ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದ್ದು, ಆಹಾರ ಮತ್ತು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಜವಾಬ್ದಾರಿ ನೀಡಲಾಗಿದೆ. ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನಾರಾದ ಹಿನ್ನೆಲೆಯಲ್ಲಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಷ್ಟ್ರಪತಿ ಭವನ ಈ ಪ್ರಕಟಣೆ ಹೊರಡಿಸಿದೆ.

ಪ್ರಸ್ತುತ ರೈಲ್ವೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಪಿಯೂಷ್ ಗೋಯಲ್ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯನ್ನು ನೋಡಿಕೊಳ್ಳುತ್ತಿದ್ದಾರೆ. ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಕ್ಷದ ಫೌಂಡರ್ ರಾಮ್ ವಿಲಾಸ್ ಪಾಸ್ವಾನ್ 74ನೇ ವಯಸ್ಸಿನಲ್ಲಿ ಗುರುವಾರ ನಿಧನರಾಗಿದ್ದಾರೆ.

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇನ್ನಿಲ್ಲ

ಅವರ ಪುತ್ರ ಚಿರಾಗ್ ಪಾಸ್ವಾನ್ ಈ ವಿಚಾರವನ್ನು ಟ್ವಿಟರ್ ಮೂಲಕ ತಿಳಿಸಿದ್ದರು. ಪಾಸ್ವಾನ್ ಅವರಿಗೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಹಾರ್ಟ್ ಸರ್ಜರಿ ಮಾಡಲಾಗಿತ್ತು. ಅವರು ಆಹಾರ ಮತ್ತು ಗ್ರಾಹಕ ವ್ಯವಹಾರ ಇಲಾಖೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಪಾಸ್ವಾನ್ ಭಾಷಣದಿಂದಲೇ ಸಿಕ್ಕಿತ್ತು ದಲಿತಗೆ ಸ್ವಾಮೀಜಿ ಪಟ್ಟ