Asianet Suvarna News Asianet Suvarna News

ರಾಷ್ಟ್ರೀಯ ಪುರುಷ ಆಯೋಗವನ್ನು ರಚಿಸಿ, ಪತ್ನಿ ಪೀಡಿತರಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ!

ದೇಶದಲ್ಲಿ ವಿವಾಹಿತ ಪುರುಷರ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ದೇಶದಲ್ಲಿ ರಾಷ್ಟ್ರೀಯ ಪುರುಷರ ಆಯೋಗವನ್ನು ರಚನೆ ಮಾಡಬೇಕು ಎಂದು ಆಗ್ರಹಿಸಿ ಪತ್ನಿ ಪೀಡಿತರಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಅದಕ್ಕೆ ಸೂಕ್ತ ಅಂಕಿ-ಅಂಶದ ದಾಖಲೆಯನ್ನೂ ನೀಡಲಾಗಿದೆ.

Plea In SC Seeks National Commission For Men Suicide By Married Males san
Author
First Published Mar 15, 2023, 4:20 PM IST

ನವದೆಹಲಿ (ಮಾ.15): ಮನೆಯಲ್ಲಿ ಪತ್ನಿಯಿಂದ ಅತಿಯಾದ ಹಿಂಸೆ ಆಗುತ್ತಿದೆ. ಕೌಟುಂಬಿಕ ದೌರ್ಜನ್ಯದಿಂದಾಗಿ ವಿವಾಹಿತ ಪುರುಷರ ಆತ್ಮಹತ್ಯೆಗಳ ಸಂಖ್ಯೆಯಲ್ಲಿ ಏರಿಕೆ ಆಗುತ್ತಿದೆ. ಈ ರೀತಿಯ ಹಿಂಸಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ಪುರುಷ ಆಯೋಗವನ್ನು ರಚನೆ ಮಾಡುವಂತೆ ಪತ್ನಿ ಪೀಡಿತರಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.  ವಕೀಲ ಮಹೇಶ್ ಕುಮಾರ್ ತಿವಾರಿ ಅವರ ಮೂಲಕ ಅರ್ಜಿಯನ್ನು ಸಲ್ಲಿಸಲಾಗಿದೆ. ಮನವಿಯಲ್ಲಿ 2021 ರಲ್ಲಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಭಾರತದಲ್ಲಿ ಆಕಸ್ಮಿಕ ಸಾವುಗಳ ಕುರಿತು ಪ್ರಕಟಿಸಿದ ಡೇಟಾವನ್ನು ಉಲ್ಲೇಖಿಸಿ, ಆ ವರ್ಷದಲ್ಲಿ ದೇಶಾದ್ಯಂತ 1,64,033 ಜನರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಈ ಸಾವುಗಳಲ್ಲಿ 81,063 ಪ್ರಕರಣದಲ್ಲಿ ವಿವಾಹಿತ ಪುರುಷರ ಸಾವು ಕಂಡಿದ್ದಾರೆ. ಇದಕ್ಕೆ ಹೋಲಿಸಿದರೆ, 28,680 ವಿವಾಹಿತ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.  "2021 ರಲ್ಲಿ ಸುಮಾರು 33.2 ಪ್ರತಿಶತ ಪುರುಷರು ಕೌಟುಂಬಿಕ ಸಮಸ್ಯೆಗಳಿಂದಾಗಿ ಮತ್ತು ಶೇಕಡಾ 4.8 ರಷ್ಟು ವಿವಾಹ ಸಂಬಂಧಿತ ಸಮಸ್ಯೆಗಳಿಂದಾಗಿ ತಮ್ಮ ಜೀವನವನ್ನು ಕೊನೆಗೊಳಿಸಿದ್ದಾರೆ. ಈ ವರ್ಷದಲ್ಲಿ ಒಟ್ಟು 1,18,979 ಪುರುಷರು (ಶೇ 72) ಮತ್ತು ಒಟ್ಟು 45,026 ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 27 ರಷ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ," ಎನ್‌ಸಿಆರ್‌ಬಿ ನೀಡಿದ ಡೇಟಾವನ್ನು ಉಲ್ಲೇಖಿಸಿ ಅರ್ಜಿಯಲ್ಲಿ ತಿಳಿಸಲಾಗಿದೆ.

ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆಯನ್ನು ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಿರ್ದೇಶನವನ್ನು ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ."ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾದವರ ದೂರನ್ನು ಸ್ವೀಕರಿಸಲು/ ಸ್ವೀಕರಿಸಲು ಪ್ರತಿ ಪೊಲೀಸ್ ಠಾಣೆಯ ಪೊಲೀಸ್ ಪ್ರಾಧಿಕಾರಕ್ಕೆ/ ಸ್ಟೇಷನ್ ಹೌಸ್ ಆಫೀಸರ್‌ಗೆ ಗೃಹ ಸಚಿವಾಲಯದ ಮೂಲಕ ಸರಿಯಾದ ಮಾರ್ಗಸೂಚಿಗಳನ್ನು ನೀಡಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು.

ಗಂಡಂದಿರ ಗೋಳು ಕೇಳೋರು ಯಾರು?: ಪುರುಷ ಸಮಾಜಕ್ಕಿನ್ನು ಉಳಿಗಾಲವಿಲ್ಲ

ಕೌಟುಂಬಿಕ ಸಮಸ್ಯೆಗಳು ಮತ್ತು ಮದುವೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಒತ್ತಡದಲ್ಲಿರುವ ಪುರುಷರ ಹಿತರಕ್ಷಣೆಗೆ ಭಾರತ ಸರ್ಕಾರದಿಂದ ಸರಿಯಾದ ಕಾನೂನು ಜಾರಿಗೆ ಬರುವವರೆಗೆ ಅದನ್ನು ಸರಿಯಾದ ವಿಲೇವಾರಿಗಾಗಿ ರಾಜ್ಯ ಮಾನವ ಹಕ್ಕು ಆಯೋಗಕ್ಕೆ ಈ ಜವಾಬ್ದಾರಿಯನ್ನು ನೀಡಬೇಕು ಎಂದು ಮನವಿ ಮಾಡಲಾಗಿದೆ.

ಮಹಿಳೆಗೆ ಗೊತ್ತಿದ್ದ ಸಂಬಂಧಿಗಳೇ ರೇಪ್‌ ಮಾಡ್ತಾರೆ, ಇಂದಿನ ಅರ್ಧಕ್ಕರ್ಧ ರೇಪ್‌ ಕೇಸ್‌ಗಳು ಸುಳ್ಳು: ಅಶೋಕ್‌ ಗೆಹ್ಲೋಟ್

"ಕೌಟುಂಬಿಕ ಹಿಂಸಾಚಾರ ಅಥವಾ ಕೌಟುಂಬಿಕ ಸಮಸ್ಯೆ ಮತ್ತು ವಿವಾಹ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವಿವಾಹಿತ ಪುರುಷರ ಆತ್ಮಹತ್ಯೆಯ ವಿಷಯದ ಬಗ್ಗೆ ಸಂಶೋಧನೆ ನಡೆಸಲು ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ರೀತಿಯ ರಾಷ್ಟ್ರೀಯ ಪುರುಷರ ಆಯೋಗ ವೇದಿಕೆಯನ್ನು ರಚಿಸುವ ಸಲುವಾಗಿ ಅಗತ್ಯ ವರದಿಯನ್ನು ಮಾಡಲು ಭಾರತದ ಕಾನೂನು ಆಯೋಗಕ್ಕೆ ನಿರ್ದೇಶನ/ಶಿಫಾರಸು ನೀಡಬೇಕು" ಎಂದು ಮನವಿಯಲ್ಲಿ ತಿಳಿಸಲಾಗಿದೆ.

Follow Us:
Download App:
  • android
  • ios