yfಬಲಿಯಾ(ಅ.27): ಚೀನಾ ಮತ್ತು ಪಾಕಿಸ್ತಾನದೊಂದಿಗೆ ಭಾರತ ಯಾವಾಗ ಯುದ್ಧ ಮಾಡಬೇಕು ಎಂಬ ದಿನಾಂಕವನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ನಿರ್ಧರಿಸಿದ್ದಾರೆ ಎಂದು ಉತ್ತರಪ್ರದೇಶದ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್‌ ಸಿಂಗ್‌ ಹೇಳಿದ್ದಾರೆ.

ಭಾರತ-ಚೀನಾ ನಡುವೆ ಗಡಿ ವಿಚಾರವಾಗಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವಾಗಲೇ ಬಿಜೆಪಿ ನಾಯಕ ಈ ರೀತಿಯ ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ಮತ್ತು ಜಮು-ಕಾಶ್ಮೀರದಲ್ಲಿ 370ನೇ ವಿಧಿಯ ರದ್ದು ನಿರ್ಧಾರಗಳಂತೆ, ಪಾಕಿಸ್ತಾನ ಮತ್ತು ಚೀನಾದೊಂದಿಗೆ ಯಾವಾಗ ಯುದ್ಧ ನಡೆಯಲಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ದೇವ್‌ ಅವರು ಹೇಳಿದ್ದಾರೆ.

ಬಿಜೆಪಿ ಶಾಸಕ ಸಂಜ ಯಾದವ್‌ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಂಗ್‌ ನೀಡಿರುವ ಹೇಳಿಕೆಯ ವಿಡಿಯೋ ಬಿಡುಗಡೆಯಾಗಿದೆ.