ಕೊರೋನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಕೈಬಿಟ್ಟ ಸರ್ಕಾರ!
* ಕೋವಿಡ್ ನಿರ್ವಹಣೆ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿ ಔಟ್
* ಸೋಂಕಿತರ ಮೇಲೆ ಯಾವುದೇ ಪರಿಣಾಮ ಕಂಡುಬರದ ಹಿನ್ನೆಲೆ
* ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ
ನವದೆಹಲಿ(ಮೇ.18): ಕೋವಿಡ್ ನಿರ್ವಹಣೆ ಕುರಿತು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಅದರಲ್ಲಿ ಪ್ಲಾಸ್ಮಾ ಥೆರಪಿಯನ್ನು ಕೈಬಿಟ್ಟಿದೆ. ಸೋಂಕಿತರಿಗೆ ನೀಡುವ ಪ್ಲಾಸ್ಮಾಕ್ಕೆ ದೇಶಾದ್ಯಂತ ಭಾರೀ ಬೇಡಿಕೆ ಇರುವ ಹೊತ್ತಿನಲ್ಲೇ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಈ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಕೋವಿಡ್ ವೈದ್ಯಕೀಯ ಮಾರ್ಗಸೂಚಿಯಿಂದ ಪ್ಲಾಸ್ಮಾ ಥೆರಪಿ ಔಟ್!
ಗಂಭೀರ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಿದ ಹೊರತಾಗಿಯೂ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಸಾವಿನಿಂದ ಪಾರಾಗುತ್ತಿರುವ ಯಾವುದೇ ದಾಖಲೆಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಸರ್ಕಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿದೆ.
"
ಪ್ರಸಕ್ತ ಮಾರ್ಗಸೂಚಿಗಳ ಅನ್ವಯ, ಮದ್ಯಮ ಸ್ವರೂಪದ ಸೋಂಕಿತರಿಗೆ ಆರಂಭದ ಹಂತದಲ್ಲೇ ಅಂದರೆ ಲಕ್ಷಣ ಕಾಣಿಸಿಕೊಂಡ 7 ದಿನಗಳ ಒಳಗಾಗಿ ಪ್ಲಾಸ್ಮಾ ತೆರಪಿ ನೀಡಬಹುದಾಗಿತ್ತು. ಆದರೆ ದೇಶಾದ್ಯಂತ ಯಾವುದೇ ಮಾನದಂಡ ಬಳಸದೇ ಪ್ಲಾಸ್ಮಾ ಚಿಕಿತ್ಸೆ ನೀಡುತ್ತಿರುವ ಕುರಿತು ಭಾರೀ ಪ್ರಮಾಣದ ದೂರುಗಳು ಸಲ್ಲಿಕೆಯಾಗಿದ್ದವು.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona