಉಲ್ಲಂಘನೆ ಅಲ್ಲ
8. ಶಾಲಾ- ಕಾಲೇಜಿನ ಸಮವಸ್ತ್ರ ನೀತಿ ಪಾಲಿಸುವುದು ವಿದ್ಯಾರ್ಥಿನಿಯರ ಕರ್ತವ್ಯ

ರಾಜಕೀಯ ಬಣ್ಣ, ವಿದೇಶದಲ್ಲೂ ಸದ್ದು:

ಉಡುಪಿಯ ಕಾಲೇಜಿನಲ್ಲಿ ಮೊದಲಿಗೆ ಆರಂಭಗೊಂಡ ಈ ಹಿಜಾಬ್‌ ವಿವಾದ ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ವಿಸ್ತರಿಸಿತ್ತು. ಮೊದಲಿಗೆ ಧಾರ್ಮಿಕ ಸಂಘಟನೆಗಳ ಬೆಂಬಲ ಪಡೆದ ವಿವಾದಕ್ಕೆ ಬಳಿಕ ರಾಜಕೀಯ ಬಣ್ಣವೂ ಮೆತ್ತಿಕೊಂಡಿತು. ಹೀಗಾಗಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲೂ ಈ ವಿಷಯ ರಾಜಕೀಯ ಪಕ್ಷಗಳ ನಡುವೆ ಕೆಸರೆರಚಾಟಕ್ಕೆ ವೇದಿಕೆಯಾಯ್ತು. ಅಷ್ಟುಸಾಲದೆಂಬಂತೆ ನೊಬೆಲ್‌ ಪುರಸ್ಕೃತೆ ಮಲಾಲಾ ಮೊದಲಾದವರು ಇದರಲ್ಲಿ ಮೂಗು ತೂರಿಸಿದ ಪರಿಣಾಮ, ವಿವಾದ ದೇಶದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸುದ್ದಿಯಾಯ್ತು.

Hijab Row: ಸದನದಲ್ಲಿ HDK ಹಿಜಾಬ್‌ ಪ್ರಸ್ತಾಪಕ್ಕೆ ಜಮೀರ್‌ ಗರಂ

ಉಡುಪಿಯಲ್ಲಿ ವಿವಾದದ ಮೂಲ, ಬಳಿಕ ಏನೇನಾಯ್ತು?

ಇಡೀ ಹಿಜಾಬ್‌ ವಿವಾದದ ಮೂಲ ಉಡುಪಿಯ ಸರ್ಕಾರಿ ಮಹಿಳಾ ಪಿಯು ಕಾಲೇಜು. ಈ ಕಾಲೇಜಿನ 12 ವಿದ್ಯಾರ್ಥಿನಿಯರು ಹಿಜಾಬ್‌ ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ಕೋರಿ ಈ ವರ್ಷದ ಜನವರಿಯಲ್ಲಿ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದರು. ಪ್ರಾಂಶುಪಾಲರು ಅವಕಾಶ ನಿರಾಕರಿಸಿದ ಬಳಿಕ 6 ವಿದ್ಯಾರ್ಥಿನಿಯರು ಹಿಜಾಬ್‌ ತೆಗೆದು ತರಗತಿಗೆ ಹಾಜರಾದರು. ಉಳಿದ 6 ವಿದ್ಯಾರ್ಥಿನಿಯರು ತರಗತಿಗೆ ಗೈರಾದರು. ಇವರ ಬೆಂಬಲಕ್ಕೆ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ನಿಂತಿತು.

ಮತ್ತೊಂದೆಡೆ ಹಿಜಾಬ್‌ಗೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಬರಲು ಮುಂದಾದರು. ಈ ವಿವಾದ ಕುಂದಾಪುರದ ಎರಡು ಮೂರು ಕಾಲೇಜು ಸೇರಿದಂತೆ ರಾಜ್ಯದ ವಿವಿಧ ಕಡೆಗಳಿಗೆ ಹಬ್ಬುತ್ತಿದ್ದಂತೆ ರಾಜ್ಯ ಸರ್ಕಾರ ಜ.27ರಂದು ಯಥಾಸ್ಥಿತಿ ಕಾಪಾಡುವಂತೆ ಆದೇಶಿಸಿತು. ಈ ಮಧ್ಯ ರಾಜ್ಯ ಸರ್ಕಾರ ಫೆ.5ರಂದು ಹಿಜಾಬ್‌ ಧರಿಸಿ ಶಾಲಾ-ಕಾಲೇಜುಗಳಿಗೆ ಧರಿಸುವುದನ್ನು ನಿಷೇಧಿಸಿ ಮತ್ತು ಸಮವಸ್ತ್ರವನ್ನು ನಿರ್ಧರಿಸುವ ಜವಾಬ್ದಾರಿಯನ್ನು ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ (ಸಿಡಿಸಿ) ವಹಿಸಿ ಆದೇಶಿಸಿತು. ಈ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

Latest Videos
Follow Us:
Download App:
  • android
  • ios