ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವಿಚಾರವಾಗಿ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಈ ಕಾರ್ಯಕ್ರಮವನ್ನು ನಿಲ್ಲಿಸುವಂತೆ ಮನವಿ ಮಾಡಲಾಗಿದೆ.
ನವದೆಹಲಿ (ಜ.17): ಅಯೋಧ್ಯೆಯಲ್ಲಿ ವೈಭವವಾಗಿ ನಿರ್ಮಾಣ ಮಾಡಲಾಗಿರುವ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜನವರಿ 22ಕ್ಕೆ ನಿಗದಿಯಾಗಿದೆ. ಇದರ ನಡುವೆ ಈ ಸಮಾರಂಭಕ್ಕೆ ತಡೆ ನೀಡಬೇಕು ಎಂದು ಆಗ್ರಹಿಸಿ ಅಲಹಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗಿದೆ. ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹೈಕೋರ್ಟ್ ತಡೆ ನೀಡಬೇಕು ಎಂದು ಆಗ್ರಹಿಸಲಾಗಿದೆ. ಉತ್ತರ ಪ್ರದೇಶದ ಗಾಜಿಯಾಬಾದ್‌ನ ನಿವಾಸಿ ಭೋಲಾದಾಸ್ ಈ ಅರ್ಜಿಯನ್ನು ದಾಖಲು ಮಾಡಿದ್ದಾರೆ. ಇವರು ಸಲ್ಲಿಸಿರುವ ಅರ್ಜಿಯ ಪ್ರಕಾರ, ಹಿಂದು ಕ್ಯಾಲೆಂಡರ್‌ನ ಪ್ರಕಾರ, ಪುಷ್ಯಮಾಸದಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಇದನ್ನು ಮೀರಿ ಇಲ್ಲಿ ಕಾರ್ಯಕ್ರಮ ಮಾಡಲಾಗುತ್ತಿದೆ. ಶಂಕರಾಚಾರ್ಯ ಪೀಠಗಳ ಸ್ವಾಮೀಜಿಗಳು ಕೂಡ ಇದೇ ಅಭಿಪ್ರಾಯ ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಅದಲ್ಲದೆ, ಶ್ರೀರಾಮ ಮಂದಿರದ ನಿರ್ಮಾಣ ಕಾಮಗಾರಿ ಇನ್ನೂ ನಡೆಯುತ್ತಿದೆ. ಅಪೂರ್ಣ ಮಂದಿರದಲ್ಲಿ ಯಾವುದೇ ದೇವರ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ. ಇದು ಸನಾತನ ಸಂಪ್ರದಾಯಕ್ಕೆ ವಿರುದ್ಧವಾಗಿದೆ ಎಂದು ತಿಳಿಸಲಾಗಿದೆ.
ಏನಿದು ವಿಸ್ಮಯ! 57 ವರ್ಷ ಹಿಂದೆಯೇ ನೇಪಾಳದ ಅಂಚೆಚೀಟಿಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆಯ ವರ್ಷ ಪ್ರಕಟ!
"ಜನವರಿ 22, 2024 ರಂದು ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ನಿರ್ಮಾಣ ಹಂತದಲ್ಲಿರುವ ದೇವಾಲಯದಲ್ಲಿ ರಾಮಲಲ್ಲಾನ ವಿಗ್ರಹವನ್ನು ಸ್ಥಾಪನೆ ಮಾಡುತ್ತಿದ್ದಾರೆ. ಸಮಾರಂಭವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವೇರಿಸಲಿದ್ದಾರೆ. ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಶಂಕರಾಚಾರ್ಯರ ಆಕ್ಷೇಪವಿದೆ... ದೇವಾಲಯ ಇನ್ನೂ ಅಪೂರ್ಣವಾಗಿದೆ. ಅಪೂರ್ಣ ಮಂದಿರದಲ್ಲಿ ಯಾವುದೇ ದೇವರನ್ನು ಪ್ರತಿಷ್ಠಾಪಿಸಲು ಸಾಧ್ಯವಿಲ್ಲ,’’ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹೆಚ್ಚುವರಿಯಾಗಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭಕ್ಕಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಅದು ಆರೋಪಿಸಿದೆ.
ಅಯೋಧ್ಯೆಯಲ್ಲಿ ಇಂದಿನ ಕಾರ್ಯಕ್ರಮ ಏನು: ಶ್ರೀರಾಮನ ಬಗ್ಗೆ ವಿಡಿಯೋ ಮಾಡಿ ಹಂಚಿಕೊಳ್ಳಿ: ಟ್ರಸ್ಟ್
